Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿಯವರಿಗೆ ಗಾಂಧೀಜಿ ಬಗ್ಗೆ ಮಾತಾಡುವ, ಪ್ರತಿಮೆ ಬಳಿ ಪ್ರತಿಭಟಿಸುವ ನೈತಿಕ ಹಕ್ಕಿಲ್ಲ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಜೆಪಿಯವರಿಗೆ ಗಾಂಧೀಜಿ ಬಗ್ಗೆ ಮಾತಾಡುವ, ಪ್ರತಿಮೆ ಬಳಿ ಪ್ರತಿಭಟಿಸುವ ನೈತಿಕ ಹಕ್ಕಿಲ್ಲ: ಡಿಕೆಶಿ

Bengaluru City

ಬಿಜೆಪಿಯವರಿಗೆ ಗಾಂಧೀಜಿ ಬಗ್ಗೆ ಮಾತಾಡುವ, ಪ್ರತಿಮೆ ಬಳಿ ಪ್ರತಿಭಟಿಸುವ ನೈತಿಕ ಹಕ್ಕಿಲ್ಲ: ಡಿಕೆಶಿ

Public TV
Last updated: January 3, 2026 4:25 pm
Public TV
Share
5 Min Read
DK Shivakumar 11
SHARE

ಬೆಂಗಳೂರು: ಬಿಜೆಪಿ (BJP) ನಾಯಕರು ಗಾಂಧೀಜಿ ಬಗ್ಗೆ ಮಾತನಾಡುವ ನೈತಿಕ ಹಕ್ಕು ಕಳೆದುಕೊಂಡಿದ್ದಾರೆ. ತಮ್ಮ ಕಚೇರಿಗಳಲ್ಲಿ ಗಾಂಧೀಜಿ (Mahatma Gandhi) ಅವರ ಫೋಟೋ ಇಟ್ಟುಕೊಳ್ಳುವ ಯೋಗ್ಯತೆ ಕೂಡ ಅವರು ಉಳಿಸಿಕೊಂಡಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹರಿಹಾಯ್ದರು.

ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಜೊತೆ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರು ಇನ್ನು ಮುಂದೆ ಮಹಾತ್ಮಾ ಗಾಂಧಿ ಅವರ ಪ್ರತಿಮೆ ಮುಂದೆ ಕೂತು ಹೋರಾಟ ಮಾಡುವ ಹಕ್ಕನ್ನು ಕಳೆದುಕೊಂಡಿದ್ದಾರೆ. ಮಹಾತ್ಮಾ ಗಾಂಧಿ ಅವರ ಫೋಟೋಗಳನ್ನು ತಮ್ಮ ಕಚೇರಿಗಳಲ್ಲಿ ಹಾಕಿಕೊಳ್ಳುವ ಅರ್ಹತೆಯನ್ನು ಕಳೆದುಕೊಂಡಿದ್ದಾರೆ. ಅವರ ಫೋಟೋ ಹಾಕಿಕೊಳ್ಳುವ ಯೋಗ್ಯತೆ ನಿಮಗಿಲ್ಲ. ಅವರ ಹೆಸರನ್ನು ಯೋಜನೆಯಿಂದ ತೆಗೆದ ಮೇಲೆ ನಿಮಗೆ ಯಾವ ನೈತಿಕತೆ ಇದೆ? ನೀವು ಮಹಾತ್ಮಾ ಗಾಂಧಿ ಬಗ್ಗೆ ಮಾತನಾಡುವ ಹಾಗೂ ಅವರ ಪ್ರತಿಮೆಗೆ ಹೂವಿನ ಹಾರ ಹಾಕುವ ಹಕ್ಕೂ ಇಲ್ಲ. ನಿಮ್ಮ ಬಳಿ ಇರುವ ಮಹಾತ್ಮಾ ಗಾಂಧೀಜಿ ಅವರ ಫೋಟೋಗಳನ್ನು ನಮಗೆ ಕೊಟ್ಟುಬಿಡಿ, ನಾವು ಅವುಗಳನ್ನು ನಮ್ಮ ಹಾಗೂ ಗಾಂಧಿಜಿಯನ್ನು ಗೌರವಿಸುವ ಮನೆಯಲ್ಲಿ ಇಟ್ಟುಕೊಳ್ಳುತ್ತೇವೆ ಎಂದರು. ಇದನ್ನೂ ಓದಿ: ಬೆಟಗೇರಿ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲೇ ಡಿ ಗ್ರೂಪ್‌ ನೌಕರ ಆತ್ಮಹತ್ಯೆ

