ಲಕ್ನೋ: ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಯಯನ್ನು ಹತ್ಯೆ ಮಾಡಿದ 18 ವರ್ಷದ ಯುವತಿಯೊಬ್ಬಳು ಹತ್ಯೆ ಮಾಡಿರುವುದು ಉತ್ತರ ಪ್ರದೇಶದ ಬಂದಾ ಜಿಲ್ಲೆಯ ಮುರ್ವಾಲ್ ಗ್ರಾಮದಲ್ಲಿ ನಡೆದಿದೆ. ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸುಖರಾಜ್ ಪ್ರಜಾಪತಿ (50) ಎಂಬಾತ ಯುವತಿಯ ಅತ್ಯಾಚಾರಕ್ಕೆ ಯತ್ನಿಸಿದ್ದ. ಆತನಿಂದ ರಕ್ಷಣೆ ಪಡೆಯಲು ಹರಿತವಾದ ಆಯುಧದಿಂದ ಯುವತಿ ದಾಳಿ ಮಾಡಿದ್ದಳು. ಆತನ ತಲೆಗೆ ಗಂಭೀರವಾಗಿ ಗಾಯವಾಗಿ, ಸ್ಥಳದಲ್ಲೇ ಸಾವಿಗೀಡಾಗಿದ್ದ. ಆತನ ಶವವನ್ನು ವಶಕ್ಕೆ ಪಡೆಯಲಾಗಿದೆ ಎಂದು ಸ್ಟೇಷನ್ ಹೌಸ್ ಆಫೀಸರ್ (ಎಸ್‌ಹೆಚ್‌ಒ) ರಾಜೇಂದ್ರ ಸಿಂಗ್ ರಾಜವತ್ ತಿಳಿಸಿದ್ದಾರೆ. ಇದನ್ನೂ ಓದಿ: ವಿದ್ಯಾರ್ಥಿನಿ ಸಾವಿನ ಬಳಿಕ ಲೆಕ್ಚರ್‌ನ ಕ್ರೌರ್ಯ ಬಯಲು – ದೌರ್ಜನ್ಯದ ಬಗ್ಗೆ ವಿಡಿಯೋ ಮಾಡಿಟ್ಟಿದ್ದ ಯುವತಿ!
ಸುಖರಾಜ್ ಪ್ರಜಾಪತಿ ಕುಟುಂಬದ ಸದಸ್ಯರು ನೀಡಿದ ದೂರಿನ ಆಧಾರದ ಮೇಲೆ, ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿಕೊಂಡು ಯುವತಿಯನ್ನು ಬಂಧಿಸಲಾಗಿದೆ. ಹಲ್ಲೆಗೆ ಬಳಸಿದ ಆಯುಧವನ್ನು ವಶಕ್ಕೆ ಪಡೆಯಲಾಗಿದೆ.
ವಿಚಾರಣೆಯ ಸಮಯದಲ್ಲಿ, ಆ ವ್ಯಕ್ತಿ ತನ್ನ ಮನೆಗೆ ನುಗ್ಗಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ್ದ. ತನ್ನನ್ನು ತಾನು ರಕ್ಷಿಸಿಕೊಳ್ಳುವ ಪ್ರಯತ್ನದಲ್ಲಿ, ಮನೆಯಲ್ಲಿ ಇರಿಸಲಾಗಿದ್ದ ‘ಫರ್ಸಾ’ದಿಂದ ಆತನಿಗೆ ಹೊಡೆದೆ. ಇದರಿಂದಾಗಿ ಆತ ಸಾವನ್ನಪ್ಪಿದ್ದಾನೆ ಎಂದು ಮಹಿಳೆ ಹೇಳಿದ್ದಾಳೆ. ಇದನ್ನೂ ಓದಿ: ಹೊಸ ವರ್ಷಕ್ಕೆ ಸ್ವೀಟ್ ಕೊಡ್ತೀನಿ ಅಂತ ಕರೆಸಿ ಪ್ರಿಯಕರನ ಖಾಸಗಿ ಅಂಗವನ್ನೇ ಕತ್ತರಿಸಿದ ಮಹಿಳೆ!

