ಗದಗ: ಲಕ್ಕುಂಡಿಯಲ್ಲಿ (Lakkundi) ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ (Gold Treasure) ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ (Prajwal Ritti) ಬಂಪರ್ ಉಡುಗೊರೆ ಸಿಕ್ಕಿದೆ. ಗಣರಾಜ್ಯೋತ್ಸವದ (Republic Day) ದಿನವೇ ರಾಜ್ಯ ಸರ್ಕಾರ (Karnataka Government) ಬಂಪರ್ ಉಡುಗೊರೆ ಘೋಷಿಸಿದೆ.
ಪ್ರಜ್ವಲ್ ರಿತ್ತಿ ಕುಟುಂಬಕ್ಕೆ 30*40 ಅಳತೆಯ ನಿವೇಶನ, ಮನೆ ನಿರ್ಮಾಣಕ್ಕಾಗಿ 5 ಲಕ್ಷ ರೂ. ನಗದು ಸಹಾಯ ಹಾಗೂ ಪ್ರಜ್ವಲ್ ತಾಯಿ ಕಸ್ತೂರೆವ್ವ ರಿತ್ತಿಗೆ ಹೊರಗುತ್ತಿಗೆ ಆಧಾರದ ಸರ್ಕಾರಿ ಕೆಲಸ ನೀಡಲಾಗುತ್ತದೆ ಎಂದು ಹೆಚ್.ಕೆ ಪಾಟೀಲ್ ಘೋಷಿಸಿದ್ದಾರೆ. ಅಷ್ಟೇ ಅಲ್ಲದೇ ಹೆಚ್‌ಕೆ ಪಾಟೀಲ್ ರಿತ್ತಿ ಕುಟುಂಬಕ್ಕೆ ನಿವೇಶನ ಪ್ರಮಾಣ ಪತ್ರ ಹಾಗೂ ಕಸ್ತೂರೆವ್ವರಿಗೆ ಉದ್ಯೋಗದ ಭರವಸೆ ಆದೇಶ ಪತ್ರವನ್ನು ವಿತರಿಸಿದ್ದಾರೆ. ಇದನ್ನೂ ಓದಿ: ಲಕ್ಕುಂಡಿಯಲ್ಲಿ ಕಬ್ಬಿಣದ ಉಂಡೆ, ಪಚ್ಚೆ ಕಲ್ಲು ಪತ್ತೆ
ಸರ್ಕಾರದ ಈ ನಡೆ ಪ್ರಮಾಣಿಕತೆಗೆ ಸಿಕ್ಕ ಗೌರವ ಎಂದು ಸ್ಥಳೀಯರು ಪ್ರಶಂಸಿಸಿದ್ದಾರೆ. ಜನವರಿ 10ರಂದು ಲಕ್ಕುಂಡಿಯಲ್ಲಿ ಪ್ರಜ್ವಲ್ ರಿತ್ತಿ ಕುಟುಂಬ ಮನೆ ನಿರ್ಮಾಣಕ್ಕಾಗಿ ಪಾಯ ಅಗೆಯುವ ವೇಳೆ 466 ಗ್ರಾಂ ತೂಕದ ಪುರಾತನ ಚಿನ್ನದ ಆಭರಣಗಳ ತಂಬಿಗೆ ಪತ್ತೆಯಾಗಿತ್ತು.
ಚಿನ್ನ ನಿಧಿ ರೂಪದಲ್ಲಿ ಸಿಕ್ಕಿದ್ದರೂ ಯಾವುದೇ ಲಾಲಸೆಗೆ ಒಳಗಾಗದೇ ಕುಟುಂಬವು ಅದನ್ನು ಸರ್ಕಾರಕ್ಕೆ ಹಸ್ತಾಂತರಿಸಿದ್ದು ರಾಜ್ಯಾದ್ಯಂತ ಮೆಚ್ಚುಗೆಗೆ ಪಾತ್ರವಾಗಿತ್ತು.

