– ಭಾರತ ಪರ್ವದಲ್ಲಿ ಕರ್ನಾಟಕದ ಟ್ಯಾಬ್ಲೊ ಪ್ರದರ್ಶನ
ನವದೆಹಲಿ: 77ನೇ ಗಣರಾಜ್ಯೋತ್ಸವ ಹಿನ್ನೆಲೆ ಕರ್ನಾಟಕದ ಸ್ತಬ್ಧಚಿತ್ರ ಸಿದ್ಧವಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ ಆಧುನಿಕ ತಂತ್ರಜ್ಞಾನದ ಬಳಕೆಯಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕದ ಪಯಣವನ್ನು ಸಂಕೇತಿಸುವ ಸಿರಿಧಾನ್ಯದಿಂದ ಮೈಕ್ರೋಚಿಪ್‌ವರೆಗೆ (ಮಿಲ್ಲೆಟ್ ಟು ಮೈಕ್ರೋಚಿಪ್) ವಿಷಯದ ಮೇಲೆ ಈ ಬಾರಿ ಟ್ಯಾಬ್ಲೊ ಸಿದ್ಧಪಡಿಸಲಾಗಿದೆ.
ಈ ಸ್ತಬ್ಧಚಿತ್ರ ಕರ್ತವ್ಯಪಥ್‌ನಲ್ಲಿ ನಡೆಯುವ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಭಾಗಿಯಾಗಲ್ಲ, ಬದಲಿಗೆ ಕೆಂಪು ಕೋಟೆಯಲ್ಲಿ ಆಯೋಜಿಸುವ ಭಾರತ ಪರ್ವದಲ್ಲಿ ಪ್ರದರ್ಶಿಸಲಾಗುತ್ತಿದೆ. ಇತರೆ ರಾಜ್ಯಗಳಿಗೂ ಅವಕಾಶ ನೀಡುವ ದೃಷ್ಠಿಯಿಂದ ಕರ್ನಾಟಕದ ಟ್ಯಾಬ್ಲೋ ಅನ್ನು ಈ ಬಾರಿ ಪರೇಡ್ ನಿಂದ ಹೊರಗಿಡಲಾಗಿದೆ. ಇದನ್ನೂ ಓದಿ: ಕಲಬುರಗಿ| ರೀಲ್ಸ್ ಮಾಡುತ್ತ ಟ್ರ್ಯಾಕ್ಟರ್ ಕೆಳಗೆ ಬಿದ್ದ ಚಾಲಕ; ಚಕ್ರಕ್ಕೆ ಸಿಲುಕಿ ಸಾವು
ಸಿರಿಧಾನ್ಯಗಳ ಉತ್ಪಾದನೆ ಮತ್ತು ಪೌಷ್ಟಿಕ ಆಹಾರದ ಬಳಕೆಯನ್ನು ಉತ್ತೇಜಿಸುವಲ್ಲಿ ಕರ್ನಾಟಕವು ದೇಶದ ಪ್ರಮುಖ ರಾಜ್ಯಗಳಲ್ಲಿ ಒಂದಾಗಿದೆ. ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಬೆಂಗಳೂರು ಜಾಗತಿಕವಾಗಿ ಗಮನ ಸೆಳೆದಿದೆ. ಮೈಕ್ರೋಚಿಪ್, ಎಲೆಕ್ಟ್ರಾನಿಕ್ಸ್ ಹಾಗೂ ಸೆಮಿಕಂಡಕ್ಟರ್ ವಲಯಗಳಲ್ಲಿನ ಆವಿಷ್ಕಾರಗಳು ಕರ್ನಾಟಕವನ್ನು ಶ್ರೇಷ್ಠ ತಂತ್ರಜ್ಞಾನ ಕೇಂದ್ರವಾಗಿಸಿದೆ. ಇವೆಲ್ಲವೂ ಈ ಬಾರಿ ಸ್ತಬ್ಧಚಿತ್ರದಲ್ಲಿ ಮೇಳೈಸಿವೆ. ಇದನ್ನೂ ಓದಿ: ರಾಜ್ಯಪಾಲರ ಘನತೆಗೆ ಕಾಂಗ್ರೆಸ್ ಅಗೌರವ ತೋರಿದೆ, ಸದಾಕಾಲ ಕೇಂದ್ರದ ಜೊತೆ ಸಂಘರ್ಷ ಸರಿಯಲ್ಲ: ನಿಖಿಲ್

ಸ್ತಬ್ಧಚಿತ್ರದಲ್ಲಿ ಏನಿರಲಿದೆ?
