ಗದಗ: ಪ್ರಾಮಾಣಿಕತೆಯಿಂದ ಸರ್ಕಾರಕ್ಕೆ ನಿಧಿಯನ್ನು (Treasure) ಹಸ್ತಾಂತರಿಸಿದ್ದ ರಿತ್ತಿ ಕುಟುಂಬಕ್ಕೆ (Ritti family) ಲಕ್ಕುಂಡಿ (Lakkundi) ಗ್ರಾಮ ಪಂಚಾಯತ್ 30*40 ಸೈಟ್ ಘೋಷಣೆ ಮಾಡಿದೆ.
ಇಂದು ಅನ್ನದಾನೇಶ್ವರ ಮಠದ ಸಭಾಭವನದಲ್ಲಿ ಲಕ್ಕುಂಡಿ ಗ್ರಾಮ ಪಂಚಾಯತ್ ವಿಶೇಷ ಗ್ರಾಮಸಭೆ ಆಯೋಜನೆ ಮಾಡಿತ್ತು. ಈ ಕಾರ್ಯಕ್ರಮದಲ್ಲಿ ನಿಧಿಯನ್ನು ಹಸ್ತಾಂತರ ಮಾಡಿದ ರಿತ್ತಿ ಕುಟುಂಬದ ಸದಸ್ಯರನ್ನು ಸನ್ಮಾನ ಮಾಡಲಾಯಿತು. ಇದನ್ನೂ ಓದಿ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಶೌಚಾಲಯಕ್ಕೆ ಕರೆದೊಯ್ದು ವಿದೇಶಿ ಮಹಿಳೆಗೆ ಕಿರುಕುಳ!
ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷ, ಅಧಿಕಾರಿಗಳು, ಸರ್ವ ಸದಸ್ಯರ ಸಮ್ಮುಖದಲ್ಲಿ ಲಕ್ಕುಂಡಿ ಮಾರುತಿ ನಗರದಲ್ಲಿ ರಿತ್ತಿ ಕುಟುಂಬಕ್ಕೆ 30*40 ಸೈಟ್ ನೀಡುವ ನಿರ್ಣಯವನ್ನು ಪಾಸ್ ಮಾಡಲಾಯಿತು.
ಮಾನವೀಯ ಮತ್ತು ಸಾಮಾಜಿಕ ನ್ಯಾಯದ ದೃಷ್ಟಿಯಿಂದ ವಿಶೇಷ ಪ್ರಕರಣ ಎಂದು ಪರಿಗಣಿಸಿ ಗ್ರಾಮ ಪಂಚಾಯತ್ ಸೈಟ್ ನೀಡುವ ನಿರ್ಧಾರ ತೆಗೆದಕೊಂಡಿದೆ. ಮುಂದೆ ಸಚಿವರು, ಶಾಸಕರ ಅನುದಾನದಲ್ಲಿ ಮನೆ ನಿರ್ಮಾಣ ಮಾಡಿಕೊಡುವುದಾಗಿ ಭರವಸೆ ನೀಡಲಾಗಿದೆ.
ಪ್ರಜ್ವಲ್ ರಿತ್ತಿಗೆ ಉಚಿತ ಶಿಕ್ಷಣ., ಪ್ರಜ್ವಲ್ ತಾಯಿ ಗಂಗಮ್ಮಗೆ ಕೆಲಸ ಕೊಡುವುದಾಗಿ ಪಂಚಾಯತ್ ಭರವಸೆ ನೀಡಿದೆ.

