ನಟಿ ಕಾವ್ಯ ಗೌಡ (Kavya Gowda) ಮತ್ತು ಆಕೆಯ ಪತಿ ಸೋಮಶೇಖರ್ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸೋಮಶೇಖರ್ ಅವರ ಅತ್ತಿಗೆಯ ತಂದೆಯಿಂದ ಹಲ್ಲೆ ನಡೆದಿದೆ ಎನ್ನಲಾಗಿದೆ. ನಟಿ ಕಾವ್ಯ ಗೌಡ ಜನಪ್ರಿಯತೆಯನ್ನ ಸಿಹಿಸಲಾಗದೇ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಇದನ್ನೂ ಓದಿ: ರಾಘವೇಂದ್ರ ಚಿತ್ರವಾಣಿಗೆ 50ರ ಸಂಭ್ರಮ – ಸಿನಿ ಗಣ್ಯರಿಂದ ಲೋಗೋ ಲಾಂಚ್
ಮನೆಗೆ ನುಗ್ಗಿ ಅವಾವ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ. ನಿನ್ನನ್ನ ರೇಪ್ ಮಾಡ್ತೇನೆ ಎಂದು ಬೆದರಿಕೆ ಹಾಕಿ ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ. ಕಾವ್ಯ ಪತಿಗೆ ಚಾಕುವಿನಿಂದ ಇರಿದು ಬೆದರಿಕೆ ಹಾಕಲಾಗಿದೆ.
ಗಾಯಗೊಂಡಿರುವ ನಟಿ ಮತ್ತು ಪತಿ ಸದ್ಯಕ್ಕೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾವ್ಯ ಗೌಡ ಅಕ್ಕ ಭವ್ಯ ಗೌಡ ಅವರಿಂದ ರಾಮಮೂರ್ತಿ ನಗರ ಪೊಲೀಸ್ ಸ್ಟೇಷನ್‌ನಲ್ಲಿ ದೂರು ದಾಖಲಾಗಿದೆ. ಇದನ್ನೂ ಓದಿ: ಚನ್ನಪಟ್ಟಣದಲ್ಲಿ ಗಿಲ್ಲಿ ಕ್ರೇಜ್ – ವೇದಿಕೆ ಏರಿದ ಅಭಿಮಾನಿಗಳ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ
ರವಿಕುಮಾರ್‌ನಿಂದ ರೇಪ್ ಬೆದರಿಕೆ ಬಂದಿದೆ ಎನ್ನಲಾಗಿದೆ. ನಟಿ ಕಾವ್ಯ ಗೌಡ ಮಾನಸಿಕವಾಗಿ ನೊಂದಿದ್ದಾರೆ. ಪ್ರೇಮ, ನಂದಿಶ್, ಪ್ರಿಯಾ, ರವಿಕುಮಾರ್ ವಿರುದ್ಧ ರಾಮಮೂರ್ತಿ ನಗರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.


