ಬೆಂಗಳೂರು: ಬಳ್ಳಾರಿ ಘಟನೆಯ (Ballari Case) ಪ್ರಕರಣದ ತನಿಖೆಯನ್ನು ಸಿಬಿಐಗೆ (CBI) ವಹಿಸುವ ಅಗತ್ಯವಿಲ್ಲ. ಪ್ರಕರಣವನ್ನು ತನಿಖೆ ಮಾಡುವ ಸಾಮರ್ಥ್ಯ ನಮ್ಮ ಪೊಲೀಸರಿಗೆ ಇದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ (G Parameshwar) ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪೊಲೀಸರಿಗೆ ತನಿಖೆ ಮಾಡಲು ಆಗುವುದಿಲ್ಲ ಎಂಬ ಸಂದರ್ಭ ಬಂದರೆ ಸಿಬಿಐಗೆ ನೀಡುವ ಬಗ್ಗೆ ಮಾತನಾಡಬಹುದು. ಈಗಾಗಲೇ ಯಾವುದೇ ಪ್ರಕರಣಗಳನ್ನು ಸಿಬಿಐಗೆ ನೀಡುವುದಿಲ್ಲ ಎಂದು ಕ್ಯಾಬಿನೆಟ್‌ನಲ್ಲಿ ತೀರ್ಮಾನ ಮಾಡಲಾಗಿದೆ. ಸಿಬಿಐಗೆ ಕೊಡುವ ಅಗತ್ಯತೆಯೂ ಇಲ್ಲ ಎಂದರು. ಇದನ್ನೂ ಓದಿ: ಈ ರಾಜ್ಯಕ್ಕೆ ಸಿದ್ದರಾಮಯ್ಯನವರ ಅವಶ್ಯಕತೆ ಇದೆ: ಹೆಚ್‌ಸಿ ಬಾಲಕೃಷ್ಣ
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಅವರು ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಗಳಾಗಿದ್ದವರು. ಕೇಂದ್ರದಲ್ಲಿ ಬೃಹತ್ ಕೈಗಾರಿಕೆ ಸಚಿವರಾಗಿದ್ದಾರೆ. ನನ್ನ ಬಗ್ಗೆ ವೈಯಕ್ತಿಕವಾಗಿ ಹೇಳಿಕೆ ಕೊಟ್ಟಿದ್ದಾರೆ. ನಾನು ಅವರ ಬಗ್ಗೆ ನಾನು ಏನು ಬೇಕಾದರೂ ಮಾತನಾಡಬಹುದು. ಅವರು ಬಹಳ ಜವಾಬ್ದಾರಿಯುತವಾಗಿ ಹೇಳಿಕೆ ಕೊಟ್ಟಿದ್ದಾರೆ ಎಂದು ಭಾವಿಸುತ್ತೇನೆ. ಅದನ್ನು ಸ್ವೀಕಾರ ಮಾಡುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ರಾಜೌರಿಯಲ್ಲಿ 4 Kg ಐಇಡಿ ನಿಷ್ಕ್ರಿಯ – ಭಯೋತ್ಪಾದಕರ ಸಂಜು ವಿಫಲ, ತಪ್ಪಿದ ಅನಾಹುತ
ರಾಜ್ಯದಲ್ಲಿ ಕಾನೂನು ವ್ಯವಸ್ಥೆಯನ್ನು ಯಾವ ರೀತಿ ಆಡಳಿತ ಮಾಡಬೇಕು ಎಂಬ ಅರಿವು ನನಗಿದೆ ಎಂದು ಅವರಿಗೆ ಹೇಳಬಯಸುತ್ತೇನೆ. 