ಹಾವೇರಿ: ಸರ್ಕಾರಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಚಳಗೇರಿ ಬ್ರಿಡ್ಜ್ ಬಳಿ ನಡೆದಿದೆ.
60 ವರ್ಷದ ಬಸಪ್ಪ ಮುದಿ ಸಾವನ್ನಪ್ಪಿದ್ದ ದುರ್ದೈವಿ. ಇನ್ನೂ ಬೈಕ್‍ನಲ್ಲಿದ್ದ ಬಸಪ್ಪರ ಮಗ ಗಣೇಶ್ (22) ಅವರಿಗೆ ಗಂಭೀರ ಪ್ರಮಾಣದ ಗಾಯಗಳಾಗಿದ್ದು, ರಾಣೇಬೆನ್ನೂರು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಣೇಶ್ ಬೈಕ್ ಚಲಾಯಿಸುತ್ತಿದ್ದರು. ಸಾರಿಗೆ ಬಸ್ ಬೆಂಗಳೂರಿನಿಂದ ಗದಗ ತೆರಳುತಿತ್ತು.
ಸ್ಥಳಕ್ಕೆ ರಾಣೇಬೆನ್ನೂರು ಗ್ರಾಮೀಣ ಪೊಲೀಸರು ಭೇಟಿ ನೀಡಿದ್ದು ಬಸ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.