ಬಾಗಲಕೋಟೆ: ಆಲಬಾಳ ಗ್ರಾಮದ ಸರ್ಕಾರಿ ಶಾಲೆ (School) ಮಕ್ಕಳು ಚರಂಡಿ ನೀರಲ್ಲಿ ತಟ್ಟೆ ತೊಳೆದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಜಮಖಂಡಿಯ (Jamkhandi) ಪ್ರಧಾನ ಹಿರಿಯ ನ್ಯಾಯಾಧೀಶ (Judge) ರಾಜಶೇಖರ ಹರಸೂರ ಶಾಲೆಗೆ ಭೇಟಿ ನೀಡಿದ್ದಾರೆ.
ಶಿಕ್ಷಕರಿಂದ ಶಾಲೆಯಲ್ಲಿನ ಮೂಲಭೂತ ಸೌಲಭ್ಯಗಳ ಬಗ್ಗೆ ನ್ಯಾಯಾಧೀಶರು ಮಾಹಿತಿ ಪಡೆದಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ವಿದ್ಯಾರ್ಥಿಗಳು ಚರಂಡಿ ನೀರಲ್ಲಿ ತಟ್ಟೆ ತೊಳೆದಿದ್ದಾರೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಭೇಟಿ ನೀಡಿದ್ದರು. ಇದೇ ವೇಳೆ ಶಾಲಾ ಮಕ್ಕಳ ಶೌಚಾಲಯ ಇನ್ನಿತರ ಮೂಲ ಸೌಕರ್ಯಗಳನ್ನು ನ್ಯಾಯಾಧೀಶರು ಪರಿಶೀಲಿಸಿದ್ದಾರೆ. ಇದನ್ನೂ ಓದಿ: ಸಿಜೆ ರಾಯ್ ಅವರೇ ಗುಂಡು ಹೊಡೆದುಕೊಂಡ್ರಾ, ಬೇರೆ ಯಾರಾದ್ರೂ ಹೊಡೆದ್ರಾ? – ಪ್ರದೀಪ್ ಈಶ್ವರ್ ಅನುಮಾನ
ಚರಂಡಿ ಪಕ್ಕದ ಪೈಪ್‌ನಲ್ಲಿ ಪ್ಲೇಟ್ ತೊಳೆಯುತ್ತಿದ್ದ ಮಕ್ಕಳ ಫೋಟೋ ಹಾಗೂ ವಿಡಿಯೋ ವೈರಲ್ ಆಗಿದ್ದು, ಭಾರಿ ಚರ್ಚೆಗೆ ಸಹ ಕಾರಣವಾಗಿತ್ತು. ಇದನ್ನೂ ಓದಿ: Chitradurga | ಗಣಿಯಲ್ಲಿ ಲಾರಿ ಡಿಕ್ಕಿ ಹೊಡೆದು ಸೂಪರ್‌ವೈಸರ್ ಸಾವು