ಮಹಾತ್ಮಾ ಗಾಂಧೀಜಿ ಅವರು ಈ ದೇಶದ ಸ್ವಾತಂತ್ರ‍್ಯಕ್ಕಾಗಿ ಹೋರಾಟ ಮಾಡಲು ನೇತೃತ್ವ ವಹಿಸಿ ನೂರು ವರ್ಷಗಳು ತುಂಬಿವೆ. ಇಂತಹ ಸಂಭ್ರಮಾಚರಣೆ ವೇಳೆ ಅವರ ಹೆಸರನ್ನು ತೆಗೆದು, ಮತ್ತೊಮ್ಮೆ ಅವರ ಕೊಲೆ ಮಾಡುತ್ತಿದ್ದೀರಲ್ಲಾ, ಈ ದೇಶದಲ್ಲಿ ಇದಕ್ಕಿಂತ ದೊಡ್ಡ ಅಪಮಾನ ಬೇರೊಂದಿಲ್ಲ ಎಂದು ಹೇಳಿದರು. ಇದನ್ನೂ ಓದಿ: 6,6,6,6,6,4 – ಒಂದೇ ಓವರ್‌ನಲ್ಲೇ 34 ರನ್‌ ಚಚ್ಚಿ ಶತಕ; ಪಾಂಡ್ಯ ಬೆಂಕಿ ಆಟಕ್ಕೆ ವಿದರ್ಭ ಸುಸ್ತು!

ರಾಜ್ಯದ ಕೂಲಿ ಕಾರ್ಮಿಕರ ಬದುಕು ಹಾಗೂ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಮಾರಕವಾಗಿರುವ ವಿಬಿ ಜಿ ರಾಮ್ ಜಿ (VB-G RAM G) ಮಸೂದೆಯನ್ನು ಕೇಂದ್ರ ಸರ್ಕಾರ ಹಿಂಪಡೆಯುವವರೆಗೂ ಪಕ್ಷತೀತವಾಗಿ ಆಂದೋಲನ ರೂಪಿಸಲಾಗುವುದು. ಈ ಮಸೂದೆ ವಿರುದ್ಧದ ಹೋರಾಟ ಕೇವಲ ಪಕ್ಷ ಅಥವಾ ಸರ್ಕಾರಕ್ಕೆ ಮಾತ್ರ ಸೀಮಿತವಲ್ಲ. ಪ್ರತಿ ಪಂಚಾಯ್ತಿಯಲ್ಲಿ ಪ್ರತಿಯೊಬ್ಬರನ್ನು ಆಹ್ವಾನ ನೀಡಿ ನಮ್ಮ ನಾಯಕರು ಸೇರಿ ಸಮಾವೇಶ ಹಾಗೂ ಗ್ರಾಮ ಸಭೆ ನಡೆಸುತ್ತೇವೆ. ಅಲ್ಲಿ ಇದರ ಬಗ್ಗೆ ಚರ್ಚೆ ಮಾಡುತ್ತೇವೆ. ನಂತರ ತಾಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಹೋರಾಟ ಮಾಡುತ್ತೇವೆ. ಕೇಂದ್ರ ಸರ್ಕಾರ ಹೇಗೆ ಕೃಷಿ ಕರಾಳ ಕಾಯ್ದೆ ಹಿಂಪಡೆಯಿತೋ ಅದೇ ರೀತಿ ಈ ಮಸೂದೆಯನ್ನು ಹಿಂಪಡೆಯುವಂತೆ ಮಾಡಲು ಆಂದೋಲನ ಮಾಡುತ್ತೇವೆ. ಪಕ್ಷಬೇಧ ಮರೆತು ನಮ್ಮ ಹೋರಾಟ ರೂಪಿಸುತ್ತೇವೆ ಎಂದು ಹೇಳಿದರು.  ಇದನ್ನೂ ಓದಿ: ಮನರೇಗಾ ಕಾಯ್ದೆ ಬದಲಾವಣೆ ಮಾಡಿ ಹಳ್ಳಿ ಅಧಿಕಾರವನ್ನ ಮೋದಿ ದಿಲ್ಲಿಗೆ ಕಸಿದುಕೊಂಡಿದ್ದಾರೆ: ಸಿದ್ದರಾಮಯ್ಯ

