Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಾಲೆ, ಕಾಲೇಜುಗಳಲ್ಲಿ ಕಾರ್ಯಕ್ರಮ – ಶಿಕ್ಷಣ ಇಲಾಖೆಯಿಂದ 13 ಮಾರ್ಗಸೂಚಿ ಪ್ರಕಟ, ಕಡ್ಡಾಯ ಪಾಲನೆಗೆ ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಶಾಲೆ, ಕಾಲೇಜುಗಳಲ್ಲಿ ಕಾರ್ಯಕ್ರಮ – ಶಿಕ್ಷಣ ಇಲಾಖೆಯಿಂದ 13 ಮಾರ್ಗಸೂಚಿ ಪ್ರಕಟ, ಕಡ್ಡಾಯ ಪಾಲನೆಗೆ ಸೂಚನೆ

Bagalkot

ಶಾಲೆ, ಕಾಲೇಜುಗಳಲ್ಲಿ ಕಾರ್ಯಕ್ರಮ – ಶಿಕ್ಷಣ ಇಲಾಖೆಯಿಂದ 13 ಮಾರ್ಗಸೂಚಿ ಪ್ರಕಟ, ಕಡ್ಡಾಯ ಪಾಲನೆಗೆ ಸೂಚನೆ

Public TV
Last updated: January 23, 2026 7:48 pm
Public TV
Share
2 Min Read
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
SHARE

ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳು, ರಾಷ್ಟ್ರೀಯ ಹಬ್ಬಗಳ ಆಚರಣೆ, ಶಾಲಾ-ಕಾಲೇಜುಗಳ (School- College) ಇತರೇ ಸಾಂಸ್ಕೃತಿಕ, ಆಡಳಿತಾತ್ಮಕ ಕಾರ್ಯಕ್ರಮ ಆಯೋಜನೆ ವೇಳೆ ವಿದ್ಯಾರ್ಥಿಗಳ ರಕ್ಷಣೆಗೆ ಸಂಬಂಧಿಸಿದಂತೆ ಸಾರ್ವಜನಿಕಾ ಶಿಕ್ಷಣ ‌ಇಲಾಖೆ (Education Department) 13 ಅಂಶಗಳ ಮಾರ್ಗಸೂಚಿಯನ್ನು ಪ್ರಕಟ ಮಾಡಿದೆ.

ಈ ಮಾರ್ಗಸೂಚಿಯನ್ನು ಎಲ್ಲಾ‌ ಶಾಲಾ-ಕಾಲೇಜುಗಳು ಕಡ್ಡಾಯವಾಗಿ ಪಾಲನೆ ಮಾಡಬೇಕೆಂದು ಸೂಚನೆ ನೀಡಲಾಗಿದೆ.

ಮಾರ್ಗಸೂಚಿಯಲ್ಲಿ ಏನಿದೆ?
1. ಧ್ವಜಾರೋಹಣ ಮಾಡುವ ಸಂದರ್ಭದಲ್ಲಿ ಧ್ವಜಾರೋಹಣ ಕಂಬದ ಬಳಿ ವಿದ್ಯುತ್ ತಂತಿಗಳು ಹಾದುಹೋಗದಂತೆ ಮತ್ತು ಕಂಬವು ವಿದ್ಯುತ್ ತಂತಿಗಳನ್ನು ಸಂಪರ್ಕಿಸದಂತೆ ಮುನ್ನೆಚ್ಚರಿಕೆ ವಹಿಸುವುದು.

2. ಧ್ವಜಾರೋಹಣ ಕಂಬಕ್ಕೆ ಧ್ವಜವನ್ನು ಏರಿಸುವ ಅಥವಾ ಇಳಿಸುವ ಕಾರ್ಯಗಳಿಗೆ ಮಕ್ಕಳನ್ನು ಬಳಸಿಕೊಳ್ಳಬಾರದು. ಧ್ವಜಾರೋಹಣಾ ಸಂದರ್ಭದಲ್ಲಿ ಅನಿರೀಕ್ಷಿತವಾಗಿ ಧ್ವಜ ಸಿಕ್ಕಿಕೊಂಡಲ್ಲಿ ಯಾವುದೇ ಕಾರಣಕ್ಕೂ ಮಕ್ಕಳನ್ನು ಧ್ವಜಕಂಬಕ್ಕೆ ಹತ್ನಿಸಬಾರದು.

