Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲೆಡೆ 77ನೇ ಗಣರಾಜ್ಯೋತ್ಸವದ ಸಂಭ್ರಮ – ವಿವಿಧ ಜಿಲ್ಲೆಗಳಲ್ಲಿ ಧ್ವಜಾರೋಹಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದಲ್ಲೆಡೆ 77ನೇ ಗಣರಾಜ್ಯೋತ್ಸವದ ಸಂಭ್ರಮ – ವಿವಿಧ ಜಿಲ್ಲೆಗಳಲ್ಲಿ ಧ್ವಜಾರೋಹಣ

Bengaluru City

ರಾಜ್ಯದಲ್ಲೆಡೆ 77ನೇ ಗಣರಾಜ್ಯೋತ್ಸವದ ಸಂಭ್ರಮ – ವಿವಿಧ ಜಿಲ್ಲೆಗಳಲ್ಲಿ ಧ್ವಜಾರೋಹಣ

Public TV
Last updated: January 26, 2026 2:28 pm
Public TV
Share
3 Min Read
Republic Day Celebration 2
SHARE

ಬೆಂಗಳೂರು: ಇಂದು ದೇಶದೆಲ್ಲೆಡೆ 77ನೇ ಗಣರಾಜ್ಯೋತ್ಸವ (77th Republic Day Celebration) ದಿನಾಚರಣೆ ಆಚರಿಸಲಾಗುತ್ತಿದೆ. ಈ ಹಿನ್ನೆಲೆ ನಾಡಿನ ವಿವಿಧ ಜಿಲ್ಲೆಗಳಲ್ಲಿ ಆಯಾಯ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದ್ದು, ಗೌರವ ವಂದನೆ ಸ್ವೀಕರಿಸಿದ್ದಾರೆ. ಅಲ್ಲದೇ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಕಣ್ತುಂಬಿಕೊಂಡಿದ್ದಾರೆ. ಯಾವ ಜಿಲ್ಲೆಯಲ್ಲಿ ಪ್ರಜಾಪ್ರಭುತ್ವದ ಹಬ್ಬ ಹೇಗಿತ್ತು ಅಂತಾ ನೋಡೋದಾದ್ರೆ…

ರಾಯಚೂರು
77ನೇ ಗಣರಾಜ್ಯೋತ್ಸವವನ್ನ ರಾಯಚೂರಿನಲ್ಲಿ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಪೊಲೀಸ್, ವಿದ್ಯಾರ್ಥಿಗಳು, ಕವಾಯತ್ ತಂಡಗಳಿಂದ ಆಕರ್ಷಕ ಪರೇಡ್ ನಡೆಯಿತು. ತೆರೆದ ವಾಹನದಲ್ಲಿ ಸಚಿವ ಶರಣಪ್ರಕಾಶ್ ಪಾಟೀಲ್ ಪರೇಡ್ ತಂಡಗಳ ಪರಿವೀಕ್ಷಣೆ ನಡೆಸಿ ಪರೇಡ್ ತಂಡಗಳು ಹಾಗೂ ಸಾರ್ವಜನಿಕರಿಂದ ಗೌರವ ವಂದನೆ ಸ್ವೀಕರಿಸಿದರು. ಇದನ್ನೂ ಓದಿ: ಮೊದಲ ಬಾರಿಗೆ ಸೈಂಟ್ ಮೇರಿಸ್ ದ್ವೀಪದಲ್ಲಿ ಧ್ವಜಾರೋಹಣ – ಅದು ನನ್ನ ಭಾಗ್ಯ ಎಂದ ಹೆಬ್ಬಾಳ್ಕರ್‌

Republic Day Celebration

ಅಲ್ಲದೇ 77ನೇ ಗಣರಾಜ್ಯೋತ್ಸವ ಹಿನ್ನೆಲೆ ರಾಯಚೂರಿನ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ರಾಷ್ಟ್ರಧ್ವಜಾರೋಹಣ ಕಾರ್ಯಕ್ರಮ ವೇಳೆ ವಿವಿಧ ಶಾಲಾ ಮಕ್ಕಳು ಅದ್ಭುತ ಪ್ರದರ್ಶನಗಳನ್ನ ನೀಡಿದರು. ಮಾನ್ವಿಯ ಬಲ್ಲಟಗಿಯ ಬಸವೇಶ್ವರ ಶಾಲೆ ಮಕ್ಕಳು ಮಲ್ಲಗಂಬದ ಪ್ರದರ್ಶನ ನೀಡಿ ನೆರೆದಿದ್ದವರನ್ನ ನಿಬ್ಬೆರಗಾಗುವಂತೆ ಮಾಡಿದರು. ವಿದ್ಯಾರ್ಥಿಗಳ ಮಲ್ಲಗಂಬ ಪ್ರದರ್ಶನಕ್ಕೆ ಮೆಚ್ಚುಗೆ ವ್ಯಕ್ತವಾಯಿತು. ಪುಟ್ಟಪುಟ್ಟ ಮಕ್ಕಳು ಸಹ ಭಾಗವಹಿಸಿ ಮಲ್ಲಗಂಬದ ಆಕರ್ಷಕ ಪ್ರದರ್ಶನ ನೀಡಿದ್ದು ಬೆರಗಾಗುವಂತೆ ಮಾಡಿತು. ಇದನ್ನೂ ಓದಿ: ಗಗನಯಾತ್ರಿ ಶುಭಾಂಶು ಶುಕ್ಲಾಗೆ ʻಅಶೋಕ ಚಕ್ರʼ ಪ್ರದಾನ

