ಬಳ್ಳಾರಿ: ಕೊಪ್ಪಳದ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ (Janardhana Reddy) ಮನೆ ಮುಂದೆ ಬ್ಯಾನರ್ ವಿಚಾರಕ್ಕೆ ಗಲಾಟೆ ನಡೆದು ಕಲ್ಲು ತೂರಾಟ (Stone Pelting) ನಡೆದಿದೆ.
ಜನವರಿ 3 ರಂದು ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬಳ್ಳಾರಿಯ ಹವಂಬಾವಿ ನಗರದಲ್ಲಿರುವ ಜನಾರ್ದನ ರೆಡ್ಡಿ ಮನೆ ಮುಂಭಾಗ ಬ್ಯಾನರ್ ಅಳವಡಿಕೆ ಮಾಡಲು ಒಂದು ಗುಂಪು ಮುಂದಾಗಿತ್ತು.
ಈ ವೇಳೆ ಬ್ಯಾನರ್ ಹಾಕದಂತೆ ರೆಡ್ಡಿ ಅಪ್ತರು ಅಡ್ಡಿ ಪಡಿಸಿದ್ದಾರೆ. ಈ ವೇಳೆ ಮಾತಿನ ಚಕಮಕಿ ನಡೆದು ಪರಸ್ಪರ ಕಲ್ಲು ತೂರಿದ್ದಾರೆ. ಉದ್ವಿಗ್ನ ವಾತಾವರಣ ನಿರ್ಮಾಣವಾದ ಬೆನ್ನಲ್ಲೇ ಸ್ಥಳಕ್ಕೆ ಮಾಜಿ ಸಚಿವ ಶ್ರೀರಾಮುಲು (Sriramulu) ಆಗಮಿಸಿದ್ದಾರೆ. ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ (Nara Bharath Reddy) ಆಪ್ತ ಸತೀಶ್ ರೆಡ್ಡಿ ಕೂಡಾ ಘಟನಾ ಸ್ಥಳಕ್ಕೆ ಬಂದಿದ್ದಾರೆ. ಇದನ್ನೂ ಓದಿ: ನೈಸ್‌ಗೆ ಹೇಗೆ ಪಾಠ ಕಲಿಸಬೇಕು ಅನ್ನೋದು ಗೊತ್ತಿದೆ: ಅಶೋಕ್ ಖೇಣಿಗೆ ಡಿಕೆಶಿ ವಾರ್ನಿಂಗ್
ಎರಡೂ ಕಡೆ ನಾಯಕರು ಜಮಾವಣೆಯಾದ ಕೂಡಲೇ ತಳ್ಳಾಟ, ನೂಕಾಟ ನಡೆದಿದೆ. ಗಲಾಟೆ ವೇಳೆ ಶ್ರೀರಾಮುಲು ಅವರನ್ನು ಗುಂಪು ತಳ್ಳಿದೆ. ಗಲಾಟೆಯಾಗುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಲಾಠಿ ಪ್ರಹಾರ ಮಾಡಿ ಪರಿಸ್ಥಿತಿ ನಿಯಂತ್ರಣ ಮಾಡಲು ಪ್ರಯತ್ನಿಸಿದ್ದಾರೆ. ಜನಾರ್ದನ ರೆಡ್ಡಿ ಮನೆ ಮುಂದೆ ಬಿಜೆಪಿ ಕಾರ್ಯಕರ್ತರು, ಮುಖಂಡರು, ಜಮಾಯಿಸುತ್ತಿದ್ದಾರೆ.