3. ಮಕ್ಕಳ ಕವಾಯತು ಪಥ ಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮದ ವೇದಿಕೆ, ಮಕ್ಕಳು ಕುಳಿತುಕೊಳ್ಳುವ ಸ್ಥಳಗಳು ಸುರಕ್ಷಿತವಾಗಿರುವ ಬಗ್ಗೆ ಕಾರ್ಯಕ್ರಮದ ಮೊದಲು ಹಾಗೂ ಆಗಿಂದಾಗೆ, ಪರಿಶೀಲಿಸಿಕೊಳ್ಳತಕ್ಕದ್ದು

4. ಮಕ್ಕಳನ್ನು ಕಾರ್ಯಕ್ರಮ/ಸ್ಪರ್ಧೆಗಳಿಗೆ ಕರೆದುಕೊಂಡು ಹೋಗುವ ಮತ್ತು ಹಿಂದಿರುಗಿ ಕರೆತರುವ ವಾಹನಗಳು ಸಮರ್ಪಕವಾಗಿರುವ ಬಗ್ಗೆ ಪರಿಶೀಲಿಸಿಕೊಳ್ಳುವುದು. ವಾಹನ ಚಾಲಕರು ವೇಗಮಿತಿಯಲ್ಲಿ ಚಲಿಸುವಂತೆ ಸೂಚನೆ ನೀಡುವ ಜೊತೆಗೆ ಆಗಿಂದಾಗ ಗಮನಹರಿಸುವುದು. ಪ್ರಮುಖವಾಗಿ ಚಾಲಕರು ಮದ್ಯಪಾನ ಮಾಡಿರದ ಬಗ್ಗೆ, ಖಚಿತಪಡಿಸಿಕೊಳ್ಳುವುದು. ವಾಹನದ ಸಾಮರ್ಥ್ಯಕ್ಕಿಂತ ಹೆಚ್ಚಿನ ಸಂಖ್ಯೆಯ ಮಕ್ಕಳನ್ನು ಕರೆದೊಯ್ಯಬಾರದು.

5. ಕಾರ್ಯಕ್ರಮ ನಡೆಸುವ ಎಲ್ಲಾ ಸ್ಥಳಗಳಲ್ಲಿ ಅಳವಡಿಸಿರುವ ವಿದ್ಯುತ್ ತಂತಿಯಿಂದ ವಿದ್ಯುತ್ ಪ್ರವಹಿಸದಿರುವ ಬಗ್ಗೆ ಐಚಿತಪಡಿಸಿಕೊಳ್ಳುವ ಜೊತೆಗೆ ಮಕ್ಕಳು ಸೇರಿದಂತೆ ಸಾರ್ವಜನಿಕರ ಸಂಪರ್ಕಕ್ಕೆ ಬಾರದಂತೆ ವಿದ್ಯುತ್ ತಂತಿಗಳನ್ನು ಅಳವಡಿಸಲು ತಂತ್ರಜ್ಞರಿಗೆ ಸೂಚನೆ ನೀಡುವುದು.  ಇದನ್ನೂ ಓದಿ: ತಲೆಗೆ ಲಕ್ಷ ಲಕ್ಷ ಬಹುಮಾನ ಘೋಷಣೆಯಾಗಿದ್ದ 9 ನಕ್ಸಲರು ಶರಣು

school bus

6. ವಿದ್ಯುತ್ ತಂತಿಗಳು ಇರುವಲ್ಲಿ ಮಳೆ ನೀರು ಸೋರದಂತೆ ಮತ್ತು ಇತರ ಯಾವುದೇ ಮೂಲದಿಂದ ನೀರು ಹರಿಯದಿರುವ ಬಗ್ಗೆ ಖಚಿತಪಡಿಸಿಕೊಳ್ಳತಕ್ಕದ್ದು.

7. ಮಕ್ಕಳಿಗೆ ನೀಡುವ ನೀರು, ಪಾನೀಯ, ಆಹಾರ ಪದಾರ್ಥಗಳ ಶುಚಿತ್ರದ ಬಗ್ಗೆ ಪರಿಶೀಲಿಸುವುದು. ಮಕ್ಕಳಿಗೆ ವಿತರಿಸುವ ಪೂರ್ವದಲ್ಲಿ ಕಾರ್ಯಕ್ರಮ ಸಂಯೋಜಕರು ಪರಿಶೀಲಿಸಿ ಗುಣಮಟ್ಟವನ್ನು ಖಾತರಿಪಡಿಸಿಕೊಂಡ ನಂತರದಲ್ಲಿ ಮಕ್ಕಳಿಗೆ ವಿಸರಿಸುವುದು.

8. ಆಹಾರ ತಯಾರಿಸುವ ಸ್ಥಳಗಳಿಗೆ ಮಕ್ಕಳ ಪ್ರವೇಶವನ್ನು ನಿರ್ಬಂಧಿಸುವ ಜೊತೆಗೆ ಯಾವುದೇ ರೀತಿಯ ಬೆಂಕಿ ಅವಘಡವಾಗದಂತೆ ಗ್ಯಾಸ್ ಸಿಲಿಂಡರ್ ಸೇರಿದಂತೆ ಒಲೆಗಳು ಸಮರ್ಪಕವಾಗಿರುವ ಬಗ್ಗೆ, ಆಗಿಂದಾಗೆ, ಪರಿಶೀಲಿಸಿ ನಿಗಾ ವಹಿಸುವುದು.

9. ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಸಮರ್ಪಕವಾಗಿ ವಾಹನ ನಿಲುಗಡೆ ಮಾಡಲು ಸೂಚನಾ ಫಲಕಗಳನ್ನು ಅಳವಡಿಸಿ ವ್ಯವಸ್ಥಿತವಾಗಿ ವಾಹನ ನಿಲುಗಡೆ ಮಾಡುವಂತೆ ನಿರ್ದೇಶನ ನೀಡಿ, ಕಾರ್ಯಕ್ರಮದ ಸ್ಥಳದಿಂದ ಕನಿಷ್ಠ 100 ಮೀಟರ್ ದೂರದಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆ ಕಲ್ಪಿಸುವುದು.

10.ಅನಿರೀಕ್ಷಿತವಾಗಿ ಸಂಭವಿಸಬಹುದಾದ ಸನ್ನಿವೇಶಗಳನ್ನು ಎದುರಿಸುವ ಕುರಿತು ಮಕ್ಕಳಿಗೆ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅರಿವು ಮೂಡಿಸುವುದು ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಹಿರಿಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಸೂಕ್ತ ತರಬೇತಿ ನೀಡುವುದು.

11.ಎಲ್ಲಾ ಶಾಲೆಗಳ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸದಸ್ಯರು ಕಾರ್ಯಕ್ರಮದ ಆಯೋಜನೆಯಲ್ಲಿ ತೊಡಗಿಸಿಕೊಳ್ಳುವಂತೆ ನಿರ್ದೇಶನ ನೀಡುವುದು.

12. ಸ್ಥಳೀಯ ಆಡಳಿತಗಳು ಮಕ್ಕಳ ಸುರಕ್ಷತೆ ಕುರಿತು ಗಮನ ಹರಿಸುವುದು.

13. ಎಲ್ಲಾ ಕಾರ್ಯಕ್ರಮಗಳ ಆಯೋಜಕರು, ಸ್ಥಳೀಯ ಪೊಲೀಸ್, ವೈದ್ಯಕೀಯ ವ್ಯವಸ್ಥೆ, ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಆಡಳಿತಕ್ಕೆ ಮಕ್ಕಳ ಕಾರ್ಯಕ್ರಮದ ಕುರಿತು ಕಡ್ಡಾಯವಾಗಿ ಮಾಹಿತಿ ಒದಗಿಸಿ, ಯಾವುದೇ ತುರ್ತು ಸಂದರ್ಭದಲ್ಲಿ ಪ್ರತಿಕ್ರಿಯಿಸಲು ಸದಾ ಸನ್ನದ್ಧ ಸ್ಥಿತಿಯಲ್ಲಿರುವಂತೆ ತಿಳಿಸುವುದು.

TAGGED:collegeeducationkarnatakaprogramschoolಕರ್ನಾಟಕಕಾರ್ಯಕ್ರಮಕಾಲೇಜುಶಾಲೆಶಿಕ್ಷಣ
Share This Article
Facebook Whatsapp Whatsapp Telegram

Cinema news

Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World

You Might Also Like

Shivamogga
Districts

ಆಗುಂಬೆ ಘಾಟ್‌ನಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ಸಂಚಾರ ಬಂದ್

Public TV
By Public TV
11 minutes ago
Iran Foreign Minister Abbas Araghchi
Latest

ಶತ್ರುಗಳಿಗೆ ಹಾರ್ಮುಜ್‌ ಜಲಸಂಧಿ ನಿರ್ಬಂಧಿಸುವುದು ಇರಾನ್‌ನ ಕಾನೂನುಬದ್ಧ ಹಕ್ಕು: ವಿಶ್ವಸಂಸ್ಥೆಯಲ್ಲಿ ಅರಘ್ಚಿ ಮಾತು

Public TV
By Public TV
25 minutes ago
Fake Govt job
Districts

ಸರ್ಕಾರಿ ನೌಕರಿ ಕೊಡಿಸೋ ನಕಲಿ ನೇಮಕಾತಿ ಜಾಲ ಪತ್ತೆ – ಲಕ್ಷ ಲಕ್ಷ ಹಣ ನುಂಗಿ ಉದ್ಯೋಗಾಕಾಂಕ್ಷಿಗಳಿಗೆ ನಾಮ

Public TV
By Public TV
35 minutes ago
Kapila Tree Cut 2
Crime

ಕಪಿಲಾ ನದಿ ದಂಡೆಯಲ್ಲಿ 45 ಮರಗಳ ನಾಶ – ಆರೋಪಿ ಬಂಧನ

Public TV
By Public TV
54 minutes ago
Mangaluru Rowdy Sheeter Murder 1
Crime

ಬೆಳ್ಳಂಬೆಳಗ್ಗೆ ಕರಾವಳಿಯಲ್ಲಿ ಹರಿದ ನೆತ್ತರು – ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಕೊಲೆ

Public TV
By Public TV
1 hour ago
Donald Trump 2
Latest

ಮಾತುಕತೆ ಚೆನ್ನಾಗಿ ನಡೆಯುತ್ತಿದೆ – ಮತ್ತೆ 10 ದಿನ ಕದನ ವಿರಾಮ ಘೋಷಿಸಿದ ಟ್ರಂಪ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?