ಕಳೆದ 20 ವರ್ಷಗಳಿಂದ ಹಳ್ಳಿ ಜನ ತಮ್ಮ ಬೆವರು ಸುರಿಸಿ ತಮ್ಮ ಹಳ್ಳಿಗಳ ಅಭಿವೃದ್ಧಿ ಮಾಡುವ ಪ್ರಯತ್ನಕ್ಕೆ ಅಂತ್ಯ ಹಾಡಲಾಗುತ್ತಿದೆ. ಕೇಂದ್ರ ಸರ್ಕಾರದ ಹೊಸ ಮಸೂದೆ ನಮ್ಮ ಕರಾವಳಿ ಭಾಗದ ಮೀನುಗಾರರಿಗೂ ಅನ್ಯಾಯವಾಗಲಿದೆ. ಮನರೇಗಾ ಯೋಜನೆಯಲ್ಲಿ ಮೀನುಗಾರರಿಗೂ ಕೂಲಿ ಪಡೆಯುವ ಅವಕಾಶವಿತ್ತು. ಇದನ್ನೂ ಕಸಿಯಲಾಗಿದೆ. ರಾಜ್ಯ ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ವಿಬಿ ಜಿ ರಾಮ್ ಜಿ ಯೋಜನೆಯನ್ನು ಸರಿ ಎಂದು ಸ್ವಾಗತಿಸುತ್ತಿಲ್ಲ, ತಪ್ಪು ಎಂದು ವಿರೋಧ ಮಾಡುತ್ತಿಲ್ಲ. ಈ ವಿಚಾರದಲ್ಲಿ ಮೌನ ವಹಿಸಿದ್ದಾರೆ ಯಾಕೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ದೇಶದ ಮೊದಲ ಹೈಡ್ರೋಜನ್ ರೈಲು ಚಾಲನೆಗೆ ದಿನಗಣನೆ; ಏನಿದರ ವಿಶೇಷತೆ?

ಮನರೇಗಾ ಪ್ರತಿ ಕೂಲಿ ಕಾರ್ಮಿಕರ ಕುಟುಂಬಕ್ಕೆ ಶಕ್ತಿ ತುಂಬಿತ್ತು. ಇಂದಿರಾ ಆವಾಸ್, ರಾಜ್ಯ ಹಾಗೂ ಕೇಂದ್ರ ವಸತಿ ಯೋಜನೆ ಸೇರಿದಂತೆ ವಿವಿಧ ವಸತಿ ಯೋಜನೆಗಳಲ್ಲಿ ತಾನು ತನ್ನ ಮನೆ ಕಟ್ಟಿಕೊಳ್ಳಲು ಮನರೇಗಾ ಯೋಜನೆ ಕೂಲಿ ನೀಡುತ್ತಿತ್ತು. ರೈತರು ತಮ್ಮದೇ ಜಮೀನನ್ನು ಮಟ್ಟು ಮಾಡಿಕೊಳ್ಳಲು, ಇಂಗು ಗುಂಡಿ ನಿರ್ಮಿಸಲು, ವಿವಿಧ ಬೆಳೆ ಹಾಕಲು ಮನರೇಗಾ ಯೋಜನೆಯಲ್ಲಿ ಕೂಲಿ ಪಡೆದುಕೊಳ್ಳಬಹುದಾಗಿತ್ತು. ಇದು ತೋಟಗಾರಿಗೆ, ರೇಷ್ಮೆ ಮೂಲಕ ಜೀವನೋಪಾಯಕ್ಕೆ ದಾರಿ ಮಾಡಿಕೊಳ್ಳಲಾಗಿತ್ತು. ಈಗ ವಿಬಿ ಜಿ ರಾಮ್ ಜಿ ಯೋಜನೆಯಲ್ಲಿ ಇಂದಿರಾ ಅವಾಸ್, ರಾಜ್ಯ ಹಾಗೂ ಕೇಂದ್ರ ಅವಾಸ್ ಯೋಜನೆಗಳ ಮನೆ ನಿರ್ಮಾಣಕ್ಕೆ ನೀಡಲಾಗುತ್ತಿದ್ದ ಕೂಲಿಯನ್ನು ತೆಗೆದುಹಾಕಲಾಗಿದೆ. ಕೇವಲ ಪ್ರಧಾನಮಂತ್ರಿ ಅವಾಸ್ ಯೋಜನೆ ಮಾತ್ರ ಅವಕಾಶ ನೀಡಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ʻರಿಪಬ್ಲಿಕ್ ಆಫ್ ಬಳ್ಳಾರಿʼ ಮಾಡಿದ್ದೇ ಬಿಜೆಪಿ, ನಮ್ಗೆ ಪಾಠ ಹೇಳೋದು ಬೇಡ – ಪ್ರಿಯಾಂಕ್‌ ಖರ್ಗೆ ಸಿಡಿಮಿಡಿ

