Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉತ್ತರಪ್ರದೇಶದಲ್ಲಿ ಶಿಕ್ಷಕರಿಗೆ ಆಧಾರ್ ಇಲ್ಲದೇ ಇದ್ರೆ ಸಂಬಳ ಜಮೆ ಆಗಲ್ಲ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Uncategorized | ಉತ್ತರಪ್ರದೇಶದಲ್ಲಿ ಶಿಕ್ಷಕರಿಗೆ ಆಧಾರ್ ಇಲ್ಲದೇ ಇದ್ರೆ ಸಂಬಳ ಜಮೆ ಆಗಲ್ಲ!

Uncategorized

ಉತ್ತರಪ್ರದೇಶದಲ್ಲಿ ಶಿಕ್ಷಕರಿಗೆ ಆಧಾರ್ ಇಲ್ಲದೇ ಇದ್ರೆ ಸಂಬಳ ಜಮೆ ಆಗಲ್ಲ!

Public TV
Last updated: June 11, 2017 3:46 pm
Public TV
Share
1 Min Read
Yogi Adityanath Aadhar
SHARE

ಲಕ್ನೋ: ಉತ್ತರಪ್ರದೇಶದದಲ್ಲಿ ಸರ್ಕಾರಿ ಶಿಕ್ಷಕರು ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದದೇ ಇದ್ದರೆ ಮುಂದೆ ಅವರ ಖಾತೆಗೆ ಸಂಬಳ ಜಮೆ ಮಾಡದೇ ಇರಲು ಯೋಗಿ ಆದಿತ್ಯನಾಥ್ ಸರ್ಕಾರ ನಿರ್ಧಾರವನ್ನು ತೆಗೆದುಕೊಂಡಿದೆ.

ಆಧಾರ್ ಕಡ್ಡಾಯಗೊಳಿಸುವ ಸಂಬಂಧ ಪ್ರಾಥಮಿಕ ಶಿಕ್ಷಣ ಸಚಿವ ಅನುಪಮ್ ಜೈಸ್ವಾಲ್ ಭಾನುವಾರ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ.

ಪಾರದರ್ಶಕತೆಯನ್ನು ತರಲು ಶಿಕ್ಷಕರು ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಜೋಡಿಸಬೇಕು. ಅಷ್ಟೇ ಅಲ್ಲದೇ ಗುರುತಿನ ಪತ್ರವಾಗಿಯೂ ಆಧಾರ್ ಬಳಸಲು ಸರ್ಕಾರ ಮುಂದಾಗಿದೆ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಸ್ತುತ ಪ್ರಾಥಮಿಕ ಶಾಲೆಯ ಮತ್ತು ಪ್ರೌಢ ಶಾಲೆಯ ಸೇರಿ ಒಟ್ಟು 4.95 ಲಕ್ಷ ಜನ ಶಿಕ್ಷಕರಿದ್ದಾರೆ. ಈಗಾಗಲೇ ಬಹಳಷ್ಟು ಶಿಕ್ಷಕರು ಆಧಾರ್ ಕಾರ್ಡ್ ಹೊಂದಿದ್ದಾರೆ. ಆಧಾರ್ ಕಾರ್ಡ್ ಹೊಂದಲು ಶಿಕ್ಷಕರಿಗೆ ಜುಲೈ ತಿಂಗಳ ಡೆಡ್‍ಲೈನ್ ನೀಡಲಾಗಿದ್ದು, ಈ ಡೆಡ್‍ಲೈನ್ ಒಳಗಡೆ ಆಧಾರ್ ಪಡೆಯದೇ ಇದ್ದರೆ ಮುಂದೆ ಸಂಬಳವನ್ನು ಖಾತೆಗೆ ಜಮೆ ಮಾಡದೇ ಇರುವ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಅವರು ಹೇಳಿದರು.

ಆಧಾರ್ ಕಾರ್ಡ್ ಇಲ್ಲದೇ ಇದ್ದಲ್ಲಿ ಶಾಲೆಗಳಲ್ಲಿ ಆಧಾರ್ ನೋಂದಣಿ ಕಾರ್ಯಕ್ರಮ ನಡೆಸಲಾಗುವುದು. ಶಿಕ್ಷಕರ ಜೊತೆ 1 ರಿಂದ 7 ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಆಧಾರ್ ಅನ್ನು ಕಡ್ಡಾಯವಾಗಿ ಹೊಂದಬೇಕು ಎಂದು ಸಚಿವ ಅನುಪಮ್ ಜೈಸ್ವಾಲ್ ತಿಳಿಸಿದ್ದಾರೆ.

ಈಗಾಗಲೇ ಶೇ.30 ರಷ್ಟು ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಆಧಾರ್ ಹೊಂದಿದ್ದಾರೆ. ಆದರೆ ದೂರದಪ್ರದೇಶದಲ್ಲಿ ನೆಲೆಸಿರುವ ವಿದ್ಯಾರ್ಥಿಗಳಿಗೆ ಆಧಾರ್ ಕಡ್ಡಾಯ ಮಾಡಿಲ್ಲ. ಕೆಲ ಶಾಲೆಗಳಲ್ಲಿ ನಕಲಿ ಟೀಚರ್ ಗಳಿದ್ದು, ಈ ಸಮಸ್ಯೆ ಆಧಾರ್‍ನಿಂದ ಪರಿಹಾರವಾಗಲಾರದು ಎಂದು ಅಧಿಕಾರಿ ತಿಳಿಸಿದ್ದಾರೆ.

