ವಾಷಿಂಗ್ಟನ್: ಇಂದು ರಾತ್ರಿ ಒಂದು ಇಡೀ ನಾಗರಿಕತೆಯೇ (Civilization) ಅಂತ್ಯವಾಗಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಎಚ್ಚರಿಕೆ ನೀಡಿದ್ದಾರೆ.
ಇರಾನ್‌ಗೆ ನೀಡಿದ 48 ಗಂಟೆಗಳ ಡೆಡ್‌ಲೈನ್ (48 Hours Deadline) ಅಮೆರಿಕ ಕಾಲಮಾನ ಮಂಗಳವಾರ ರಾತ್ರಿ 8 ಗಂಟೆ ಅಂತ್ಯವಾಗಲಿರುವ ಹಿನ್ನೆಲೆಯಲ್ಲಿ ಟ್ರಂಪ್ ಕೊನೆಯ ಎಚ್ಚರಿಕೆ ಸಂದೇಶವನ್ನು ತಮ್ಮ ಟ್ರೂಥ್ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ. ಇದನ್ನೂ ಓದಿ: ಇರಾನ್ ಡೆಡ್‌ಲೈನ್| ಅಮೆರಿಕದ ಭಾರತೀಯ ರಾಯಭಾರಿಯನ್ನು ಶ್ವೇತಭವನಕ್ಕೆ ಆಹ್ವಾನಿಸಿದ ಟ್ರಂಪ್

ಪೋಸ್ಟ್‌ನಲ್ಲಿ ಏನಿದೆ?
ಇಡೀ ನಾಗರಿಕತೆಯು ಇಂದು ರಾತ್ರಿ ಸಾಯಲಿದೆ. ಮತ್ತೆಂದೂ ಈ ನಾಗರಿಕತೆ ಮರಳುವುದಿಲ್ಲ. ಈ ಘಟನೆ ಸಂಭವಿಸಬೇಕೆಂದು ನಾನು ಬಯಸುವುದಿಲ್ಲ, ಆದರೆ ಅದು ಬಹುಶಃ ಸಂಭವಿಸುವ ಸಾಧ್ಯತೆಯಿದೆ.
ಈಗ ನಾವು ಸಂಪೂರ್ಣ ಆಡಳಿತ ಬದಲಾವಣೆಯನ್ನು ಬಯಸುತ್ತೇವೆ. ಬಹುಶಃ ಕ್ರಾಂತಿಕಾರಿಯಾಗಿ ಅದ್ಭುತವಾಗಿ ಏನಾದರೂ ಸಂಭವಿಸಬಹುದು, ಯಾರಿಗೆ ತಿಳಿದಿದೆ? ಇಂದು ರಾತ್ರಿ ಪ್ರಪಂಚದ ದೀರ್ಘ ಮತ್ತು ಸಂಕೀರ್ಣ ಇತಿಹಾಸದ ಪ್ರಮುಖ ಕ್ಷಣಗಳಲ್ಲಿ ಒಂದಾಗಲಿದೆ. ಇದನ್ನೂ ಓದಿ: ಇರಾನ್ ಮೇಲೆ ಪರಮಾಣು ದಾಳಿಗೆ ಸಿದ್ಧತೆ: ವಿಶ್ವಸಂಸ್ಥೆಯ ರಾಜತಾಂತ್ರಿಕ ರಾಜೀನಾಮೆ
ಟ್ರಂಪ್ ಡೆಡ್‌ಲೈನ್ ಏನು?
ಹಾರ್ಮುಜ್ ಜಲಸಂಧಿಯನ್ನು (Strait of Hormuz) ಮುಕ್ತಗೊಳಿಸಬೇಕು ಅಥವಾ ಒಪ್ಪಂದಕ್ಕೆ ಸಹಿ ಹಾಕಲು ಡೊನಾಲ್ಡ್ ಟ್ರಂಪ್ ಇರಾನ್‌ಗೆ ಅಮೆರಿಕ ಕಾಲಮಾನ ಮಂಗಳವಾರ ರಾತ್ರಿ 8 ಗಂಟೆ(ಭಾರತೀಯ ಕಾಲಮಾನ ಬುಧವಾರ ಬೆಳಗ್ಗೆ 6:30) ಡೆಡ್‌ಲೈನ್ ನೀಡಿದ್ದಾರೆ. ಈ ಗಡುವು ಮೀರಿದರೆ ಇರಾನ್‌ನ ವಿದ್ಯುತ್ ಸ್ಥಾವರ ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಎಚ್ಚರಿಸಿದ್ದಾರೆ.
