ಶಿವಮೊಗ್ಗ: ಜಮೀನು ಖಾತೆ ಬದಲಾವಣೆಗೆ 4ಲಕ್ಷ ರೂ. ಲಂಚಕ್ಕೆ (Bribe) ಬೇಡಿಕೆ ಇಟ್ಟು, 1 ಲಕ್ಷ ರೂ. ಹಣ ಮುಂಗಡವಾಗಿ ಪಡೆಯುವಾಗ ಚಿಕ್ಕಜಂಬೂರು (Chikkajamburu) ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಗ್ರಾಮ ಲೆಕ್ಕಾಧಿಕಾರಿಯನ್ನು ವಿಠಲ ಎಂದು ಗುರುತಿಸಲಾಗಿದೆ. ಶಿಕಾರಿಪುರ (Shikaripur) ಪಟ್ಟಣದ ಸರ್ಕಾರಿ ನೌಕರರ ಕ್ಯಾಂಟೀನ್‌ನಲ್ಲಿ 1ಲಕ್ಷ ರೂ. ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರು ಇವರನ್ನು ವಶಕ್ಕೆ ಪಡೆದಿದ್ದರು. ಜಂಬೂರಿನ ಜಿಕ್ರಿಯಾ ಬೇಗ್ ಎಂಬವರು ತಮ್ಮ ತಂದೆಯ ವಿಲ್‌ಪತ್ರದಂತೆ ಜಮೀನಿನ ಖಾತೆ ಬದಲಾವಣೆ ಅರ್ಜಿ ಸಲ್ಲಿಸಿದ್ದರು. ಖಾತೆ ಬದಲಾವಣೆಗೆ ಗ್ರಾಮ ಲೆಕ್ಕಾಧಿಕಾರಿ 4 ಲಕ್ಷ ರೂ. ಬೇಡಿಕೆ ಇಟ್ಟಿದ್ದರು. ಇದನ್ನೂ ಓದಿ: 40,000 ರೂ. ಲಂಚ ಪಡೆಯುವಾಗ ರೆಡ್‌ಹ್ಯಾಂಡಾಗಿ ‘ಲೋಕಾ’ ಬಲೆಗೆ ಬಿದ್ದ ಪಿಎಸ್‌ಐ
ಇದರಲ್ಲಿ 1 ಲಕ್ಷ ರೂ. ಹಣ ಪಡೆಯುವಾಗ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಲೋಕಾಯುಕ್ತ ಡಿವೈಎಸ್‌ಪಿ ಚಂದ್ರಶೇಖರ್ ನೇತೃತ್ವದಲ್ಲಿ ಇನ್ಸ್‌ಪೆಕ್ಟರ್ ಮೈಲಾರ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: ತನ್ನ ಪಾಲಿನ ಹಣ ಕೊಡೋಕಾಗದೆ ವಿಬಿ-ಜಿ ರಾಮ್-ಜಿ ವಿರುದ್ಧ ಕಾಂಗ್ರೆಸ್ ಅಪಪ್ರಚಾರ: ರೇಣುಕಾಚಾರ್ಯ

