ಲಕ್ನೋ: ಮದ್ಯ (Alcohol) ಸೇವಿಸಿ ಹಾಸ್ಟೆಲ್‌ಗೆ ಬಂದ ವಿದ್ಯಾರ್ಥಿಯನ್ನು ಬೈದಿದ್ದಕ್ಕೆ ಮನನೊಂದು ಹಾಸ್ಟೆಲ್ ಕಟ್ಟಡದ ನಾಲ್ಕನೇ ಮಹಡಿಯಿಂದ ಜಿಗಿದು ಬಿ.ಟೆಕ್ ವಿದ್ಯಾರ್ಥಿ (B.Tech Student) ಆತ್ಮಹತ್ಯೆ ಮಾಡಿಕೊಂಡ ಘಟನೆ ಗ್ರೇಟರ್ ನೋಯ್ಡಾದಲ್ಲಿ (Greater Noida) ನಡೆದಿದೆ.
ಝಾನ್ಸಿ ಜಿಲ್ಲೆಯ ಉದಿತ್ ಸೋನಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಉದಿತ್ ಶುಕ್ರವಾರ ರಾತ್ರಿ ತನ್ನ ಸ್ನೇಹಿತರೊಂದಿಗೆ ಮದ್ಯ ಸೇವಿಸಿ ನಾಲೆಡ್ಜ್ ಪಾರ್ಕ್ 3ರಲ್ಲಿರುವ ತನ್ನ ಹಾಸ್ಟೆಲ್‌ಗೆ ಮರಳಿದ್ದ. ಈ ವೇಳೆ ಹಾಸ್ಟೆಲ್ ಆಡಳಿತ ಮಂಡಳಿ ಉದಿತ್‌ನನ್ನು ತರಾಟೆಗೆ ತೆಗೆದುಕೊಂಡು ಆತನ ವೀಡಿಯೋವನ್ನು ತಂದೆ ವಿಜಯ್ ಸೋನಿಗೆ ಕಳುಹಿಸಿದ್ದರು. ವೀಡಿಯೋ ನೋಡಿದ ತಂದೆ ಉದಿತ್‌ಗೆ ಕರೆ ಮಾಡಿ ಬೈದಿದ್ದು, ಹಾಸ್ಟೆಲ್‌ನಿಂದ ಮನೆಗೆ ಕರೆದುಕೊಂಡು ಬರುವುದಾಗಿ ಗದರಿದ್ದರು. ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ನಿರಂತರ ಹಿಮಪಾತ – ಶ್ರೀನಗರ ಏರ್‌ಪೋರ್ಟ್‌ನಲ್ಲಿ ಹಿಮ ತೆರವು ಕಾರ್ಯ
ಇದರಿಂದ ಮನನೊಂದ ವಿದ್ಯಾರ್ಥಿ ಶನಿವಾರ ಮುಂಜಾನೆ ಹಾಸ್ಟೆಲ್ ಕಟ್ಟಡದ ನಾಲ್ಕನೇ ಮಹಡಿಯಿಂದ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೂಡಲೇ ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟು ಹೊತ್ತಿಗಾಗಲೇ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ದೃಢಪಡಿಸಿದರು. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಘಟನೆ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಘಟನೆ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ನಗರಸಭೆ ಪೌರಾಯುಕ್ತೆಗೆ ಬೆದರಿಕೆ – ರಾಜೀವ್ ಗೌಡ ನಿವಾಸದ ಮೇಲೆ ಪೊಲೀಸರ ದಾಳಿ

