– ಖಾಸಗಿ, ಸರ್ಕಾರಿ ಸೇರಿ ಎಲ್ಲಾ ಶಾಲೆಗಳಲ್ಲೂ ನಿಯಮ ಜಾರಿಗೆ ಆದೇಶ
ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಶಾಲೆಗಳಲ್ಲಿ ಮಕ್ಕಳಿಗೆ ನೀರು ಕುಡಿಯಲು ಇನ್ಮುಂದೆ `ವಾಟರ್ ಬೆಲ್’ (Water Bell) ಎಂಬ ಸಮಯ ನಿಗದಿ ಮಾಡಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿದೆ.
ಶಾಲೆಗಳಲ್ಲಿ ಮಕ್ಕಳಿಗೆ ನೀರು ಕುಡಿಯಬೇಕೆಂಬ ಅರಿವು ಅಷ್ಟಾಗಿ ಇರುವುದಿಲ್ಲ. ಮಕ್ಕಳ ಬೆಳವಣಿಗೆಗೆ ಮತ್ತು ಆರೋಗ್ಯಕ್ಕೆ ನೀರು ಅತ್ಯವಶ್ಯಕವಾಗಿರುತ್ತದೆ. ಜೊತೆಗೆ ದೇಹದ ಉಷ್ಣತೆಯನ್ನು ನಿಯಂತ್ರಿಸುವುದರ ಜೊತೆಗೆ ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ. ಹೀಗಾಗಿ ರಾಜ್ಯದಲ್ಲಿರುವ ಎಲ್.ಕೆ.ಜಿ, ಯು.ಕೆ.ಜಿ ಒಳಗೊಂಡಂತೆ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಮಕ್ಕಳಿಗೆ ಆಗಾಗ ನೀರು ಕುಡಿಯುವಂತೆ ಜ್ಞಾಪಿಸಲು ವಾಟರ್ ಬೆಲ್ ಅನುಷ್ಠಾನಗೊಳಿಸಲು ಸೂಚನೆ ನೀಡಿದೆ. ಇದನ್ನೂ ಓದಿ: 219ನೇ ಫಲಪುಷ್ಪ ಪ್ರದರ್ಶನ ಉದ್ಘಾಟಿಸಿದ ಡಿಸಿಎಂ – ಹೂವಲ್ಲೇ ತೇಜಸ್ವಿ ವಿಸ್ಮಯ ಲೋಕ ಸೃಷ್ಟಿ
ವಾಟರ್ ಬೆಲ್ ಬಗ್ಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಕ್ಷಣ ಇಲಾಖೆಗೆ ಪತ್ರ ಬರೆದು ಮನವಿ ಮಾಡಿತ್ತು. ಅದರಂತೆ ಆಯೋಗದ ಪತ್ರಕ್ಕೆ ನೀರಿನ ಗಂಟೆ ಬಾರಿಸಲು ಶಿಕ್ಷಣ ಇಲಾಖೆ ಪಿಎಂ ಪೋಷಣ್ ಶಕ್ತಿ ನಿರ್ಮಾಣ್ ಸುತ್ತೋಲೆ ಹೊರಡಿಸಿದ್ದು, ಆಗಾಗ್ಗೆ ವಾಟರ್ ಬೆಲ್ ಹೊಡೆದು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಆದೇಶಿಸಿದೆ.

