Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆ – ಗುಪ್ತ ʻನಿಧಿʼಯ ವಾರಸುದಾರರು ಯಾರು? ಪತ್ತೆ ಹಚ್ಚಿದವರಿಗೂ ಸಿಗಬೇಕಾ ಪಾಲು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆ – ಗುಪ್ತ ʻನಿಧಿʼಯ ವಾರಸುದಾರರು ಯಾರು? ಪತ್ತೆ ಹಚ್ಚಿದವರಿಗೂ ಸಿಗಬೇಕಾ ಪಾಲು?

Districts

ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆ – ಗುಪ್ತ ʻನಿಧಿʼಯ ವಾರಸುದಾರರು ಯಾರು? ಪತ್ತೆ ಹಚ್ಚಿದವರಿಗೂ ಸಿಗಬೇಕಾ ಪಾಲು?

Public TV
Last updated: January 11, 2026 1:58 pm
Public TV
Share
4 Min Read
gadag
SHARE

– ನಿಧಿ ಕಾಯ್ದೆ ಪ್ರಕಾರ ಯಾರಿಗೆ ಸಿಗಬೇಕು ಚಿನ್ನಾಭರಣ?

ಗದಗ: ಅದು ಐತಿಹಾಸಿಕ ಗ್ರಾಮ.. ದೇವಾಲಯಗಳ (Temple) ಸ್ವರ್ಗ.. ಶಿಲ್ಪ ಕಲೆಯ ತೊಟ್ಟಿಲು.. ವಾಸ್ತು ಶಿಲ್ಪ ಕಲೆಗಳನ್ನು ಹೊಂದಿದ ಆ ಗ್ರಾಮದಲ್ಲಿ 101 ದೇವಸ್ಥಾನ, 101 ಬಾವಿಗಳ ಐತಿಹಾಸಿಕ ಪ್ರತೀತಿ ಇದೆ. ಆ ಗ್ರಾಮದಲ್ಲಿ ಮನೆ ಕಟ್ಟಡದ ಪಾಯ ತೆಗೆಯುವ ವೇಳೆ ಹೊನ್ನಿನ ನಿಧಿ ಪತ್ತೆಯಾಗಿದೆ. ನಿಧಿಯನ್ನು ಸರ್ಕಾರಕ್ಕೆ ಒಪ್ಪಿಸಿದ ತಾಯಿ, ಮಗನಿಗೆ ಸನ್ಮಾನ ಮಾಡಲಾಗಿದೆ. ಸದ್ಯ ಚಿನ್ನಾಭರಣ ಪುರಾತತ್ವ ಇಲಾಖೆ ಕೈಸೇರಿದ್ದು ಲಕ್ಕುಂಡಿ (Lakkundi) ಗುಪ್ತನಿಧಿಯ ವಾರಸುದಾರರು ಯಾರು? ಕುತೂಹಲ ಹೆಚ್ಚಿಸಿದೆ.

470 ಗ್ರಾಂ ಚಿನ್ನ, ವಜ್ರದ ಆಭರಣಗಳು ಪತ್ತೆ
ಗದಗದ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ರಾಜರ ಕಾಲದ ಅಪಾರ ಚಿನ್ನಾಭರಣಗಳ ನಿಧಿ (Gold Treasure) ಪತ್ತೆಯಾಗಿದೆ. ಇದು ಇಡೀ ರಾಜ್ಯದ ಗಮನ ಸೆಳೆದಿದೆ. ಲಕ್ಕುಂಡಿ ಗ್ರಾಮದ ಗಂಗವ್ವ ಬಸವರಾಜ ರಿತ್ತಿ ಅವರ ಮನೆ ಜಾಗದಲ್ಲಿ ಪಾಯ ಅಗೆಯುವ ಸಂದರ್ಭದಲ್ಲಿ, ಪ್ರಜ್ವಲ್ ರಿತ್ತಿ ಎಂಬ 8 ವರ್ಷದ ಮಗನಿಗೆ ಒಂದು ಹಿತ್ತಾಳೆ ತಂಬಿಗೆಯಲ್ಲಿ ಚಿನ್ನಾಭರಣ ಸಿಕ್ಕಿವೆ. ಆತ ತಕ್ಷಣವೇ ಗ್ರಾಮದ ಹಿರಿಯರಿಗೆ, ಪಂಚಾಯಿತಿ ಸದಸ್ಯರಿಗೆ ಮತ್ತು ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಸಿದ್ದು ಪಾಟೀಲ್‌ಗೆ ವಿಷಯ ತಿಳಿಸಿದ್ದಾನೆ. ಬಳಿಕ ಸಿದ್ದು ಪಾಟೀಲ್ ಗದಗ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಕೆ ಪಾಟೀಲ್‌ಗೆ (HK Patil) ಮಾಹಿತಿ ರವಾನಿಸಿದ್ರು ಹೆಚ್.ಕೆ ಪಾಟೀಲ್ ನಿರ್ದೇಶನದ ಮೇರೆಗೆ ಎಲ್ಲಾ ಸಂಬಂಧಪಟ್ಟ ಅಧಿಕಾರಿಗಳು ಲಕ್ಕುಂಡಿ ಗ್ರಾಮಕ್ಕೆ ದೌಡಾಯಿಸಿ, ವಾಸ್ತವಾಂಶ ಪರಿಶೀಲಿಸಿದ್ರು.

