ಕಲಬುರಗಿ: ಜಿಲ್ಲೆಯ ಸೇಡಂ ತಾಲೂಕಿನ ಹಂಗನಹಳ್ಳಿ ಗ್ರಾಮದಲ್ಲಿ ಜಮೀನು ವಿಚಾರವಾಗಿ ದಾಯಾದಿಗಳ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.
ಬಸವರಾಜ್ ತಳವಾರ (34) ಕೊಲೆಯಾದ ವ್ಯಕ್ತಿಯಾಗಿದ್ದು, ನಿನ್ನೆ ತಡರಾತ್ರಿ ಸಹೋದರ ಸಂಬಂಧಿಗಳಾದ ಬಸವರಾಜ್ ತಳವಾರ್ ಮತ್ತು ಘೂಳೇಶ್ ನಡುವೆ ಜಮೀನು ವಿಷಯವಾಗಿ ಗಲಾಟೆಯಾಗಿತ್ತು. ಗಲಾಟೆ ವಿಕೋಪಕ್ಕೆ ತಿರುಗಿ ಬಸವರಾಜ್‌ಗೆ ಚಾಕುವಿನಿಂದ ಇರಿದಿದ್ದಾನೆ. ಇದನ್ನೂ ಓದಿ: Chitradurga | ಗಣಿಯಲ್ಲಿ ಲಾರಿ ಡಿಕ್ಕಿ ಹೊಡೆದು ಸೂಪರ್‌ವೈಸರ್ ಸಾವು
ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು. ಬಸವರಾಜ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ಕುರಿತು ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

