ಬೆಂಗಳೂರು: ರಾಜ್ಯದ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿರುವ ಉಪರಾಷ್ಟ್ರಪತಿ ಸಿ.ಪಿ ರಾಧಾಕೃಷ್ಣನ್ (CP Radhakrishnan) ಅವರು ವಾಯುಸೇನೆಯ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಬಂದಿಳಿದರು.
ತುಮಕೂರು ಸಿದ್ದಗಂಗಾ ಮಠದ ತ್ರಿವಿಧ ದಾರೋಹಿ ಶಿವಕುಮಾರ ಮಹಾಯೋಗಿಗಳು (Shivakumara Swamiji) ಲಿಂಗೈಕ್ಯರಾಗಿ 7 ವರ್ಷ ಪೂರ್ಣಗೊಂಡಿದೆ. ಹೀಗಾಗಿ 7ನೇ ವರ್ಷದ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮ ಹಾಗೂ ಬೆಂಗಳೂರಿನ CMR ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಉಪರಾಷ್ಟ್ರಪತಿಗಳೂ ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಉಪರಾಷ್ಟ್ರಪತಿಗಳನ್ನ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರು ಆತ್ಮೀಯವಾಗಿ ಬರಮಾಡಿಕೊಂಡರು.
ಈ ಸಮಯದಲ್ಲಿ ಕೇಂದ್ರ ರೈಲ್ವೇ ರಾಜ್ಯ ಖಾತೆ ಸಚಿವರಾದ ವಿ. ಸೋಮಣ್ಣ (V Somanna), ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾದ ಎಂ.ಎ ಸಲೀಂ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ. ಜಗದೀಶ್, ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ನಂತರ ತುಮಕೂರಿನ ಸಿದ್ದಗಂಗಾ ಮಠದ ಕಾರ್ಯಕ್ರಮದಲ್ಲಿ ಭಾಗವಹಿಸಲು ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ಹೆಲಿಕಾಪ್ಟರ್ ಮೂಲಕವೇ ತುಮಕೂರಿಗೆ ಪ್ರಯಾಣಿಸಿದರು.