ಇನ್ನು ದನದ ಕೊಟ್ಟಿಗೆ, ಹಂದಿ, ಕುರಿ ಶೆಡ್ ಸೇರಿದಂತೆ ಮೂಲಸೌಕರ್ಯ ನಿರ್ಮಾಣಕ್ಕೆ ಮನರೇಗಾದಲ್ಲಿ ಯೋಜನೆ ರೂಪಿಸಲಾಗಿತ್ತು. ಮಾಧ್ಯಮಗಳಿಗೆ ವಾಹನ ವ್ಯವಸ್ಥೆ ಮಾಡಿಕೊಡುತ್ತೇನೆ. ಬೇಕಾದರೆ ನಮ್ಮ ಕನಕಪುರ ತಾಲೂಕಿಗೆ ಹೋಗಿ ನೋಡಿ. ಇಡೀ ದೇಶದಲ್ಲಿ ಅತಿ ಹೆಚ್ಚು ನರೇಗಾ ಯೋಜನೆ ಅನುದಾನ ಬಳಸಿದ ತಾಲೂಕು ನಮ್ಮದು. ನಾವು ಈ ಯೋಜನೆಯಲ್ಲಿ ವಂಚನೆ ಮಾಡಿದ್ದೇವೆ ಎಂದು ಕೇಂದ್ರ ದಿಂದ ಸುಮಾರು ಹತ್ತು ತಂಡಗಳನ್ನು ಕಳುಹಿಸಿ ತನಿಖೆ ಮಾಡಿಸಿದ್ದರು. ನಾವು ಅರ್ಕಾವತಿ ನದಿಗೆ ಚೆಕ್ ಡ್ಯಾಂ ನಿರ್ಮಿಸಿದ್ದೇವೆ. 50 ಸಾವಿರ ದನದ ಕೊಟ್ಟಿಗೆ ಕಟ್ಟಿಸಿದ್ದೇವೆ. ಪಂಚಾಯ್ತಿ ಕಟ್ಟಡ, ಉದ್ಯಾನವನ, ಆಟದ ಮೈದಾನ ನಿರ್ಮಿಸಿದ್ದೇವೆ. ಇದೆಲ್ಲವನ್ನು ನೋಡಿ, ತಮ್ಮ ಮತಬ್ಯಾಂಕಿಗೆ ಧಕ್ಕೆಯಾಗುತ್ತದೆ. ಎಂದು ಪಂಚಾಯ್ತಿಗಳು ಹಾಗೂ ಪಂಚಾಯ್ತಿ ಸದಸ್ಯರಿಗೆ ಕೊಟ್ಟಂತಹ ಅಧಿಕಾರವನ್ನು ಕೇಂದ್ರ ಸರ್ಕಾರ ಕಸಿದುಕೊಂಡಿದೆ ಎಂದು ಹರಿಹಾಯ್ದರು. ಇದನ್ನೂ ಓದಿ: Ballari Clash | ಕಾಂಗ್ರೆಸ್‌ ಕಾರ್ಯಕರ್ತನ ಕೊಲೆಗೆ ಬಿಜೆಪಿಯೇ ಕಾರಣ – ಡಿಕೆಶಿ