Republic Day Celebration 3

ಹಾವೇರಿ 
ಹಾವೇರಿ ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಧ್ವಜಾರೋಹಣ ನೆರವೇರಿಸಿದರು. ಪೊಲೀಸ್ ಇಲಾಖೆ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಗೌರವ ವಂದನೆ ಸ್ವೀಕರಿಸಿದ ಸಚಿವ ಶಿವಾನಂದ ಪಾಟೀಲ್ ಜಿಲ್ಲೆಯ ಜನರಿಗೆ 77ನೇ ಗಣರಾಜ್ಯೋತ್ಸವದ ಶುಭಾಶಯ ತಿಳಿಸಿದರು. ಇದನ್ನೂ ಓದಿ: ಸಂವಿಧಾನ ರಕ್ಷಿಸಿದ್ರೆ ದೇಶ ಸುಭದ್ರವಾಗಿ ಉಳಿಯುತ್ತೆ: ಸಿದ್ದರಾಮಯ್ಯ

Republic Day Celebration 1

ಗಡಿನಾಡು ಬೀದರ್
ಗಡಿ ಜಿಲ್ಲೆ ಬೀದರ್‌ನಲ್ಲಿ 77ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆಯವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಬೀದರ್ ನಗರದ ನೆಹರು ಜಿಲ್ಲಾ ಕ್ರೀಡಾಂಗಣದಲ್ಲಿ ಸಚಿವ ಖಂಡ್ರೆ ಧ್ವಜಾರೋಹಣ ನೆರವೇರಿಸಿದ್ದು, ತೆರೆದ ವಾಹನದಲ್ಲಿ ಗೌರವ ವಂದನೆ ಸ್ವೀಕರಿಸಿದರು. ವಿವಿಧ ಪೊಲೀಸ್ ತುಕಡಿಗಳು, ವಿದ್ಯಾರ್ಥಿಗಳು, ಕವಾಯತ್ ತಂಡಗಳಿಂದ ಆಕರ್ಷಕ ಪಥ ಸಂಚಲನ ಮಾಡಿದ್ದು, ವಿವಿಧ ಶಾಲಾ ಮಕ್ಕಳಿಂದ ದೇಶ ಭಕ್ತ ಗೀತೆಗೆ ನೃತ್ಯ ಮಾಡಿ ಗಮನಸೆಳೆದರು. ಇದನ್ನೂ ಓದಿ: ಪರೇಡ್‌ನಲ್ಲಿ ಕರ್ನಾಟಕ ಮುಧೋಳ ಶ್ವಾನ ಆಕರ್ಷಣೆ; ಗಮನ ಸೆಳೆದ ಬ್ಯಾಕ್ಟ್ರಿಯನ್ ಒಂಟೆ, ಶಿಕಾರಿ ಪಕ್ಷಿ; ಇವುಗಳ ವಿಶೇಷತೆ ಏನು?

ವಿಜಯಪುರ
ವಿಜಯಪುರ ಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ಬಳಿಕ ತೆರೆದ ವಾಹನದಲ್ಲಿ ಆಕರ್ಷಕ ಪಥಸಂಚಲನವನ್ನು ವಿಕ್ಷಿಸಿದರು. ಇದನ್ನೂ ಓದಿ: ಕರ್ತವ್ಯ ಪಥದಲ್ಲಿ ಭಾರತ ಸೇನೆಯ ಶಕ್ತಿ ಪ್ರದರ್ಶನ – ಮೊದಲ ಬಾರಿಗೆ ಕಾಣಿಸಿಕೊಂಡ ಡ್ರೋನ್‌

Republic Day Celebration 4

ಧಾರವಾಡ
ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ವತಿಯಿಂದ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸುವ ಮೂಲಕ ಗಣರಾಜ್ಯೋತ್ಸವದ ಸಂಭ್ರಮವನ್ನು ಇಮ್ಮಡಿಗೊಳಿಸಿದರು. ಧ್ವಜಾರೋಹಣದ ನಂತರ ಜಿಲ್ಲಾ ಪೊಲೀಸರಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಅಲ್ಲದೇ ಸಚಿವ ಸಂತೋಷ ಲಾಡ್ ಅವರು ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿದರು. ಇದನ್ನೂ ಓದಿ: ಯುದ್ಧ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ಮೋದಿ ಗೌರವ; ರಾಷ್ಟ್ರಪತಿಗಳಿಂದ ಧ್ವಜಾರೋಹಣ

ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ಸಚಿವ ಮಧು ಬಂಗಾರಪ್ಪ ಧ್ವಜಾರೋಹಣ ನೆರವೇರಿಸಿದರು. ನಂತರ ತೆರದ ಜೀಪಿನಲ್ಲಿ ನಿಂತು ಗೌರವ ವಂದನೆ ಸ್ವೀಕರಿಸಿದರು.

