ಹಾವೇರಿ: ಲಾರಿ (Lorry) ಮತ್ತು ಬೈಕ್ (Bike) ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮವಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಹಾವೇರಿ (Haveri) ಜಿಲ್ಲೆ ಹಾನಗಲ್ (Hanagal) ತಾಲೂಕಿನ ನಾಲ್ಕರ್ ಕ್ರಾಸ್ ಬಳಿ ನಡೆದಿದೆ.
ಹಾನಗಲ್ ಕಡೆಯಿಂದ ಹೊಂಕಣ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಮೃತ ಬೈಕ್ ಸವಾರನನ್ನು ಹೊಂಕಣ ಗ್ರಾಮದ ನಟರಾಜ್ ದಳವಾಯಿ (43) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಗದಗದ ಲಕ್ಕುಂಡಿಯಲ್ಲಿ 5ನೇ ದಿನದ ಉತ್ಖನನ ಕಾರ್ಯ – ಒಡೆದ ಮಡಿಕೆ ಆಕಾರದ ವಸ್ತು ಪತ್ತೆ
ಸದ್ಯ ಪೊಲೀಸರು ಲಾರಿಯನ್ನ ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ. ಅಡೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: Reality Check | 3,000ಕ್ಕೆ ಅಕ್ರಮ ಬಾಂಗ್ಲಾ ವಲಸಿಗನಿಗೆ ಆಧಾರ್ – ಶೆಡ್‌ಗಳಲ್ಲಿ ಟಿವಿ, ಫ್ರಿಡ್ಜ್, ಫ್ಯಾನ್, ಎಲ್ಲ ಸೌಲಭ್ಯ!

