ನವದೆಹಲಿ: ಕರ್ನಾಟಕದ 8 ಮಂದಿಗೆ 2026ನೇ ಸಾಲಿನ ಪದ್ಮ ಪ್ರಶಸ್ತಿ ಲಭಿಸಿದೆ. ಶತಾವಧಾನಿ ಗಣೇಶ್ (Shatavadhani Ganesh) ಅವರಿಗೆ ಕಲೆ ವಿಭಾಗದಲ್ಲಿ ಪದ್ಮಭೂಷಣ (Padma Bhushan) ಗೌರವಕ್ಕೆ ಪಾತ್ರರಾಗಿದ್ದಾರೆ.
ಒಟ್ಟು 5 ಮಂದಿಗೆ ಪದ್ಮವಿಭೂಷಣ, 13 ಮಂದಿಗೆ ಪದ್ಮಭೂಷಣ, 113 ಮಂದಿಗೆ ಪದ್ಮಶ್ರೀ ಪ್ರಶಸ್ತಿ ಕೇಂದ್ರ ಸರ್ಕಾರ ಘೋಷಿಸಿದೆ. ಅಸಾಧಾರಣ ಮತ್ತು ವಿಶಿಷ್ಟ ಸೇವೆಗಾಗಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಇದನ್ನೂ ಓದಿ: ಬೆಂಗಳೂರಿನ ಸಮಾಜ ಸೇವಕಿ ಡಾ. ಎಸ್.ಜಿ. ಸುಶೀಲಮ್ಮಗೆ ಪದ್ಮಶ್ರೀ ಪ್ರಶಸ್ತಿ

