ಬಳ್ಳಾರಿ: ಸಿರುಗುಪ್ಪ (Siruguppa) ನಗರಸಭೆ ಕಾರ್ಯಾಲಯದಲ್ಲಿ ಹಿರಿಯ ಆರೋಗ್ಯ ಅಧಿಕಾರಿಯೊಬ್ಬರು ಕಿರಿಯ ಮಹಿಳಾ ಅಧಿಕಾರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ.
ಹಿರಿಯ ಆರೋಗ್ಯ ಅಧಿಕಾರಿ ರಂಗಸ್ವಾಮಿ, ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಹಿಳಾ ಆರೋಗ್ಯ ಅಧಿಕಾರಿ ಆರೋಪಿಸಿದ್ದಾರೆ. ಈ ಸಂಬಂಧ ಮಹಿಳಾ ಅಧಿಕಾರಿ ದೂರು ನೀಡಿದ್ದಾರೆ. ದೂರಿನ ಅನ್ವಯ ಸಿರುಗುಪ್ಪ ಪೊಲೀಸ್ (Police) ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ. ಇದನ್ನೂ ಓದಿ: ರೈಲ್ವೆ ನಿಲ್ದಾಣದಲ್ಲಿ ಪ್ರೊಫೆಸರ್‌ಗೆ ಚಾಕುವಿನಿಂದ ಇರಿದು ಕೊಲೆ; ಆರೋಪಿ ಅರೆಸ್ಟ್
ಎಚ್ಚರಿಕೆ ನೀಡಿದ್ರೂ ಪದೇಪದೇ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ವಿಷಯ ಬಹಿರಂಗ ಮಾಡಿದರೆ ಪೌರಕಾರ್ಮಿಕರ ಮುಂದೆ ಅವಮಾನ ಮಾಡುವ ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ನೆಲಮಂಗಲ| ಚಾಕು, ಮಾರಕಾಸ್ತ್ರಗಳಿಂದ ರೌಡಿಶೀಟರ್ ಹತ್ಯೆ

