ವಿಜಯಪುರ: ರಾಜ್ಯದಲ್ಲಿ ಎಸ್‌ಐಆರ್ ಜಾರಿಗೊಳಿಸಿ, ಅಕ್ರಮ ಬಾಂಗ್ಲಾ ವಲಸಿಗರನ್ನು ಅವರ ದೇಶಕ್ಕೆ ಗಡೀಪಾರು ಮಾಡಿ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಪತ್ರವನ್ನು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಅವರು, ಕಾಂಗ್ರೆಸ್ ಸರ್ಕಾರದ ವೈಫಲ್ಯದಿಂದ ಕರ್ನಾಟಕ ಬಾಂಗ್ಲಾ ನಿವಾಸಿಗಳ ತವರೂರಾಗಿದೆ. ರಾಜ್ಯದಲ್ಲಿರುವ ಪ್ರತಿಯೊಬ್ಬ ಬಾಂಗ್ಲಾದೇಶೀಯರನ್ನು ಎಸ್‌ಐಆರ್ ಮಾದರಿಯಂತೆ ಪತ್ತೆ ಮಾಡಿ, ಅವರ ದಾಖಲಾತಿಯನ್ನು ಅಳಿಸುವುದು ಹಾಗೂ ಅವರ ದೇಶಕ್ಕೆ ಗಡಿಪಾರು ಮಾಡಿ ಎಂದು ಮನವಿ ಮಾಡಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಗೋಕರ್ಣ | ಸಮುದ್ರಕ್ಕಿಳಿದು ಅಲೆಗೆ ಸಿಲುಕಿದ ಮೂರು ಜನ ಪ್ರವಾಸಿಗರ ರಕ್ಷಣೆ
ರಾಜ್ಯದೆಲ್ಲೆಡೆ ಬಾಂಗ್ಲಾ ನಿವಾಸಿಗಳು ಅಕ್ರಮವಾಗಿ ನೆಲೆಸಿದ್ದಲ್ಲದೆ ಆಧಾರ್ ಕಾರ್ಡ್ ಸೇರಿದಂತೆ ಅನೇಕ ಗುರುತಿನ ಚೀಟಿಯನ್ನು ಪಡೆದು ಸ್ಥಳೀಯ ದೇಶವಾಸಿಗಳಿಗೆ ಸಲ್ಲಬೇಕಾಗಿದ್ದ ಸಂಪನ್ಮೂಲಗಳನ್ನು ಬಳಸುತ್ತಿರುವುದು ದುರದೃಷ್ಟಕರ. ಇಲ್ಲಿ ದುಡಿಯುವ ಹಣವನ್ನು ಬಾಂಗ್ಲಾದೇಶಕ್ಕೆ ರವಾನಿಸಿ ಭಾರತವನ್ನು ಅಭದ್ರಗೊಳಿಸಲು ಉಗ್ರ ಸಂಘಟನೆಗಳಿಗೆ ನೆರವು ನೀಡುತ್ತಿರುವ ಬಗ್ಗೆಯೂ ಗೊತ್ತಾಗಿದೆ ಎಂದಿದ್ದಾರೆ.
ಕಾಂಗ್ರೆಸ್ ಸರ್ಕಾರದ ವೈಫಲ್ಯದಿಂದ ಕರ್ನಾಟಕ ಬಾಂಗ್ಲಾ ನಿವಾಸಿಗಳ ತವರೂರಾಗಿದೆ.
ರಾಜ್ಯದೆಲ್ಲೆಡೆ ಬಾಂಗ್ಲಾ ನಿವಾಸಿಗಳು ಅಕ್ರಮವಾಗಿ ನೆಲೆಸಿದ್ದಲ್ಲದೆ ಆಧಾರ್ ಕಾರ್ಡ್ ಸೇರಿದಂತೆ ಅನೇಕ ಗುರುತಿನ ಚೀಟಿಯನ್ನು ಪಡೆದು ಸ್ಥಳೀಯ ದೇಶವಾಸಿಗಳಿಗೆ ಸಲ್ಲಬೇಕಾಗಿದ್ದ ಸಂಪನ್ಮೂಲಗಳನ್ನು ಬಳಸುತ್ತಿರುವುದು ದುರದೃಷ್ಟಕರ. ಇಲ್ಲಿ ದುಡಿಯುವ ಹಣವನ್ನು… pic.twitter.com/utrsveFM9A
— Basanagouda R Patil (Yatnal) (@BasanagoudaBJP) January 26, 2026
ಕಾಫಿ ತೋಟ, ತ್ಯಾಜ್ಯ ನಿರ್ವಹಣಾ ಘಟಕ, ಮನೆ ಹಾಗೂ ಅಪಾರ್ಟ್ಮೆಂಟ್‌ಗಳಲ್ಲಿ ಮನೆಗೆಲಸ, ಚಾಲಕ, ಚಿಂದಿ ಆಯುವ ಕೆಲಸವನ್ನು ಮಾಡಿಕೊಂಡು ಭಾರತವನ್ನೇ ತಮ್ಮ ನೆಲೆಯನ್ನಾಗಿ ಮಾಡಿಕೊಂಡಿರುವುದನ್ನು ಮಾಧ್ಯಮಗಳು, ಹಿಂದೂ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಬಯಲಿಗೆಳಿದಿದ್ದಾರೆ. ಇಷ್ಟೆಲ್ಲಾ ಸಾಕ್ಷ್ಯಗಳಿದ್ದರೂ ಸಹ ಅಕ್ರಮ ಬಾಂಗ್ಲಾದೇಶಿ ವಾಸಿಗಳನ್ನು ಹುಡುಕಿಕೊಟ್ಟ ಮಾಧ್ಯಮ, ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿ ಸರ್ಕಾರ ಪರೋಕ್ಷವಾಗಿ ಅವರ ಪರವೇ ನಿಂತಿದೆ ಎಂದು ಕಿಡಿಕಾರಿದ್ದಾರೆ.
ದೇಶದ ಐಕ್ಯತೆಗೆ, ಒಗ್ಗಟ್ಟಿಗೆ ಹಾಗೂ ಸಮಗ್ರತೆಗೆ ಬಾಂಗ್ಲಾ ನಿವಾಸಿಗಳನ್ನು ಕೂಡಲೇ ಗಡಿಪಾರುಗೊಳಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಲು ಮಾನ್ಯ ಕೇಂದ್ರ ಗೃಹ ಮಂತ್ರಿಗಳಾದ ಅಮಿತ್ ಶಾ ಅವರಿಗೆ ಸವಿವರವಾಗಿ ಪತ್ರ ಬರೆದಿದ್ದೇನೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಚಿಕ್ಕಬಳ್ಳಾಪುರ | ವಿವಾಹಿತ ಪ್ರಿಯತಮೆ ಕೊಂದು ವಿವಾಹಿತ ಪ್ರಿಯಕರ ಆತ್ಮಹತ್ಯೆ

