ತುಮಕೂರು: ಮನೆಯೊಂದರ ಒಳಗೆ ಸೇರಿಕೊಂಡಿದ್ದ ಕಳ್ಳರನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ (Police) ಒಪ್ಪಿಸಿದ ಘಟನೆ ತುರುವೇಕೆರೆ (Turuvekere) ತಾಲೂಕಿನ ಮಾಯಸಂದ್ರ ಗ್ರಾಮದಲ್ಲಿ ನಡೆದಿದೆ.
ಆಂದ್ರಪ್ರದೇಶದ ಚಿತ್ತೂರು ಮೂಲದ ಇಬ್ಬರು ಕಳ್ಳರು ಸೋಮವಾರ ತಡರಾತ್ರಿ ಗ್ರಾಮದ ಮನೆಯೊಂದಕ್ಕೆ ನುಗ್ಗಿ ಕಳ್ಳತನಕ್ಕೆ ಇಳಿದಿದ್ದರು. ಈ ವೇಳೆ ಮಾಹಿತಿ ತಿಳಿದ ಗ್ರಾಮಸ್ಥರು ಇಡೀ ಮನೆಯನ್ನು ಸುತ್ತುವರಿದು ಕಳ್ಳರನ್ನು ಹಿಡಿದಿದ್ದಾರೆ. ಬಳಿಕ ಇಬ್ಬರನ್ನೂ ತುರುವೇಕೆರೆ ಉಪಕೇಂದ್ರ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ರಾಜೀವ್ ಗೌಡಗೆ ತಲೆಮರೆಸಿಕೊಳ್ಳಲು ಸಹಾಯ – ಮಂಗಳೂರಿನ ಉದ್ಯಮಿ ಅರೆಸ್ಟ್
ಕಳ್ಳರಿಂದ ಹಣ, ಒಡವೆ, ಚಾಕು ಇನ್ನಿತರೆ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗ್ರಾಮಸ್ಥರ ಸಮಯಪ್ರಜ್ಞೆ ಹಾಗೂ ಸಾಹಸಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಆಸ್ತಿಗಾಗಿ ಕೊಲೆ ಆರೋಪ – ಮಗನ ವಿರುದ್ಧ ದೂರು ಕೊಟ್ಟ ಮರುದಿನವೇ ತಂದೆ ಅನುಮಾನಾಸ್ಪದ ಸಾವು