ಜುಲೈ ಒಂದರಿಂದ ಐಟಿ ರಿಟರ್ನ್ ಮತ್ತು ಪ್ಯಾನ್ ಕಾರ್ಡ್‍ಗೆ ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್ ಕಡ್ಡಾಯಗೊಳಿಸುವ ಕಾನೂನಿನ ಸಿಂಧುತ್ವವನ್ನು ಶುಕ್ರವಾರ ಸುಪ್ರೀಂ ಕೋರ್ಟ್ ಎತ್ತಿಹಿಡಿದಿತ್ತು. ಸುಪ್ರೀಂ ಕೋರ್ಟ್ ನಿರ್ಧಾರ ಪ್ರಕಟವಾದ ಬಳಿಕ ಯೋಗಿ ಸರ್ಕಾರ ಶಿಕ್ಷಕರಿಗೆ ಆಧಾರ್ ಕಡ್ಡಾಯ ಮಾಡಿದೆ.

ಇದನ್ನೂ ಓದಿ: 15 ಸರ್ಕಾರಿ ರಜೆಗಳನ್ನ ರದ್ದು ಮಾಡಿದ ಯೋಗಿ ಆದಿತ್ಯನಾಥ್

TAGGED:aadharsalaryschool teachersYogi Adityanathಆಧಾರ್ ಕಾರ್ಡ್ಉತ್ತರ ಪ್ರದೇಶಯೋಗಿ ಆದಿತ್ಯಾನಾಥ್ಸಂಬಳ
Share This Article
Facebook Whatsapp Whatsapp Telegram

Cinema news

Kangana Ranaut
Fashion Trends | ನಯಾ ಲುಕ್‌ನಲ್ಲಿ ಕ್ವೀನ್‌ ಕಂಗನಾ
Bollywood Cinema Latest
abhishek spandana bigg boss
ಬಿಗ್‌ ಬಾಸ್‌ ಮನೆಗೆ ಮೊದಲ ಜೋಡಿ ಕ್ಯಾಪ್ಟನ್‌ – ಟಾಸ್ಕ್‌ ಆಡದೇ ಕ್ಯಾಪ್ಟನ್‌ ಆದ ಸ್ಪಂದನಾ
Cinema Latest Top Stories TV Shows
Adi Lakshmi Purana
ಆದಿ ಲಕ್ಷ್ಮಿ ಪುರಾಣ ಧಾರಾವಾಹಿ – ಒಡಹುಟ್ಟಿದವರ ಕಥನ
Latest Sandalwood South cinema Top Stories
Bigg Boss Rakshita Malu Dhruvanth
ರಕ್ಷಿತಾ-ಮಾಳುಗೆ ಧ್ರುವಂತ್‌ ಮೋಸ – ಕ್ಲಾಸ್‌ ತಗೆದುಕೊಳ್ಳುವಂತೆ ಆಗ್ರಹ
Cinema Latest Top Stories TV Shows

You Might Also Like

Uttar Pradesh Car Accident MBBS Students Death
Crime

Uttar Pradesh | ರಸ್ತೆ ಬದಿ ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ – ನಾಲ್ವರು MBBS ವಿದ್ಯಾರ್ಥಿಗಳು ಸಾವು

Public TV
By Public TV
1 day ago
FotoJet
Automobile

ಮಾರುತಿ ವಿಕ್ಟೋರಿಸ್‌ಗೆ 5 ಸ್ಟಾರ್ ಸೇಫ್ಟಿ ರೇಟಿಂಗ್ – ಬೆಲೆ, ಮೈಲೇಜ್‌ ಎಷ್ಟು?

Public TV
By Public TV
4 days ago
cough syrup
Crime

ಕಾಫ್ ಸಿರಪ್ ಸ್ಮಗ್ಲಿಂಗ್‌ – ಉತ್ತರ ಪ್ರದೇಶದಲ್ಲಿ 12 ಫಾರ್ಮಾ ಕಂಪನಿಗಳ ವಿರುದ್ಧ ಕೇಸ್‌

Public TV
By Public TV
6 days ago
Aadhaar Card
Latest

ಇನ್ಮುಂದೆ ಉತ್ತರಪ್ರದೇಶ, ಮಹಾರಾಷ್ಟ್ರದಲ್ಲಿ ಆಧಾರ್ ಜನನ ಪ್ರಮಾಣಪತ್ರದ ಪುರಾವೆಯಲ್ಲ

Public TV
By Public TV
1 week ago
YOGI ADITYANATH
Latest

ಉತ್ತರ ಪ್ರದೇಶದಲ್ಲಿ ಫಾಜಿಲ್ ನಗರ ಹೆಸರು ಬದಲಾಯಿಸಿದ ಸಿಎಂ ಯೋಗಿ; ಇನ್ಮುಂದೆ ಪಾವಾ ನಗರ್

Public TV
By Public TV
1 week ago
Supreme Court
Court

ವಿದೇಶಿಗರನ್ನ ಮತದಾರರ ಪಟ್ಟಿಯಲ್ಲಿ ಸೇರಿಸಲು ʻಆಧಾರ್‌ ಕಾರ್ಡ್‌ʼ ದಾಖಲೆ ಸಾಕಾ – ಸುಪ್ರೀಂ ಪ್ರಶ್ನೆ

Public TV
By Public TV
1 week ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?