ಸ್ತಬ್ಧಚಿತ್ರದ ಮುಂಭಾಗದಲ್ಲಿ ಉದಯಿಸುತ್ತಿರುವ ಸೂರ್ಯ ನಿರಂತರ ಪ್ರಗತಿ ಮತ್ತು ಚಲನಶೀಲತೆಯ ಸಂಕೇತವಾಗಿ ಹೊಳೆಯುತ್ತಿದೆ. ದೊಡ್ಡ ಮಡಿಕೆಗಳಲ್ಲಿ ಪ್ರದರ್ಶಿಸಲಾದ ವಿವಿಧ ಸಿರಿಧಾನ್ಯಗಳು ಕೃಷಿ ಸಮೃದ್ಧಿಯನ್ನು ತೋರಿಸುತ್ತವೆ. ಬೆಳೆದ ಫಸಲನ್ನು ಎತ್ತಿಹಿಡಿದಿರುವ ರೈತ, ಆತನ ಪತ್ನಿ ಹಾಗೂ ಉಲ್ಲಾಸದಿಂದ ಕಾಣಿಸುತ್ತಿರುವ ಮಕ್ಕಳು ಗ್ರಾಮೀಣ ಶಕ್ತಿಯ ಜೀವಂತ ಚಿತ್ರಣವಾಗಿದ್ದಾರೆ. ಇದನ್ನೂ ಓದಿ: ಅಸ್ತಿತ್ವಕ್ಕೆ ಬಂತು ಟ್ರಂಪ್ ಕನಸಿನ ಬೋರ್ಡ್ ಆಫ್ ಪೀಸ್ – ಪಾಕಿಸ್ತಾನವೂ ಸದಸ್ಯ ದೇಶ
ಮಧ್ಯಭಾಗದಲ್ಲಿ ತಿರುಗುತ್ತಿರುವ ಅಣುವಿನ ಮಾಲಿಕ್ಯೂಲ್‌ಗಳ ಮಾದರಿ ತಂತ್ರಜ್ಞಾನ ಪ್ರಗತಿಯನ್ನು ಸೂಚಿಸುತ್ತದೆ. ಕೃತಕ ಬುದ್ಧಿಮತ್ತೆಯ ರೋಬೋಟ್ ಕಂಪ್ಯೂಟರ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವುದು ಭವಿಷ್ಯದ ಆವಿಷ್ಕಾರಗಳ ಸಂಕೇತವಾಗಿದೆ. ಇಕ್ಕೆಲಗಳಲ್ಲಿ ಬಾಹ್ಯಾಕಾಶ ಕ್ಷೇತ್ರವನ್ನು ಪ್ರತಿನಿಧಿಸುವ ರಾಕೆಟ್ ಮತ್ತು ವಿಜ್ಞಾನಿ, ಟೆಲಿಮೆಡಿಸಿನ್ ಮೂಲಕ ಮಾರ್ಗದರ್ಶನ ನೀಡುತ್ತಿರುವ ವೈದ್ಯೆ ಹಾಗೂ ಕೃಷಿಭೂಮಿಯಲ್ಲಿ ಡ್ರೋನ್ ಬಳಸುತ್ತಿರುವ ಮಹಿಳೆಯು ವಿಜ್ಞಾನ, ಆರೋಗ್ಯ ಮತ್ತು ಆಧುನಿಕ ಕೃಷಿಯ ಸಮನ್ವಯವನ್ನು ತೋರಿಸುತ್ತಾರೆ. ಕೈಗಾರಿಕಾ ವಲಯವನ್ನು ಪ್ರತಿನಿಧಿಸುವಂತೆ ಯಂತ್ರೋಪಕರಣಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರು ಉತ್ಪಾದನಾ ಶಕ್ತಿಗೆ ಸಾಕ್ಷಿಯಾಗಿದ್ದಾರೆ. ಇದನ್ನೂ ಓದಿ: ಧಾರವಾಡ | ಯುವತಿಯ ಕೊಲೆ ಕೇಸ್ – ಮದುವೆ ಆಗಬೇಕಿದ್ದ ಯುವಕನೇ ವಿಲನ್