gadag 6

ನಿಧಿಯಲ್ಲಿ ಏನೇನಿತ್ತು?
ನಿಧಿ ಪತ್ತೆ ಬಗ್ಗೆ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ರು. ಎಸ್ಪಿ ರೋಹನ್ ಜಗದೀಶ್, ಎಡಿಸಿ ದುರ್ಗೆಶ್, ತಹಶೀಲ್ದಾರ್ ಶ್ರೀನಿವಾಸಮೂರ್ತಿ, ಡಿವೈಎಸ್ಪಿ ಸೇರಿ ಹಲವು ಅಧಿಕಾರಿಗಳು ಸ್ಥಳಕ್ಕೆ ಬಂದು ನಿಧಿಯನ್ನ ವಶಕ್ಕೆ ಪಡೆದುಕೊಂಡರು. ಸುಮಾರು 470 ಗ್ರಾಂ ತೂಕದ ಬಂಗಾರ ಆಭರಣಗಳು ದೊರೆತಿವೆ. ಅವುಗಳಲ್ಲಿ ಕೈ ಖಡಗ, ಸರ, ದೊಡ್ಡ ತೊಡೆಹಾರ, ಬಂಗಾರದ ಗುಂಡುಗಳು, ವಂಕಿ ಉಂಗುರ, ಕಿವಿ ಓಲೆ, ನಾಗಮುದ್ರೆಗಳು, ನಾಗಮಣಿ ಉಂಗುರ, ಬಳೆ, ಕಲ್ಗೆಜ್ಜೆ, 22 ತೂತು ಬಿಲ್ಲೆಗಳು, ವಜ್ರ ಖಚಿತ ಉಂಗುರ ಸೇರಿದಂತೆ ಅನೇಕ ಆಭರಣಗಳು ದೊರೆತಿವೆ. ಇದನ್ನೂ ಓದಿ: ಐತಿಹಾಸಿಕ ಲಕ್ಕುಂಡಿಯಲ್ಲಿ ಅಂದಾಜು 1 ಕೆ.ಜಿ ಚಿನ್ನಾಭರಣಗಳ ನಿಧಿ ಪತ್ತೆ

ಜಿಲ್ಲಾಡಳಿತ ಖಜಾನೆಗೆ ಚಿನ್ನಾಭರಣ ಹಸ್ತಾಂತರ
ಅಕ್ಕಸಾಲಿಗರನ್ನ ಕರಿಸಿ ಮಡಿಕೆಯಲ್ಲಿನ ಚಿನ್ನ ಮೂರು ಗಂಟೆಗಳ ಕಾಲ ಪರಿಶೀಲಿಸಿ ತೂಕ ಮಾಡಲಾಯಿತು. 22 ವಿವಿಧ ಚಿನ್ನದ ಆಭರಣಗಳು ಹಳೇ ಕಾಲದ ಆಭರಣಗಳು ಎನ್ನಲಾಗ್ತಿದೆ. ಸದ್ಯ ಇದರ ಮೌಲ್ಯ ಸುಮಾರು 65 ರಿಂದ 70 ಲಕ್ಷ ರೂ. ಆಗಬಹುದು ಎಂದು ಅಂದಾಜಿಸಲಾಗಿದೆ. ಅಧಿಕಾರಿಗಳು ಗ್ರಾಮದ ಹಿರಿಯರು, ಮುಖಂಡರ ಸಮ್ಮುಖದಲ್ಲಿ ಪೊಲೀಸ್ ಬಂದೋಬಸ್ತ್ ಮೂಲಕ ಜಿಲ್ಲಾಡಳಿತ ಖಜಾನೆಗೆ ಒಪ್ಪಿಸಲಾಗಿದೆ.