TAGGED:bidardharwadflag hoistinghaverikarnatakaraichurrepublic dayRepublic Day Celebrationvijayapuraಗಣರಾಜ್ಯೋತ್ಸವಧಾರವಾಡಧ್ವಜಾರೋಹಣಬೀದರ್ರಾಯಚೂರುವಿಜಯಪುರಹಾವೇರಿ
Share This Article
Facebook Whatsapp Whatsapp Telegram

Cinema news

Gilli Nata 6
ಚನ್ನಪಟ್ಟಣದಲ್ಲಿ ಗಿಲ್ಲಿ ಕ್ರೇಜ್ – ವೇದಿಕೆ ಏರಿದ ಅಭಿಮಾನಿಗಳ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ
Cinema Districts Karnataka Latest Ramanagara States Top Stories
Anantha Padmanabha
ಹಿಟ್‌ ಡೈಲಾಗ್‌ ರೈಟರ್‌ ಪ್ರಶಾಂತ್‌ ರಾಜಪ್ಪ ನಿರ್ದೇಶನದ ಚೊಚ್ಚಲ ಚಿತ್ರದ ಟೈಟಲ್ ರಿವೀಲ್
Cinema Latest Sandalwood
rashmika vijay devarakonda geetha govindam
ರಶ್ಮಿಕಾ, ವಿಜಯ್‌ ಮದುವೆಗೆ ಬೆಂಗಳೂರಿನಿಂದ ಹೂ ಪೂರೈಕೆ
Bengaluru City Cinema Latest Main Post Sandalwood South cinema Top Stories
Dharmendra Mammootty Alka Yagnik
ಧರ್ಮೇಂದ್ರಗೆ ಪದ್ಮವಿಭೂಷಣ; ಮಮ್ಮುಟ್ಟಿ, ಅಲ್ಕಾ ಯಾಗ್ನಿಕ್‌ಗೆ ಪದ್ಮಭೂಷಣ ಪ್ರಶಸ್ತಿ
Cinema Latest Main Post National

You Might Also Like

Yatnal amit shah
Districts

ರಾಜ್ಯದಲ್ಲಿ SIR ಜಾರಿಗೊಳಿಸಿ, ಅಕ್ರಮ ಬಾಂಗ್ಲಾ ವಲಸಿಗರನ್ನು ಗಡೀಪಾರು ಮಾಡಿ – ಕೇಂದ್ರ ಗೃಹ ಸಚಿವರಿಗೆ ಯತ್ನಾಳ್ ಪತ್ರ

Public TV
By Public TV
10 minutes ago
Gokarna Tourists Rescue
Districts

ಗೋಕರ್ಣ | ಸಮುದ್ರಕ್ಕಿಳಿದು ಅಲೆಗೆ ಸಿಲುಕಿದ ಮೂರು ಜನ ಪ್ರವಾಸಿಗರ ರಕ್ಷಣೆ

Public TV
By Public TV
23 minutes ago
Chikkaballapura crime
Chikkaballapur

ಚಿಕ್ಕಬಳ್ಳಾಪುರ | ವಿವಾಹಿತ ಪ್ರಿಯತಮೆ ಕೊಂದು ವಿವಾಹಿತ ಪ್ರಿಯಕರ ಆತ್ಮಹತ್ಯೆ

Public TV
By Public TV
24 minutes ago
Bengaluru Banshankari Suicide
Bengaluru City

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ನೇಣು ಬಿಗಿದು ಗೃಹಿಣಿ ಆತ್ಮಹತ್ಯೆ

Public TV
By Public TV
44 minutes ago
congress flag
Bengaluru City

ಕೇಂದ್ರದ ವಿರುದ್ಧ ಸಮರ ಸಾರಿದ ಕಾಂಗ್ರೆಸ್ – ಮನರೇಗಾ ರದ್ದು ಖಂಡಿಸಿ ನಾಳೆ ರಾಜಭವನ ಚಲೋ

Public TV
By Public TV
50 minutes ago
BMTC bus hits train in Sadaramangala
Bengaluru City

ರೈಲಿಗೆ ಗುದ್ದಿದ ಬಿಎಂಟಿಸಿ ಬಸ್‌ – ಹಿಂಭಾಗ ಅಪ್ಪಚ್ಚಿ

Public TV
By Public TV
52 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?