Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮನರೇಗಾ ಕಾಯ್ದೆ ಬದಲಾವಣೆ ಮಾಡಿ ಹಳ್ಳಿ ಅಧಿಕಾರವನ್ನ ಮೋದಿ ದಿಲ್ಲಿಗೆ ಕಸಿದುಕೊಂಡಿದ್ದಾರೆ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮನರೇಗಾ ಕಾಯ್ದೆ ಬದಲಾವಣೆ ಮಾಡಿ ಹಳ್ಳಿ ಅಧಿಕಾರವನ್ನ ಮೋದಿ ದಿಲ್ಲಿಗೆ ಕಸಿದುಕೊಂಡಿದ್ದಾರೆ: ಸಿದ್ದರಾಮಯ್ಯ

Bengaluru City

ಮನರೇಗಾ ಕಾಯ್ದೆ ಬದಲಾವಣೆ ಮಾಡಿ ಹಳ್ಳಿ ಅಧಿಕಾರವನ್ನ ಮೋದಿ ದಿಲ್ಲಿಗೆ ಕಸಿದುಕೊಂಡಿದ್ದಾರೆ: ಸಿದ್ದರಾಮಯ್ಯ

Public TV
Last updated: January 3, 2026 4:10 pm
Public TV
Share
4 Min Read
siddaramaiah
SHARE

ಬೆಂಗಳೂರು: ಕೇಂದ್ರದಲ್ಲಿರುವ ಮೋದಿ (PM Modi) ನೇತೃತ್ವದ ಬಿಜೆಪಿ ಸರ್ಕಾರ ಹಳ್ಳಿ ಅಧಿಕಾರ ಕಸಿದುಕೊಂಡು, ಗ್ರಾಮೀಣ ಆರ್ಥಿಕತೆಯನ್ನು ನಾಶ ಪಡಿಸಲು ಮುಂದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಆಕ್ರೋಶ ವ್ಯಕ್ತಪಡಿಸಿದರು.‌

ಗೃಹ ಕಚೇರಿ ಕೃಷ್ಣಾದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNREGA) ರದ್ಧತಿ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿ ಸರ್ಕಾರ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯನ್ನು ಹಿಂಪಡೆಯುವ ಮೂಲಕ ವಿಬಿ ಜಿ ರಾಮ್ ಜಿ ಹೆಸರಿನಲ್ಲಿ ಹೊಸ ಕಾಯ್ದೆ ಜಾರಿಗೆ ತರುವಾಗ, ರಾಜ್ಯ ಸರ್ಕಾರಗಳ ಅಭಿಪ್ರಾಯ ಕೇಳಿಲ್ಲ. ಭಾರತೀಯರ ಅಭಿಪ್ರಾಯ ಪಡೆಯದೆ ನೇರವಾಗಿ ಹೊಸ ಕಾಯ್ದೆ ಜಾರಿಗೊಳಿಸುವ ಮೂಲಕ ಸರ್ವಾಧಿಕಾರಿ ಧೋರಣೆಯನ್ನು ಪ್ರದರ್ಶಿಸಿದೆ ಎಂದರು. ಇದನ್ನೂ ಓದಿ: ಮನರೇಗಾ ರದ್ದು ಮೂಲಕ SC/ST, ಹಿಂದುಳಿದ ಭೂಹೀನರ ಅನ್ನ ಕಸಿಯುವ ಕುತಂತ್ರ – ಎಐಸಿಸಿ ಪರಿಶಿಷ್ಟ ಜಾತಿ ಘಟಕ ಆಕ್ರೋಶ

