ಬಳ್ಳಾರಿ: ಜನಾರ್ದನ ರೆಡ್ಡಿ (Janardhan Reddy) ಹಾಗೂ ಶ್ರೀರಾಮುಲುಗೆ (Sriramulu) ಸೇರಿದ ಮಾಡೆಲ್ ಹೌಸ್‌ಗೆ (Model House) ಬೆಂಕಿ ಹಚ್ಚಿದ ಪ್ರಕರಣ ಸಂಬಂಧ ಇಬ್ಬರು ಅಪ್ರಾಪ್ತರು ಸೇರಿದಂತೆ ಒಟ್ಟು 8 ಮಂದಿ ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಳ್ಳಾರಿಯ ಕೌಲ್ ಬಜಾರ್‌ನ 8 ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ರೀಲ್ಸ್ ಮಾಡಲು ಹೋಗಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ಬಳ್ಳಾರಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರುಕ್ಮಿಣಿ ಅವೆನ್ಯೂ ಲೇಔಟ್‌ನ (ಜಿ ಸ್ಕೇರ್) ಸೈಟ್ ಎಂಜಿನಿಯರ್ ರಿಜ್ವಾನ್ ದೂರು ನೀಡಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ | ಸಿಎಂ ಭಾಗಿಯಾಗಬೇಕಿದ್ದ ಕಾರ್ಯಕ್ರಮದಲ್ಲಿ ಅವಘಡ – ಕಟೌಟ್ ಮುರಿದು ಬಿದ್ದು ಮೂವರು ಗಂಭೀರ
ಶುಕ್ರವಾರ ಸಂಜೆ 5:30ರ ಸುಮಾರಿಗೆ ಇಪ್ಪತ್ತಿರಿಂದ ಇಪ್ಪತೈದು ವಯಸ್ಸಿನ ಎಂಟರಿಂದ ಹತ್ತು ಜನ ಕಿಡಿಗೇಡಿಗಳು ಬಂದು ಬೆಂಕಿ ಹಚ್ಚಿದ್ದಾರೆ. ಜನಾರ್ದನ ರೆಡ್ಡಿ ಅವರ ಪತ್ನಿ ಜಿ.ಲಕ್ಷ್ಮೀ ಅವರಿಗೆ ಸೇರಿದ್ದ ಮಾಡೆಲ್ ಹೌಸ್ ಇದಾಗಿದ್ದು, ದುರುದ್ದೇಶದಿಂದಲೇ ಮಾಡೆಲ್ ಹೌಸ್‌ಗೆ ಬೆಂಕಿ ಹಚ್ಚಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಮನೆಗೆ ಬೆಂಕಿ ಬಿದ್ದ ಹಿನ್ನೆಲೆ ಟಿವಿ, ಚೇರ್ಸ್, ಸೋಫಾ ಸೆಟ್ಸ್, ಕಿಚನ್ ಸೆಟ್, ಎಸಿ, ಫ್ರಿಡ್ಜ್, ಮನೆಗೆ ಮಾಡಿಸಿದ್ದ ಪಿಓಇ, ವುಡನ್ ಡೋರ್ಸ್ ಸುಟ್ಟು ಕರಕಲಾಗಿದೆ. ಅಂದಾಜು 1.25 ಕೋಟಿ ಮೌಲ್ಯದ ವಸ್ತುಗಳು ಹಾನಿಯಾಗಿದೆ ಎಂದು ದೂರು ನೀಡಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ. ಬ್ಯಾನರ್ ಗಲಭೆಯಲ್ಲಿ ಶಾಸಕ ಭರತ್ ರೆಡ್ಡಿ ಬಳ್ಳಾರಿಯನ್ನ ಭಸ್ಮ ಮಾಡುತ್ತೆವೆ ಅಂತಾ ಹೇಳಿಕೆ ಕೊಟ್ಟಿದ್ದರು. ಆ ದೆಸೆಯಲ್ಲಿ ತನಿಖೆ ಮಾಡುವಂತೆ ದೂರು ನೀಡಲಾಗಿದೆ. ಇದನ್ನೂ ಓದಿ: ಸ್ನೇಹಿತನಿಗೆ ಬೈದಿದ್ದನ್ನು ಪ್ರಶ್ನಿಸಿದ್ದಕ್ಕೆ ಯುವಕನ ಕೊಲೆ – ಇಬ್ಬರು ಅರೆಸ್ಟ್
ಬ್ಯಾನರ್ ಘರ್ಷಣೆ ಮಾಸುವ ಮುನ್ನವೇ ಮತ್ತೊಂದು ಅವಘಡ ಸಂಭವಿಸಿದೆ. ಕಾಂಗ್ರೆಸ್‌ನವರಿಂದ ಮಾಡೆಲ್ ಹೌಸ್‌ಗೆ ಬೆಂಕಿ ಹಚ್ಚಿದ ಆರೋಪ ಕೇಳಿಬಂದಿದೆ. ಇದರಲ್ಲಿ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಕೈವಾಡ ಇದೆ ಎಂದು ರೆಡ್ಡಿ ಸಹೋದರ ಆರೋಪಿಸಿದ್ದಾರೆ. 2010ರಲ್ಲಿ ಈ ಕಟ್ಟಡ ನಿರ್ಮಾಣ ಮಾಡಿದ್ದು, ಕಟ್ಟಡ ಶಿಥಿಲಗೊಂಡಿತ್ತು. ಕಟ್ಟಡದ ಗಾಜು ಒಡೆದಿದ್ದವು. ಇನ್ನು ಪ್ರಕರಣ ಸಂಬಂಧ ಘಟನಾ ಸ್ಥಳಕ್ಕೆ ಎಫ್‌ಎಸ್‌ಎಲ್ ಟೀಂ ಭೇಟಿ ನೀಡಿದ್ದು, ಪೊಲೀಸರಿಂದ ಮಾಹಿತಿ ಪಡೆದಿದೆ. ಘಟನೆಗೆ ಸಂಬಂಧಿಸಿದಂತೆ ಮಹತ್ವದ ಸಾಕ್ಷಿಗಳ ಕಲೆ ಹಾಕಲು ಅಧಿಕಾರಿಗಳು ಮುಂದಾಗಿದ್ದಾರೆ. ಇಬ್ಬರು ಎಫ್‌ಎಸ್‌ಎಲ್ ಅಧಿಕಾರಿಗಳು ಸೇರಿದಂತೆ ಪೊಲೀಸರಿಂದ ತನಿಖೆ ನಡೆಯುತ್ತಿದೆ. ಘಟನೆ ಖಂಡಿಸಿ ಇಂದು ರಾಯಲ್ ಸರ್ಕಲ್‌ನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲಿದೆ. ಪ್ರತಿಭಟನೆ ಬಳಿಕ ಜನಾರ್ದನ ರೆಡ್ಡಿ ಹಾಗೂ ರಾಮುಲು ಸುದ್ದಿಗೋಷ್ಠಿ ನಡೆಸಲಿದ್ದಾರೆ. ಇದನ್ನೂ ಓದಿ: ಮುಡಾ ಹಗರಣ | ಸಿಎಂ ಆಪ್ತ ಮರೀಗೌಡಗೆ ಇಡಿ ಶಾಕ್ – 20 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

