ಬಳ್ಳಾರಿ: ಬ್ಯಾನರ್ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಫೈರಿಂಗ್‌ನಿಂದ ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸತೀಶ್ ರೆಡ್ಡಿಯ (Satish Reddy) ಮೂವರು ಗನ್‌ಮ್ಯಾನ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಹೇಂದ್ರ ಸಿಂಗ್, ಬಲಜಿತ್ ಸಿಂಗ್, ಗುರುಚರಣ್ ಸಿಂಗ್‌ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಮೂವರು ಕೂಡ ಪಂಜಾಬ್ ಮೂಲದವರು. ಬ್ರೂಸ್‌ಪೇಟೆ ಪೊಲೀಸರು ಇವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಜನಾರ್ದನ ರೆಡ್ಡಿ ಭದ್ರತೆ ಕೇಳಿರೋ ಪತ್ರ ನನಗೆ ತಲುಪಿಲ್ಲ: ಪರಮೇಶ್ವರ್
ಕಾರ್ಯಕ್ರಮವೊಂದರ ಬ್ಯಾನರ್ ಅಳವಡಿಕೆ ವಿಚಾರವಾಗಿ ಜ.1 ರಂದು ಜನಾರ್ದನ ರೆಡ್ಡಿ ನಿವಾಸದ ಬಳಿ ಗಲಾಟೆ ನಡೆದಿತ್ತು. ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಜಟಾಪಟಿಯಾಗಿತ್ತು. ಈ ವೇಳೆ ನಡೆದ ಫೈರಿಂಗ್‌ನಿಂದಾಗಿ ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟಿದ್ದ.
ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ವೀಡಿಯೋ ಆಧರಿಸಿ 10ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಿಚಾರಣೆ ನಡೆಸತ್ತಿದ್ದಾರೆ. ಪ್ರಕರಣ ಬೆನ್ನಲ್ಲೇ ಸತೀಶ್ ರೆಡ್ಡಿ ಗನ್‌ಮ್ಯಾನ್‌ಗಳು ನಾಪತ್ತೆಯಾಗಿದ್ದರು. ಈಗ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: Ballari Clash | ಮೃತ ರಾಜಶೇಖರ್ ಕುಟುಂಬಕ್ಕೆ 25 ಲಕ್ಷ ನಗದು ಪರಿಹಾರ – ಮನೆ ಭರವಸೆ ಕೊಟ್ಟ ಜಮೀರ್