ನೀವೂ ಹಾವೇರಿ ಜಿಲ್ಲೆಗೆ ಹೋಗಿ ನೋಡಿ, ಪ್ರತಿ ತಾಲೂಕಿನಲ್ಲಿ 5-10 ಸಾವಿರ ಇಂಗುಗುಂಡಿಗಳನ್ನು ನಿರ್ಮಿಸಲಾಗಿದೆ. ಈ ಯೋಜನೆ ಇಡೀ ದೇಶದ ಗ್ರಾಮೀಣ ಅಭಿವೃದ್ಧಿಗೆ ಮಾರಕವಾಗಿದೆ. ಗ್ರಾಮೀಣ ಪ್ರದೇಶದ ಬದುಕಿಗೆ ಮಾರಕವಾದ ಮತ್ತೊಂದು ಮಸೂದೆ ಬೇರೊಂದಿಲ್ಲ. ರಾಜೀವ್ ಗಾಂಧಿ ಅವರು ಪಂಚಾಯ್ತಿಗಳಿಗೆ ಶಕ್ತಿ ತುಂಬಲು ಸಂವಿಧಾನಕ್ಕೆ 73, 74ನೇ ತಿದ್ದುಪಡಿ ತರುವಾಗ ನಮ್ಮ ರಾಜ್ಯಕ್ಕೆ ಬಂದು ವಿಚಾರ ಸಂಕೀರ್ಣ ನಡೆಸಿದ್ದರು. ಮನಮೋಹನ್ ಸಿಂಗ್ ಅವರು ಹಣಕಾಸು ಸಚಿವರಾಗಿದ್ದಾಗ ನಮ್ಮಲ್ಲಿ ಬೇಲೂರು ನಿರ್ಣಯ ಕೈಗೊಳ್ಳಲಾಯಿತು. 25 ಇಲಾಖೆಗಳಲ್ಲಿ ಪಂಚಾಯ್ತಿಗಳಿಗೆ ಶಕ್ತಿ ತುಂಬಲು ತೀರ್ಮಾನ ಮಾಡಿದೆವು. ಅಂಗನವಾಡಿ, ಗ್ರಾಮ ಪಂಚಾಯ್ತಿ, ಸ್ವಸಾಹಯ ಗುಂಪು, ಸೈಕ್ಲೋನ್ ಶೆಲ್ಟರ್, ಸ್ಮಶಾನ, ಗೋದಾಮು, ಸಮುದಾಯ ಭವನ, ಕಟ್ಟಡ ನಿರ್ಮಾಣಕ್ಕೆ, ಚರಂಡಿ ನಿರ್ಮಾಣ, ಜಮೀನು ರಸ್ತೆ ನಿರ್ಮಾಣ ಮಾಡಲು ಅವಕಾಶವಿತ್ತು. ಈ ಹೊಸ ಮಸೂದೆಯಿಂದ ಇದೆಲ್ಲದಕ್ಕೂ ಅಂತ್ಯ ಹಾಡಲಾಗಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಬಳ್ಳಾರಿ ಎಸ್‌ಪಿ ಪವನ್‌ ನಿಜ್ಜೂರ್‌ ಆತ್ಮಹತ್ಯೆಗೆ ಯತ್ನಿಸಿಲ್ಲ, ವಿಶ್ರಾಂತಿಯಲ್ಲಿದ್ದಾರೆ: ಡಿಸಿಪಿ ಶ್ರೀಹರಿಬಾಬು