ಮನಮೋಹನ್‌ ಸಿಂಗ್ ಅವರ ನೇತೃತ್ವದ ಯುಪಿಎ ಸರ್ಕಾರ ಉದ್ಯೋಗದ ಹಕ್ಕು, ಮಾಹಿತಿ ಹಕ್ಕು, ಶೈಕ್ಷಣಿಕ ಹಕ್ಕು ಮೊದಲಾದ ಕ್ರಾಂತಿಕಾರಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಜನರಿಗೆ ಹೆಚ್ಚಿನ ಅಧಿಕಾರವನ್ನು ನೀಡುವ ಕಾರ್ಯವನ್ನು ಮಾಡಿತ್ತು. ಮೋದಿ ಸರ್ಕಾರ ಡಿ.17 ರಂದು ಕಾಯ್ದೆಯನ್ನು ಸಂಸತ್ತಿನಲ್ಲಿ ಮಂಡಿಸಿ ಡಿ.18 ರಂದು ಅಂಗೀಕಾರ ಪಡೆದಿದೆ. ಸುಮಾರು 12.16 ಕೋಟಿ ನರೇಗಾ ಕಾರ್ಮಿಕರು ದೇಶದಲ್ಲಿದ್ದಾರೆ. ಅದರಲ್ಲಿ 6.21 ಕೋಟಿ ಮಹಿಳೆಯರು ಇದ್ದಾರೆ. ಪ.ಜಾತಿಯವರು ಶೇ.17, ಪ.ವರ್ಗ ಶೇ. 11 ಇದ್ದಾರೆ. ನಮ್ಮ ರಾಜ್ಯದಲ್ಲಿ 71.18 ಲಕ್ಷ ನರೇಗಾ ಕಾರ್ಮಿಕರಿದ್ದಾರೆ. ಇದರಲ್ಲಿ 36.75 ಲಕ್ಷ ಮಹಿಳೆಯರು, ಅಂದರೆ ಶೇ. 51.6 ಮಹಿಳೆಯರಿದ್ದಾರೆ ಎಂದು ವಿವರಿಸಿದರು.

MGNREGA VB G RAM G

ಮನಮೋಹನ್ ಸಿಂಗ್ ಅವರ ಜನಪರ ಕಾಯ್ದೆಯನ್ನು ಹಿಂಪಡೆದುಕೊಳ್ಳುವ ಮೂಲಕ ಕಾರ್ಪೊರೇಟ್ ಕಂಪನಿಗಳಿಗೆ ಲಾಭ ಮಾಡಿಕೊಡುವ ಕೆಲಸವನ್ನು ಮೋದಿ ಸರ್ಕಾರ ಮಾಡುತ್ತಿದೆ. ನರೇಗಾ ಕಾಯ್ದೆ ಪ್ರಕಾರ ಜನಸಾಮಾನ್ಯರು, ಕೂಲಿ ಕಾರ್ಮಿಕರು, ಕೃಷಿ ಕಾರ್ಯಗಳ ಜೊತೆಯಲ್ಲಿ ತಾವಿದ್ದ ಸ್ಥಳದಲ್ಲೇ ನರೇಗಾ ಅಡಿ ಕೂಲಿ ಕೆಲಸ ಮಾಡಲು ಅವಕಾಶವಿತ್ತು. ಆ ಮೂಲಕ ಹಳ್ಳಿಗಾಡಿನ ಆರ್ಥಿಕತೆ ಕಟ್ಟಲು ಸಾಧ್ಯವಾಗಿತ್ತು. ಸ್ಥಳೀಯವಾಗಿ ಆಸ್ತಿ ಸೃಜನೆಯಾಗುತ್ತಿತ್ತು. ಉದ್ಯೋಗ ಕೇಳಿ ಪಡೆಯುವ ಹಕ್ಕು ಜನರಿಗಿತ್ತು. ಈಗ ಇದ್ಯಾವುದೂ ಇಲ್ಲವಾಗಿದೆ ಬೇಸರ ವ್ಯಕ್ತಪಡಿಸಿದರು.‌