ಇಡೀ ಸ್ತಬ್ಧಚಿತ್ರದ ಆಕರ್ಷಣೆಯ ಕೇಂದ್ರಬಿಂದುವಾಗಿ ಕೊನೆಯಲ್ಲಿ ಮಿನುಗುತ್ತಿರುವ ಮೈಕ್ರೋಚಿಪ್ ಹಾಗೂ ಬಂಗಾರದ ಬಣ್ಣದ ಸರ್ಕ್ಯೂಟ್‌ಗಳ ಮಧ್ಯೆ ರೋಬೋಟ್‌ನ ಮುಖವನ್ನು ಸಾಂಕೇತಿಕವಾಗಿ ಚಿತ್ರಿಸಲಾಗಿದೆ. ಇದು ಪರಂಪರೆಯಿಂದ ಪ್ರಗತಿಯತ್ತ, ಮಣ್ಣಿನಿಂದ ಯಂತ್ರಗಳತ್ತ ಸಾಗುತ್ತಿರುವ ಕರ್ನಾಟಕದ ಆತ್ಮನಿರ್ಭರ ಪಯಣದ ಸಾರವಾಗಿದೆ. ಇದನ್ನೂ ಓದಿ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ 38 ಕೋಟಿ ಮೌಲ್ಯದ ಕೊಕೇನ್ ಸೀಜ್
ತೀವ್ರ ಪೈಪೋಟಿ:
ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಸ್ತಬ್ಧಚಿತ್ರದೊಂದಿಗೆ ಭಾಗವಹಿಸುವುದು ಪ್ರತಿ ರಾಜ್ಯಕ್ಕೂ ಹೆಮ್ಮೆಯ ಮತ್ತು ಪ್ರತಿಷ್ಠೆಯ ಸಂಕೇತ. ಹಿಂದೆ ಎಲ್ಲಾ ರಾಜ್ಯಗಳಿಗೂ ಪಥಸಂಚಲನದಲ್ಲಿ ಭಾಗವಹಿಸಲು ಅವಕಾಶವಿತ್ತು. ಭದ್ರತೆ ಮತ್ತು ಗಣರಾಜ್ಯೋತ್ಸವದ ಅವಧಿಯಲ್ಲಿ ಮಾಡಿದ ಇಳಿಕೆ, ಪ್ರಾತಿನಿಧ್ಯತೆಯಿಂದಾಗಿ ಸ್ತಬ್ಧಚಿತ್ರಕ್ಕಾಗಿ ಪ್ರತಿನಿಧಿಸುವ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಂಖ್ಯೆಯನ್ನು ರಕ್ಷಣಾ ಸಚಿವಾಲಯವು 2022ನೇ ಸಾಲಿನಿಂದ 15ಕ್ಕೆ ಇಳಿಸಿದೆ. ಇದನ್ನೂ ಓದಿ: ಲಾಂಗ್ ವೀಕೆಂಡ್ ಎಫೆಕ್ಟ್ – ಪ್ರಯಾಣಿಕರಿಗೆ ದರ ಏರಿಕೆ ಬಿಸಿ
2024ರಲ್ಲಿ ಭಾರತ ಸರ್ಕಾರದ ರಕ್ಷಣಾ ಸಚಿವಾಲಯವು ಎಲ್ಲಾ ರಾಜ್ಯಗಳಿಗೂ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಸ್ತಬ್ಧಚಿತ್ರದೊಂದಿಗೆ ಪಾಲ್ಗೊಳ್ಳಲು ಸಮಾನ ಅವಕಾಶ ಕಲ್ಪಿಸಲು ಆವರ್ತನ ಮಾದರಿಯಲ್ಲಿ ಒಂದು ವರ್ಷ ಪಥಸಂಚಲನ ಮತ್ತು ಅದರ ಮುಂದಿನ ವರ್ಷ ಭಾರತ ಪರ್ವದಲ್ಲಿ ಪ್ರದರ್ಶಿಸುವಂತೆ ಎಲ್ಲಾ ರಾಜ್ಯಗಳೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ. ಇದನ್ನೂ ಓದಿ: ಕಾಂಗ್ರೆಸ್ ಮುಖಂಡ ರಾಜೀವ್ ಗೌಡಗೆ ಶಾಕ್ – FIR ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾ
ಹೀಗಾಗಿ, ಇದು ತೀವ್ರ ಪೈಪೋಟಿಗೆ ಕಾರಣವಾಗಿದೆ. ಅಷ್ಟೇ ಅಲ್ಲದೆ ಗುಣಮಟ್ಟಕ್ಕೆ, ವಿನ್ಯಾಸಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಸ್ತಬ್ಧಚಿತ್ರಕ್ಕಾಗಿ ಪ್ರಶಸ್ತಿ ಪಡೆದುಕೊಳ್ಳುವುದಕ್ಕಿಂತಲೂ ಪಥಸಂಚಲನ ಮತ್ತು ಪ್ರದರ್ಶನದಲ್ಲಿ ಭಾಗವಹಿಸುವುದೇ ಪ್ರತಿಷ್ಠೆಯ ಸಂಕೇತವಾಗಿದೆ. ಇಂತಹ ಕಠಿಣ ಪರೀಕ್ಷೆಯಲ್ಲಿ ಕರ್ನಾಟಕವು 16 ಬಾರಿ ಭಾಗವಹಿಸಿ, ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ಇದನ್ನೂ ಓದಿ: ಚಿಕ್ಕಮಗಳೂರು | ಬಾರ್ ಮಾಲೀಕನ ಹತ್ಯೆ ಕೇಸ್ – ನಾಲ್ವರು ಅರೆಸ್ಟ್
ಈ ಬಗ್ಗೆ ಮಾತನಾಡಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ ನಿಂಬಾಳ್ಕರ್, ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನ ಮತ್ತು ಭಾರತ ಪರ್ವದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟ್ಯಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ಸೆಳೆಯುತ್ತಿದೆ. ವರ್ಷದಿಂದ ವರ್ಷಕ್ಕೆ ಹೊಸ ಮೈಲಿಗಲ್ಲುಗಳನ್ನು ಸ್ಥಾಪಿಸುತ್ತಲೇ ಸಾಗಿದೆ. ಈ ಬಾರಿ ಕೃಷಿ, ಶಿಕ್ಷಣ, ವಿಜ್ಞಾನ, ಉನ್ನತ ತಂತ್ರಜ್ಞಾನ ಹಾಗೂ ಮೈಕ್ರೋಚಿಪ್‌ಗಳ ಉತ್ಪಾದನೆಯಲ್ಲಿ ಸಾಧಿಸಿರುವ ಸಮತೋಲನಯುತ ಪ್ರಗತಿಯನ್ನು ಸ್ತಬ್ಧಚಿತ್ರದಲ್ಲಿ ತೋರಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಹನಿಟ್ರ್ಯಾಪ್? – ಬ್ಲ್ಯಾಕ್‌ಮೇಲ್ ಮಾಡಿದ್ದ ಮಹಿಳೆ ಬಂಧನ