gadag 5

ಇನ್ನೂ ಕುಟುಂಬದ ಪ್ರಾಮಾಣಿಕತೆಯನ್ನ ಅಧಿಕಾರಿಗಳು ಹೊಗಳಿ ಕುಟುಂಬಸ್ಥರಿಗೆ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯಿಂದ ಸನ್ಮಾನಿಸಿ ಗೌರವಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಮತ್ತು ಅಬಕಾರಿ ಜಿಲ್ಲಾಧಿಕಾರಿ ಶ್ರೀ ದುರ್ಗೇಶ್ ಪ್ರಜ್ವಲ್‌ಗೆ ಶಾಲು ಹಾಕಿ ಗೌರವಿಸಿದ್ರು. ವಿಷಯವನ್ನು ಸರ್ಕಾರದ ಗಮನಕ್ಕೆ ತಂದ ಗ್ರಾಮ ಪಂಚಾಯತ್ ಸದಸ್ಯೆ ರಜಿಯಾ ಬೇಗಂ ಅವರಿಗೂ ಸನ್ಮಾನ ಮಾಡಲಾಗಿದೆ. ಇದನ್ನೂ ಓದಿ: ಬೆಂಗಳೂರು ಮೂಲದ ಮೇಜರ್ ಸ್ವಾತಿ ಶಾಂತಕುಮಾರ್‌ಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ

gadag 2

ಲಕ್ಕುಂಡಿ ಗುಪ್ತನಿಧಿಯ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಇನ್ನು ಲಕ್ಕುಂಡಿ ಗುಪ್ತನಿಧಿಯ ವಾರಸುದಾರರು ಯಾರು..? ನಿಧಿ ಪತ್ತೆ ಹಚ್ಚಿದವರಿಗೂ ಸಿಗಬೇಕಾ ಪಾಲು..? ಎಂಬ ಪ್ರಶ್ನೆಗಳು ಎದ್ದಿವೆ. ಪಾಯ ತೆಗೆಯುವಾಗ ಸಿಕ್ಕ ಚಿನ್ನಿದ ನಿಧಿಯ ಹಕ್ಕುದಾರ ಯಾರು..? ನಿಧಿ ಕಾಯ್ದೆಯ ಪ್ರಕಾರ ಯಾರಿಗೆ ಸೇರಬೇಕು ಚಿನ್ನಾಭಾರಣ? ಎಂಬುದಕ್ಕೆ ಕಾನೂನಿನಲ್ಲಿ ಉಲ್ಲೇಖ ಇದೆ. ಭಾರತದಲ್ಲಿ ಬ್ರಿಟೀಷರ ಕಾಲದಿಂದಲೂ ನಿಧಿ ಕಾಯ್ದೆ ಇದೆ. 100 ವರ್ಷಕ್ಕಿಂತ ಹಳೆಯದಾದ ನಿಧಿ ಸರ್ಕಾರದ ಸ್ವತ್ತು ಆಗಲಿದೆ. ನಿಧಿ ಸರ್ಕಾರದ ಸ್ವತ್ತಾದರೂ ಷರತ್ತುಗಳು ಅನ್ವಯ ಆಗಲಿದೆ. ಕಾಯ್ದೆ ಪ್ರಕಾರ ನಿಧಿ ಪತ್ತೆ ಹಚ್ಚಿದವರಿಗೂ ಪಾಲು ನಿಗಬೇಕು. ನಿಧಿ ಸಿಕ್ಕ ಮಾಲೀಕರಿಗೂ ಭಾಗ ಸಿಗಬೇಕು. ಇದನ್ನೂ ಓದಿ: Swabhiman Parv | ಸೋಮನಾಥನ ಸನ್ನಿಧಿಯಲ್ಲಿ ʻಓಂಕಾರʼ ಪಠಿಸಿದ ʻನಮೋʼ

ನಿಧಿ ಹಕ್ಕುದಾರ ಯಾರು..?
* ಭಾರತದಲ್ಲಿ ಬ್ರಿಟೀಷರ ಕಾಲದಿಂದಲೂ ನಿಧಿ ಕಾಯ್ದೆ ಇದೆ
* ಜಾಗದ ಮಾಲೀಕರಿಗೆ ಐದನೇ ಒಂದು ಭಾಗ ಕೊಡಬೇಕು
* ಪತ್ತೆ ಹಚ್ಚಿದವರಿಗೂ ನಿಧಿ ಮೌಲ್ಯದ ಒಂದು ಭಾಗ ಕೊಡಬೇಕು
* ಲಕ್ಕುಂಡಿ ಗ್ರಾಮದಲ್ಲಿ ನಿಧಿ ಪತ್ತೆ ಹಚ್ಚಿದ್ದ ಬಾಲಕ ಪ್ರಜ್ವಲ್
* ತಾಮ್ರದ ಪಾತ್ರೆಯಲ್ಲಿದ್ದ ನಿಧಿ ಗುರುತಿಸಿದ್ದ 8ನೇ ತರಗತಿ ವಿದ್ಯಾರ್ಥಿ
* ನಿಧಿ ಕಾಯ್ದೆ ಪ್ರಕಾರ ಮಾಲೀಕರು, ಪ್ರಜ್ವಲ್‌ಗೂ ಸಿಗಬೇಕು ಪಾಲು