ಕಳೆದ 11 ವರ್ಷಗಳ ಕೇಂದ್ರ ಸರ್ಕಾರದ ಸಾಧನೆ ಅಂದರೆ ಯೋಜನೆಗಳ ಹೆಸರು ಬದಲಾಯಿಸಿರುವುದು ಮಾತ್ರ. ಹಿಂದೆ ಜಾರಿಯಲ್ಲಿದ್ದ ಸುಮಾರು 30 ಯೋಜನೆಗಳ ಹೆಸರು ಬದಲಾವಣೆ ಅಥವಾ ಕಾಯ್ದೆಗಳನ್ನು ಹಿಂತೆಗೆದುಕೊಳ್ಳುವ ಕಾರ್ಯವನ್ನು ಮೋದಿ ಸರ್ಕಾರ ಮಾಡಿದೆ. ಪ್ರಸ್ತುತ ಕಾಯ್ದೆಯಡಿ 100 ದಿನ ಕನಿಷ್ಟ ಕೆಲಸ ನೀಡಬೇಕಾಗಿತ್ತು. ಅವರು ಎಲ್ಲಿ ವಾಸಿಸುತ್ತಾರೋ ಅಲ್ಲಿಯೇ ಕೆಲಸ ನೀಡಬೇಕಾಗಿತ್ತು. ಈಗ ಹೊಸ ಕಾಯ್ದೆ ಸೆಕ್ಷನ್ 5 (1) ಪ್ರಕಾರ ಸರ್ಕಾರ ಅಧಿಸೂಚಿತ ಪ್ರದೇಶದಲ್ಲಿ ಮಾತ್ರ ಉದ್ಯೋಗ ನೀಡಲಾಗುತ್ತದೆ. ಉದ್ಯೋಗ ದೊರೆಯುವ ಬಗ್ಗೆ ಯಾವುದೇ ಗ್ರಾಮ ಪಂಚಾಯತ್‌ಗಳಿಗೂ ಖಾತ್ರಿಯಿರುವುದಿಲ್ಲ‌ ಎಂದರು. ಇದನ್ನೂ ಓದಿ: ಪಬ್ಲಿಕ್ ಹೀರೋ ವೆಂಕಟೇಶ್ ನೆಟ್ಟ ಗಿಡಗಳಿಗೆ 1.87 ಲಕ್ಷ ರೂ. ಮನರೇಗಾ ಬಿಲ್

ವರ್ಷದ ಯಾವುದೇ ಅವಧಿಯಲ್ಲಿ ಲಭ್ಯವಾಗುತ್ತಿದ್ದ ಕೂಲಿ ಕೆಲಸವನ್ನು ಈಗ ನಿರ್ಬಂಧಿಸಲಾಗಿದ್ದು, ಕೃಷಿ ಚಟುವಟಿಕೆ ಅವಧಿಯ 60 ದಿನ ಯೋಜನೆಯಡಿ ಯಾವುದೇ ಉದ್ಯೋಗ ನೀಡಲಾಗುವುದಿಲ್ಲ. ಹಣದುಬ್ಬರಕ್ಕೆ ತಕ್ಕಂತೆ ಕೂಲಿ ಹಣವನ್ನು ಸರಿದೂಗಿಸುವ ಅವಕಾಶವನ್ನು ತೆಗೆದು ಹಾಕಲಾಗಿದೆ. ಹಿಂದಿನ ಕಾಯ್ದೆ ಪ್ರಕಾರ ಕೇಂದ್ರ ಸರ್ಕಾರ ಪೂರ್ಣ ಅನುದಾನವನ್ನು ಭರಿಸುತ್ತಿತ್ತು. ಹೊಸ ಕಾಯ್ದೆ ಪ್ರಕಾರ ಶೇ.60 ರಷ್ಟು ಕೇಂದ್ರ ಹಾಗೂ ಶೇ.40ರಷ್ಟು ರಾಜ್ಯ ಸರ್ಕಾರ ಭರಿಸಲಿದೆ. ಇದು ರಾಜ್ಯಗಳ ಮೇಲೆ ಹೆಚ್ಚಿನ ಹಣಕಾಸು ಹೊರೆಯನ್ನು ಹೇರಲಿದ್ದು, ಇದು ಸಂವಿಧಾನದ ಆರ್ಟಿಕಲ್ 258 ಮತ್ತು 280ಗೆ ವಿರುದ್ಧವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

