– ಮಹಿಳೆಯರ ಒಳಉಡುಪು ಧರಿಸಿ ವಿಕೃತ ಆನಂದ ಪಡ್ತಿದ್ದ
ಬೆಂಗಳೂರು: ಮಹಿಳೆಯರ (Women’s) ಒಳ ಉಡುಪುಗಳನ್ನು ಕದಿಯುತ್ತಿದ್ದ ವಿಕೃತ ಕಾಮಿಯನ್ನು ಹೆಬ್ಬಗೋಡಿಯ ವಿದ್ಯಾನಗರದಲ್ಲಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಕೇರಳ (Kerala) ಮೂಲದ ಅಮಲ್ (23) ಬಂಧಿತ ಆರೋಪಿ. ಈತ ಮನೆ ಮಹಡಿ, ಹಾಗೂ ಆಚೆ ಒಣಹಾಕಿದ್ದ ಮಹಿಳೆಯರ ಒಳ ಉಡುಪುಗಳನ್ನ ಕದಿಯುತ್ತಿದ್ದ. ಹೊರಗಡೆ ಸುತ್ತಾಡಿ ಮನೆಗಳನ್ನು ದೂರದಿಂದಲೇ ಪರಿಶೀಲನೆ ಮಾಡುತ್ತಿದ್ದ. ನಂತರ ಯಾರು ಇಲ್ಲದ ವೇಳೆ ನುಗ್ಗಿ ಒಳ ಉಡುಪುಗಳನ್ನ ಕದ್ದೊಯ್ಯುತ್ತಿದ್ದ. ಬಳಿಕ ಅವುಗಳನ್ನು ತಾನು ಧರಿಸಿಕೊಂಡು ಫೋಟೋ ತೆಗೆದುಕೊಂಡು ವಿಕೃತ ಆನಂದ ಪಡುತ್ತಿದ್ದ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಬೆಂಗ್ಳೂರಲ್ಲಿರುವ ಇಸ್ರೇಲ್ ರಾಯಭಾರಿ ಕಚೇರಿಗೆ ಹುಸಿ ಬಾಂಬ್ ಬೆದರಿಕೆ
ಹೆಬ್ಬಗೋಡಿ ಠಾಣಾ ವ್ಯಾಪ್ತಿಯ ವಿದ್ಯಾನಗರದಲ್ಲಿ ವಿಕೃತ ಕಾಮಿ ಅಮಲ್ ನನ್ನ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದು, ಕದ್ದ ಒಳ ಉಡುಪುಗಳನ್ನು ಧರಿಸಿಕೊಂಡು ಫೋಟೋ ಕ್ಲಿಕ್ಕಿಸಿಕೊಂಡಿರುವುದು ಮೊಬೈಲ್ನಲ್ಲಿ ಪತ್ತೆಯಾಗಿವೆ.
ಹಾಗೇ ಅಮಲ್ ವಾಸವಿದ್ದ ಮನೆಯಲ್ಲಿಯೂ ಸಹ ಮಹಿಳೆಯರ ಒಳ ಉಡುಪುಗಳನ್ನ ಸಂಗ್ರಹಿಸಿ ಇಟ್ಟುಕೊಂಡಿರುವುದು ಕಂಡುಬಂದಿದೆ. ಸದ್ಯ ಹೆಬ್ಬಗೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ಇದನ್ನೂ ಓದಿ: ಖಾಸಗಿ ಬಸ್‌ಗಳ ಆಟಾಟೋಪಕ್ಕೆ ಬೀಳುತ್ತಾ ಬ್ರೇಕ್? – ಸುರಕ್ಷತೆ, ಸಾರಿಗೆ ನಿಯಮ ಪಾಲನೆಗೆ ಹೊಸ ರೂಲ್ಸ್


