ಹುಬ್ಬಳ್ಳಿ: ಜಿಲ್ಲೆಯಲ್ಲಿರುವ ಪ್ರತಿಷ್ಠಿತ ಮಾಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 60ಕ್ಕೂ ಅಧಿಕ ಅಂಗಡಿಗಳು ಹೊತ್ತಿಯುರಿದಿವೆ.
ಮರಾಠಗಲ್ಲಿಯಲ್ಲಿರುವ ಪ್ರತಿಷ್ಠಿತ ಮೆಟ್ರೋ ಮಾಲ್‌ನಲ್ಲಿ (Metro Mall) ಗುರುವಾರ (ಜ.22) ರಾತ್ರಿ ಅಗ್ನಿ ಅವಘಡ ಸಂಭವಿಸಿದೆ. ಕೆಲಸ ಮುಗಿಸಿ, ಮಾಲ್‌ಗೆ ಬೀಗ ಹಾಕಲಾಗಿತ್ತು. ಮಧ್ಯರಾತ್ರಿ 12 ಗಂಟೆ ಸುಮಾರಿಗೆ ನಾಲ್ಕನೇ ಫ್ಲೋರ್‌ನಲ್ಲಿರುವ ಲೈಫ್ ಸ್ಟೈಲ್ ಶಾಪ್‌ನಲ್ಲಿ ಮೊದಲಿಗೆ ಸಣ್ಣದಾಗಿ ಬೆಂಕಿ ಕಿಡಿ ಕಾಣಿಸಿಕೊಂಡಿತ್ತು. ಸ್ಥಳೀಯರು ಮಾಲೀಕರಿಗೆ ತಿಳಿಸಲು ಪ್ರಯತ್ನ ಮಾಡುತ್ತಿದ್ದ ವೇಳೆ ಬೆಂಕಿ ಪ್ರಮಾಣ ಜಾಸ್ತಿಯಾಗಿ ಇಡೀ ಮಾಲ್‌ಗೆ ಬೆಂಕಿ ಹತ್ತಿಕೊಂಡಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಹರಸಾಹಸಪಟ್ಟಿದ್ದು, ಸತತ ನಾಲ್ಕು ಗಂಟೆ ಕಾರ್ಯಾಚರಣೆ ಬಳಿಕ ಸಂಪೂರ್ಣವಾಗಿ ಬೆಂಕಿ ನಂದಿಸಿದ್ದಾರೆ. ಇದನ್ನೂ ಓದಿ; ರಾಜ್ಯದಲ್ಲಿ ಮತ್ತೆ ಬೈಕ್ ಟ್ಯಾಕ್ಸಿಗೆ ಅವಕಾಶ
ಸ್ಥಳಕ್ಕೆ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಆವರಿಸಿದೆ ಎಂದು ಶಂಕಿಸಲಾಗಿದೆ. ಸದ್ಯ ಹುಬ್ಬಳ್ಳಿ ಶಹರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