pm modi mann ki baat

ಗ್ರಾಮ ಪಂಚಾಯಿತಿಗಳಿಗೆ ಇದ್ದ ಅಧಿಕಾರವನ್ನು ಇದೀಗ ಕೇಂದ್ರ ಸರ್ಕಾರ ಕಿತ್ತುಕೊಂಡಿದ್ದು, ಇದು ಒಕ್ಕೂಟ ವ್ಯವಸ್ಥೆಗೆ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿದೆ. ಹೊಸ ಕಾಯ್ದೆಯನ್ನು ಜಾರಿಗೊಳಿಸದಿರುವಂತೆ ಕೋರಿ ಪ್ರಧಾನಿಯವರಿಗೆ ಡಿ.30 ರಂದು ನಾನು ಪತ್ರ ಬರೆದಿದ್ದೇನೆ. ಹೊಸ ಕಾಯ್ದೆಯನ್ನು ರದ್ದುಪಡಿಸಬೇಕು. ನರೇಗಾ ಕಾಯ್ದೆ ಮತ್ತೆ ಜಾರಿಗೊಳಿಸಬೇಕು. ಮಹಿಳೆಯರು, ದಲಿತರ ಉದ್ಯೋಗದ ಹಕ್ಕನ್ನು ಪುನರ್ ಸ್ಥಾಪಿಸಬೇಕು. ಪಂಚಾಯಿತಿಗಳ ಸ್ವಯಂ ಆಡಳಿತದ ಹಕ್ಕನ್ನು ಮರು ಸ್ಥಾಪಿಸಬೇಕು ಎಂದು ರಾಜ್ಯ ಸರ್ಕಾರ ಕೇಂದ್ರವನ್ನು ಒತ್ತಾಯಿಸಿದೆ ಎಂದು ತಿಳಿಸಿದರು.

ಹೊಸ ಬಿಲ್ ಮೂಲಕ ಗ್ರಾಮೀಣ ಜನರ ಜೀವನೋಪಾಯ ಕಸಿಯಲಾಗುತ್ತಿದೆ. ರಾಜ್ಯ ಸರ್ಕಾರದ ಜೊತೆ ಚರ್ಚೆ ಮಾಡದೆ, ರಾಜ್ಯಗಳ ಆಯವ್ಯಯದ ಮೇಲೆ ಹೆಚ್ಚಿನ ಹೊರೆಯನ್ನು ಸಂವಿಧಾನ ಬಾಹಿರವಾಗಿ ಹೇರಲಾಗುತ್ತಿದೆ. ಹೊಸ ಕಾಯ್ದೆಯಿಂದ ನಿರುದ್ಯೋಗ ಹೆಚ್ಚಳ, ಉದ್ಯೋಗದಲ್ಲಿ ಮಹಿಳೆಯರ ಪಾಲುದಾರಿಕೆ ಇಳಿಕೆ, ದಲಿತ ಹಾಗೂ ಆದಿವಾಸಿ ಕುಟುಂಬಗಳ ಮೇಲೆ ಹೆಚ್ಚಿನ ಒತ್ತಡ ಸೃಷ್ಟಿ, ಗ್ರಾಮೀಣ ಜೀವನೋಪಾಯಗಳ ಕುಸಿತದಿಂದ ಗ್ರಾಮೀಣ ಬದುಕು ದುಸ್ತರಗೊಳ್ಳಲಿದೆ. ಪಂಚಾಯಿತಿಗಳು ಕೇವಲ ಅನುಷ್ಠಾನ ಸಂಸ್ಥೆಗಳಾಗಿ ಕಾರ್ಯ ನಿರ್ವಹಿಸುವಂತಾಗುತ್ತದೆ. ಈ ಮೂಲಕ ಗುತ್ತಿಗೆದಾರರಿಗೆ ಹೆಚ್ಚಿನ ಅವಕಾಶ ಸೃಷ್ಟಿಸಲಾಗುತ್ತಿದೆ ಎಂದರು. ಇದನ್ನೂ ಓದಿ: ಮಹಾತ್ಮ ಗಾಂಧೀಜಿ ಹೆಸರನ್ನ ಇತಿಹಾಸದಿಂದ ಅಳಿಸಲು ಸಾಧ್ಯವಿಲ್ಲ: ಡಿಕೆ ಶಿವಕುಮಾರ್

