– ನೂತನ ಐಜಿ ಹರ್ಷಗುಪ್ತ, ನೂತನ ಎಸ್ಪಿ ಆಗಿ ಸುಮನ್ ಡಿ ಪೆನ್ನೇಕರ್ ನೇಮಕ
ಬಳ್ಳಾರಿ: ಗಂಗಾವತಿ ಶಾಸಕ ಜನಾರ್ದನ ರೆಡ್ಡಿ (Janardhana Reddy) ನಿವಾಸದ ಮುಂದೆ ಬ್ಯಾನರ್ ವಿಚಾರವಾಗಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬರು ಉನ್ನತ ಅಧಿಕಾರಿಯ ತಲೆ ದಂಡವಾಗಿದೆ.
ಎಸ್ಪಿ ಪವನ್ ನೆಜ್ಜೂರು ಅವರನ್ನು ಅಮಾನತುಗೊಳಿಸಿದ ಬೆನ್ನಲ್ಲೇ ಇದೀಗ ಪೊಲೀಸ್ ಐಜಿ ವರ್ತಿಕಾ ಕಟಿಯಾರ್ (Vartika katiyar) ಅವರನ್ನ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದನ್ನೂ ಓದಿ: ನಿನ್ನೆ ಅಧಿಕಾರ ಸ್ವೀಕಾರ, ಇಂದು ತಲೆದಂಡ – ಬಳ್ಳಾರಿ ಎಸ್‌ಪಿ ಅಮಾನತು
ಅಲ್ಲದೇ ಬಳ್ಳಾರಿ ವಲಯಕ್ಕೆ ನೂತನ ಐಜಿ ಆಗಿ ಹರ್ಷ ಗುಪ್ತಾ ಹಾಗೂ ನೂತನ ಎಸ್ಪಿ ಆಗಿ ಡಾ.ಸುಮನ್ ಡಿ ಪೆನ್ನೇಕರ್ ಅವರನ್ನ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಇದನ್ನೂ ಓದಿ: ಬಳ್ಳಾರಿ ಬುಲೆಟ್ ರಹಸ್ಯ ಬಯಲು – ಬಿಜೆಪಿಯ 13 ಜನ ಸೇರಿ 26 ಮಂದಿ ಅರೆಸ್ಟ್
ಜ.1 ರಂದು ಬಳ್ಳಾರಿ ಎಸ್‌ಪಿಯಾಗಿ ಪವನ್ ನೆಜ್ಜೂರ್ (Pavan Nejjuru) ಶೋಭಾರಾಣಿ ಅವರಿಂದ ಅಧಿಕಾರ ಸ್ವೀಕರಿಸಿದ್ದರು. ಬ್ಯಾನರ್ ಗಲಾಟೆ ಪ್ರಕರಣವನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲ ಎಂಬ ಕಾರಣ ನೀಡಿ ಅಮಾನತು ಮಾಡಲಾಗಿತ್ತು. ಅಲ್ಲದೇ ಬಳ್ಳಾರಿ ರೇಂಜ್ ಐಜಿ ಆಗಿದ್ದ ವರ್ತಿಕಾ ಕಟಿಯಾರ್ ಅವರು ಈ ಪ್ರಕರಣವನ್ನ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿಲ್ಲ. ಹೀಗಾಗಿ ಇವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಡಿಜಿ-ಐಜಿಪಿ ಕಡೆಯಿಂದ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿತ್ತು. ಹೀಗಾಗಿ ಐಜಿ ವರ್ತಿಕಾ ಕಟಿಯಾರ್ ಅವರನ್ನ ಸರ್ಕಾರ ವರ್ಗಾವಣೆ ಗೊಳಿಸಿದೆ. ಇದನ್ನೂ ಓದಿ: ರೆಡ್ಡಿ ಸಂಪ್ರದಾಯದ ಪ್ರಕಾರ ಹೂಳಬೇಕು, ರಾಜಶೇಖರ್ ದೇಹವನ್ನು ಸುಟ್ಟಿದ್ದು ಯಾಕೆ: ಶ್ರೀರಾಮುಲು ಪ್ರಶ್ನೆ