38 ವರ್ಷ ರಾಜಕಾರಣದಲ್ಲಿದ್ದೇನೆ. ಅನೇಕ ಹುದ್ದೆಗಳಲ್ಲಿ ಕೆಲಸ ಮಾಡಿದ್ದೇನೆ. ಕುಮಾರಸ್ವಾಮಿಯವರ ಜೊತೆಗೂ ಕೆಲಸ ಮಾಡಿದ್ದೇನೆ. ಹಾಗಾಗಿ ನನ್ನ ಸಾಮಾರ್ಥ್ಯ ಮತ್ತು ವ್ಯಕ್ತಿತ್ವನೂ ಅವರಿಗೆ ಗೊತ್ತಿದೆ. ಅವರ ಹೇಳಿಕೆಯನ್ನು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: 161 ಮನೆ ನೆಲಸಮ ಆಗಿದೆ, 26 ಜನಕ್ಕೆ ಇವತ್ತೇ ಮನೆ ಕೊಡಬಹುದು: ಜಮೀರ್
ಹುಬ್ಬಳ್ಳಿ ಘಟನೆಯ ಬಗ್ಗೆ ಪೊಲೀಸ್ ಕಮಿಷನರ್ ಶಶಿಕುಮಾರ್ ಹೇಳಿಕೆ ನೀಡಿದ್ದಾರೆ. ನಾವು ಮಹಿಳೆಯನ್ನು ವಿವಸ್ತ್ರಗೊಳಿಸಿಲ್ಲ. ಅರೆಸ್ಟ್ ಮಾಡುವ ಸಂದರ್ಭದಲ್ಲಿ ಮಹಿಳೆಯೇ ಆ ರೀತಿ ಮಾಡಿಕೊಂಡಿದ್ದಾರೆ ಎನ್ನುವ ಸ್ಪಷ್ಟನೆಯನ್ನು ಕಮಿಷನರ್ ನೀಡಿದ್ದಾರೆ. ಕಮಿಷನರ್ ಸ್ಪಷ್ಟಪಡಿಸಿದ ಮೇಲೆ ಅದಕ್ಕಿಂತ ಇನ್ನೇನು ಬೇಕಾಗಿದೆ. ಎಲ್ಲದರಲ್ಲೂ ರಾಜಕೀಯ ಮಾಡುವುದು ಒಳ್ಳೆಯದಲ್ಲ. ಹೆಣ್ಣುಮಗಳ ವಿಚಾರವನ್ನು ಕೈಗೆತ್ತಿಕೊಂಡು ರಾಜಕೀಯ ಮಾಡುವುದು ಸರಿ ಕಾಣುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯೇ ಬಟ್ಟೆ ಹರಿದುಕೊಂಡಿದ್ದಾಳೆ: ಸಂತೋಷ್ ಲಾಡ್
ಯಾವ ಪಕ್ಷದವರನ್ನು ಅವರ ರಾಜಕೀಯ ಪಕ್ಷದ ಹಿನ್ನೆಲೆಯಲ್ಲಿ ಟಾರ್ಗೆಟ್ ಮಾಡುವುದಿಲ್ಲ. ಪೊಲೀಸರು ಆ ರೀತಿ ಕೆಲಸ ಮಾಡಲು ಸಾಧ್ಯವಿಲ್ಲ, ಮಾಡಕೂಡದು. ಇದಕ್ಕೆ ಯಾವುದೇ ಅವಕಾಶಗಳನ್ನು ಕೊಡುವುದಿಲ್ಲ. ಯಾವುದೇ ರಾಜಕೀಯ ದುರುದ್ದೇಶದಿಂದ ಪೊಲೀಸರು ನಡೆದುಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಅಕ್ರಮ ಬಾಂಗ್ಲಾ ವಲಸಿಗರನ್ನು ಹಿಡಿದು, ಗಡಿಪಾರು ಮಾಡಲಾಗುತ್ತಿದೆ. ಈಗಾಗಲೇ ಸಾಕಷ್ಟು ಪ್ರಕರಣಗಳನ್ನು ಮಾಡಿದ್ದೇವೆ. ಬಾಂಗ್ಲಾ ದೇಶದವರು ರಾಜ್ಯದಲ್ಲಿ ಅನಧಿಕೃತವಾಗಿ ಎಲ್ಲಿಯೇ ಇದ್ದರೂ ಪತ್ತೆ ಹಚ್ಚಿ, ಗಡಿಪಾರು ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ರೈಲು ಹರಿದು ಕೈ ಕಟ್ – ಗಾಂಜಾ ಮತ್ತಿನಲ್ಲಿ ಚಿಕಿತ್ಸೆ ಬೇಡ ಅಂತ ಓಡಿದ ಭೂಪ