ರೈತರು ಅಥವಾ ಕೂಲಿ ಕಾರ್ಮಿಕರು ತಮ್ಮ ಜಮೀನಿನಲ್ಲಿ ಮಾಡುವ ಕಾಮಗಾರಿಗೆ ಅರ್ಜಿ ಹಾಕಿ ಅನುದಾನ ಪಡೆಯಬಹುದಾಗಿತ್ತು, ಈಗ ಇದನ್ನು ತಪ್ಪಿಸಿ ಈ ಯೋಜನೆ ಕಾಮಗಾರಿಗಳನ್ನು ಗುತ್ತಿಗೆದಾರರ ಕೈಗೆ ಕೊಟ್ಟಿದ್ದಾರೆ. ಎಲ್ಲಿ ಯಾವ ಕೆಲಸ ಆಗಬೇಕು ಎಂಬುದನ್ನು ಕೇಂದ್ರ ಸರ್ಕಾರದಿಂದ ನಿರ್ದೇಶನದ ಮೇರೆಗೆ ನಿರ್ಧಾರ ಮಾಡಲಾಗುವುದು. ಈ ಯೋಜನೆ ನಮ್ಮ ರಾಜ್ಯದಲ್ಲಿ ಮಾತ್ರವಲ್ಲ, ಬಿಜೆಪಿ ಆಡಳಿತ ಯಾವ ರಾಜ್ಯಗಳಲ್ಲೂ ಯಶಸ್ವಿಯಾಗುವುದಿಲ್ಲ. ಕೇಂದ್ರದ ಸಚಿವರು ಹಾಗೂ ರಾಜ್ಯದಿಂದ ಕೇಂದ್ರ ಪ್ರತಿನಿಧಿಸುತ್ತಿರುವ ಯಾವುದೇ ಸಚಿವರು ಇದನ್ನು ಸ್ವಾಗತಿಸಿಯೂ ಇಲ್ಲ. ವಿರೋಧಿಸುತ್ತಲೂ ಇಲ್ಲ, ಯಾಕೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಬೆಂಗಳೂರು: ಕೆಲಸ ಮುಗಿಸಿ ಪಿಜಿಗೆ ವಾಪಸ್‌ ಆಗ್ತಿದ್ದ ವೈದ್ಯೆಗೆ ಕಿರುಕುಳಕ್ಕೆ ಯತ್ನ – ಕಾಮುಕ ಅರೆಸ್ಟ್

TAGGED:bengalurubjpcongressDK ShivakumarMNREGAVB G Ram Gಕಾಂಗ್ರೆಸ್ಡಿಕೆ ಶಿವಕುಮಾರ್ಬಿಜೆಪಿಬೆಂಗಳೂರುಮನರೇಗಾವಿಬಿ ಜಿ ರಾಮ್ ಜಿ ಮಸೂದೆ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

RCB vs GT
Cricket

ಕೈಕೊಟ್ಟ ಬ್ಯಾಟರ್ಸ್‌, ಆರ್‌ಸಿಬಿಗೆ ಹೀನಾಯ ಸೋಲು – ಗುಜರಾತ್‌ಗೆ 4 ವಿಕೆಟ್‌ಗಳ ಅಮೋಘ ಜಯ

Public TV
By Public TV
6 hours ago
Heavy rains in Bengaluru Bowring Hospital wall collapses 6 dead
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ದುರಂತ – ಸಿಎಂ ಸೂಚನೆ ಬೆನ್ನಲ್ಲೇ ಇಬ್ಬರು ಇಂಜಿನಿಯರ್‌ ಅಮಾನತು

Public TV
By Public TV
6 hours ago
Cabinet Meet
Bengaluru City

ಬಿಡದಿ ಟೌನ್‌ಶಿಪ್‌ಗೆ 18,000 ಕೋಟಿ; ಬೆಂಗಳೂರು-ಬೀದರ್ ಮಧ್ಯೆ ಮತ್ತೆ ವಿಮಾನ ಯಾನಕ್ಕೆ ಸಂಪುಟ ಒಪ್ಪಿಗೆ

Public TV
By Public TV
7 hours ago
India GDP
Latest

ಮಧ್ಯಪ್ರಾಚ್ಯ ಯುದ್ಧದಿಂದಾಗಿ ದೇಶದ ಜಿಡಿಪಿ ಬೆಳವಣಿಗೆ ಅಪಾಯದಲ್ಲಿದೆ – ಕೇಂದ್ರ ಕಳವಳ

Public TV
By Public TV
8 hours ago
Nepal Airlines
Latest

ಜಮ್ಮು-ಕಾಶ್ಮೀರ, ಲಡಾಖ್‌ ಪಾಕ್‌ನ ಭಾಗ ಅಂತ ತೋರಿಸಿ ಯಡವಟ್ಟು – ನೇಪಾಳದ ಏರ್‌ಲೈನ್ಸ್‌ ಕ್ಷಮೆಯಾಚನೆ

Public TV
By Public TV
8 hours ago
Rajat Patidar Catch
Cricket

Catch Controversy | ಜೇಸನ್‌ ಹೋಲ್ಡರ್‌ ಕ್ಯಾಚ್‌ ವಿವಾದ – ಅಂಪೈರ್‌ ತೀರ್ಪಿನ ವಿರುದ್ಧ ಆಕ್ರೋಶ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?