ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ (Valmiki Scam) ಮಾಜಿ ಸಚಿವ ಬಿ.ನಾಗೇಂದ್ರಗೆ (B Nagendra) ಮತ್ತೆ ಸಂಕಷ್ಟ ಎದುರಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು ಕೋರಿ ಸಿಬಿಐ (CBI) ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.
ಒ0ದು ವಾರದ ಹಿಂದೆಯಷ್ಟೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಾಜಿ ಸಚಿವ ಬಿ.ನಾಗೇಂದ್ರಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಇದೀಗ ಸಿಬಿಐ ಅಧಿಕಾರಿಗಳು ಜಾಮೀನು ರದ್ಧತಿ ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ಸಂಬಂಧ ಇಂದು (ಜ.22) ಹೈಕೋರ್ಟ್ ನ್ಯಾ.ಸುನೀಲ್ ದತ್ ಯಾದವ್ ಅವರ ಪೀಠದಲ್ಲಿ ವಿಚಾರಣೆ ನಡೆಯಲಿದೆ. ಇದನ್ನೂ ಓದಿ: ಬಿಕ್ಕಟ್ಟಿಗೆ ಬ್ರೇಕ್ – ರಾಜ್ಯಪಾಲರು ಅಧಿವೇಶನಕ್ಕೆ ಬರ್ತಾರೆ; ಲೋಕಭವನದಿಂದ ಸರ್ಕಾರಕ್ಕೆ ಅಧಿಕೃತ ಮಾಹಿತಿ
ಇದಕ್ಕೂ ಮುನ್ನ ವಾಲ್ಮೀಕಿ ಹಗರಣ ಪ್ರಕರಣದಲ್ಲಿ ಸಿಬಿಐ ವಿಚಾರಣೆಗೆ ಹಾಜರಾಗುವಂತೆ ಬಿ.ನಾಗೇಂದ್ರಗೆ ಸಮನ್ಸ್ ನೀಡಿದ್ದರು. ಬಳಿಕ ಬಂಧನ ಭೀತಿಯಲ್ಲಿದ್ದ ನಾಗೇಂದ್ರ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಜ.13ರಂದು ವಿಚಾರಣೆ ನಡೆಸಿದ್ದ ಕೋರ್ಟ್ ವಾದ-ಪ್ರತಿವಾದ ಆಲಿಸಿ, ಜ.14ರಂದು ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.