20 ವರ್ಷಗಳ ಹಿಂದೆ ಮನಮೋಹನ್‌ ಸಿಂಗ್ ಸರ್ಕಾರ ಕಾಯ್ದೆಯನ್ನು ಜಾರಿಗೊಳಿಸುವ ಸಂದರ್ಭದಲ್ಲೇ ಬಿಜೆಪಿ ಯೋಜನೆಯನ್ನು ವಿರೋಧಿಸಿತ್ತು. ಆಹಾರ ಭದ್ರತಾ ಕಾಯ್ದೆಯನ್ನು ಸಹ ಗೇಲಿ ಮಾಡಿತ್ತು. ಜನಪರವಾದ ಕಾನೂನುಗಳನ್ನು ನಾಶ ಮಾಡುವುದೇ ಬಿಜೆಪಿ ಕೆಲಸ. ಮನುಸ್ಮೃತಿ ಪ್ರಕಾರ ಮಹಿಳೆಯರು, ದಲಿತರು ಮತ್ತು ಶೂದ್ರರ ಕೈಯಲ್ಲಿ ಹಣ ಇರಬಾರದು ಎಂದು ಹೇಳುತ್ತದೆ. ಅವರು ಸ್ವಾಭಿಮಾನದಿಂದ ಬದುಕಬಾರದು. ಅವರು ಪೂರ್ಣ ಸೇವಕರಾಗಿಯೇ ಇರಬೇಕು ಎಂದು ಹೇಳುತ್ತದೆ. ಇಂತಹ ಮನುಸ್ಮೃತಿಯಿಂದ ಪ್ರೇರಣೆ ಪಡೆದಿರುವ RSS ಬಿಜೆಪಿ ಸರ್ಕಾರಕ್ಕೆ ಮಾರ್ಗದರ್ಶಕವಾಗಿದೆ. ಮಹಾತ್ಮಾ ಗಾಂಧಿಯನ್ನು ಗೋಡ್ಸೆ ಮೊದಲ ಬಾರಿ ಕೊಂದು ಹಾಕಿದರೆ, ಇದೀಗ ನರೇಗಾ ಕಾಯ್ದೆಯಲ್ಲಿ ಇದ್ದ ಮಹಾತ್ಮಾ ಗಾಂಧಿ ಹೆಸರನ್ನು ತೆಗೆದು ಹಾಕುವ ಮೂಲಕ ಬಿಜೆಪಿ ಅವರನ್ನು ಮತ್ತೆ ಮತ್ತೆ ಕೊಲ್ಲುವ ಕೆಲಸ ಮಾಡುತ್ತಿದೆ ವಾಗ್ದಾಳಿ ನಡೆಸಿದರು.

TAGGED:bengaluruMGNREGAsiddaramaiahಬೆಂಗಳೂರುಮನರೇಗಾಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Auto Gas
Bengaluru City

ಗ್ಯಾಸ್ ಅಭಾವದಿಂದ ನಲುಗಿದ ಆಟೋ ಚಾಲಕರು – ಸಚಿವ ಮುನಿಯಪ್ಪ ಮನೆಗೆ ಮುತ್ತಿಗೆ.. ಮನವಿ

Public TV
By Public TV
31 minutes ago
America China AI
Latest

ಯುಎಸ್ ಸೇನೆ ಮಾಹಿತಿ ಇರಾನ್‌ಗೆ ಮಾರಿದ ಚೀನಾ: ಅಮೆರಿಕ

Public TV
By Public TV
42 minutes ago
Tolll
Latest

ಏ.10 ರಿಂದ ಟೋಲ್‌ಗಳಲ್ಲಿ ನಗದು ಸ್ವೀಕಾರ ಸಂಪೂರ್ಣ ಬಂದ್‌!

Public TV
By Public TV
44 minutes ago
Chikkamagaluru School 2
Chikkamagaluru

ಮಕ್ಕಳ ಭವಿಷ್ಯಕ್ಕಾಗಿ ಅಡಿಕೆ ತೋಟ ಬೆಳೆಸಿದ ಸರ್ಕಾರಿ ಶಾಲೆ – ವಿದ್ಯಾರ್ಥಿಗಳನ್ನ ವಿಮಾನದಲ್ಲಿ ಕರೆದೊಯ್ಯಬೇಕೆಂಬ ಆಸೆ

Public TV
By Public TV
52 minutes ago
Chitradurga Nirmithi Kendra Former Accountant Lokayukta Raid
Chitradurga

ಚಿತ್ರದುರ್ಗದಲ್ಲಿ ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಮನೆ ಮೇಲೆ ಲೋಕಾಯುಕ್ತ ದಾಳಿ

Public TV
By Public TV
1 hour ago
Israel Strikes Iran
Latest

ಕದನ ವಿರಾಮಕ್ಕೆ ಒಪ್ಪದ ಇರಾನ್‌ ಮೇಲೆ ಮಿಸೈಲ್‌ ಮಳೆಗರೆದ ಇಸ್ರೇಲ್‌ – ಹಲವೆಡೆ ಸ್ಫೋಟ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?