ಬೆಂಗಳೂರು: ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ (Pradhan Mantri Fasal Bima Yojana) ಅನುಷ್ಠಾನಕ್ಕಾಗಿ ಕರ್ನಾಟಕ (Karnataka) ರಾಜ್ಯಕ್ಕೆ ದ್ವಿತೀಯ ಸ್ಥಾನ ದೊರೆತಿದೆ. ದೊಡ್ಡ ರಾಜ್ಯಗಳ ಪೈಕಿ ಯೋಜನೆ ಅನುಷ್ಠಾನದಲ್ಲಿ ಒಟ್ಟಾರೆ ಪ್ರಗತಿಯಲ್ಲಿ ಕರ್ನಾಟಕ ರಾಜ್ಯವು ಮುಂಚೂಣಿಯಲ್ಲಿದ್ದು, ಕೃಷಿ ಇಲಾಖೆಗೆ ಪ್ರಶಸ್ತಿ ಸಂದಿದೆ.
27,04,166 ರೈತರ ನೋಂದಣೆ ಪೈಕಿ 11,85,642 ರೈತರು 2,094 ಕೋಟಿ ರೂ. ಕ್ಲೈಮ್ ಮಾಡಿದ್ದಾರೆ. 2024-25ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದಿಂದ ಪ್ರಶಂಸನಾ ಪತ್ರವನ್ನು ನೀಡಲಾಗಿದೆ. ಇದನ್ನೂ ಓದಿ: ಜೆಡಿಎಸ್ ಪಾಳಯದಲ್ಲಿ ಕ್ಷಿಪ್ರ ಕ್ರಾಂತಿ – ಜಿಟಿಡಿ ಕ್ಷೇತ್ರದಿಂದ ಸಾರಾ ಮಹೇಶ್ ಕಣಕ್ಕಿಳಿಸಲು ಪ್ಲ್ಯಾನ್!
ಕೃಷಿ ಇಲಾಖೆಯ ಆಯುಕ್ತರು ಹಾಗೂ ಕೃಷಿ ನಿರ್ದೇಶಕರು ಇಂದು ಬೆಂಗಳೂರಿನಲ್ಲಿ ನಡೆದ 13ನೆಯ ರಾಷ್ಟ್ರೀಯ ಸಮ್ಮೇಳನದಂದು ಕಾರ್ಯದರ್ಶಿಗಳು ಸಹಕಾರ ಸಚಿವಾಲಯದಿಂದ ಪ್ರಶಸ್ತಿ ಸ್ವೀಕರಿಸಿದರು. ಇದನ್ನೂ ಓದಿ: ಸಿದ್ರಾಮಯ್ಯಗೂ ಟ್ರಾಫಿಕ್ ಬಿಸಿ – ವಾಹನಗಳ ತೆರವಿಗೆ ಹರಸಾಹಸ; ಬೈಕ್ ಸವಾರನಿಗೆ ಒದಿಯಲು ಮುಂದಾದ ಎಸ್ಪಿ!