gadag 3

ಈ ನಡುವೆ ನಿಧಿ ಸಿಕ್ಕಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಸಂಪೂರ್ಣ ವರದಿ ಪಡೆದುಕೊಂಡಿದ್ದಾರೆ. ನಿಧಿ ಪತ್ತೆಯಾದ ಸುದ್ದಿ ತಿಳಿದ ತಕ್ಷಣ ಜಿಲ್ಲಾಡಳಿತದೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ್ದ ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಸಿದ್ಧಲಿಂಗೇಶ ಪಾಟೀಲ, ಗದಗ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಕೆ. ಪಾಟೀಲರಿಗೆ ಸ್ಥಳದಿಂದಲೇ ಮಾಹಿತಿ ನೀಡಿದ್ದಾರೆ.

ಒಟ್ಟಿನಲ್ಲಿ ಐತಿಹಾಸಿಕ ಲಕ್ಕುಂಡಿ ಗ್ರಾಮ 101 ದೇವಸ್ಥಾನ, 101 ಬಾವಿಗಳ ಐತಿಹಾಸಿಕ ಪ್ರತೀತಿ ಹೊಂದಿರುವ ಸ್ಥಳ. ಕಲ್ಯಾಣ ಚಾಲುಕ್ಯರು, ರಾಷ್ಟ್ರಕೂಟರು, ಹೊಯ್ಸಳರು, ದಾನಚಿಂತಾಮಣಿ ಅತ್ತಿಮಬ್ಬೆಯ ಕರ್ಮಭೂಮಿಯಿದು. ಇಂತಹ ಸ್ಥಳದಲ್ಲಿಗ ನಿಧಿ ಪತ್ತೆಯಾಗಿದ್ದು, ಅದನ್ನು ಜಿಲ್ಲಾಡಳಿತಕ್ಕೆ ಹಸ್ತಾಂತರ ಮಾಡಲಾಯಿತು. ರಿತ್ತಿ ಕುಟುಂಬ ಪ್ರಾಮಾಣಿಕತೆ ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ.

TAGGED:Archaeology DepartmentgadagGadag PoliceGold TreasureLakkundiಗದಗ ಪೊಲೀಸ್ಚಿನ್ನದ ನಿಧಿಲಕ್ಕುಂಡಿ
Share This Article
Facebook Whatsapp Whatsapp Telegram

Cinema news

Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post

You Might Also Like

d.k.shivakumar aisshwarya dks hegde
Bengaluru City

ಡಿಸಿಎಂ ಡಿಕೆಶಿ ಪುತ್ರಿ ಐಶ್ವರ್ಯ ಹೆಗ್ಡೆಗೆ ಹೆಣ್ಣು ಮಗು ಜನನ

Public TV
By Public TV
57 seconds ago
accident death
Bengaluru City

ಚಿಕನ್ ತರಲು ಹೋಗುತ್ತಿದ್ದವನಿಗೆ ಖಾಸಗಿ ಬಸ್ ಡಿಕ್ಕಿ – ಬಾಲಕ ಸಾವು

Public TV
By Public TV
1 hour ago
Nepal Accident
Latest

ನೇಪಾಳದ ರೋಲ್ಪಾದಲ್ಲಿ ಪ್ರಪಾತಕ್ಕೆ ಬಿದ್ದ ಜೀಪ್ – 20 ಮಂದಿ ಸಾವು, ರಕ್ಷಣಾ ಕಾರ್ಯಾಚರಣೆಗೆ ಮಳೆ ಅಡ್ಡಿ

Public TV
By Public TV
2 hours ago
siddaramaiah
Bengaluru City

ಇದು ಆಡಳಿತವಲ್ಲ, ಸಂಘಟಿತ ಲೂಟಿ – ಗ್ಯಾಸ್ ಬೆಲೆ ಏರಿಕೆಗೆ ಕೇಂದ್ರದ ವಿರುದ್ಧ ಸಿಎಂ ವಾಗ್ದಾಳಿ

Public TV
By Public TV
2 hours ago
IndiGo Flight
Districts

ಶಿವಮೊಗ್ಗ – ಬೆಂಗಳೂರು ನಡುವಿನ ಹಾರಾಟ ನಿಲ್ಲಿಸಿದ ಇಂಡಿಗೋ ವಿಮಾನ

Public TV
By Public TV
2 hours ago
Hajj
Latest

ಹಜ್‌ ಯಾತ್ರೆಯ ವಿಮಾನ ದರ 10,000 ರೂ. ಹೆಚ್ಚಳ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?