Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು, ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್‌ಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು, ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್‌ಡಿಕೆ

Karnataka

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು, ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್‌ಡಿಕೆ

Public TV
Last updated: February 1, 2026 4:49 pm
Public TV
Share
2 Min Read
HD Kumaraswamy
SHARE

– 16ನೇ ಹಣಕಾಸು ಆಯೋಗ ಕರ್ನಾಟಕಕ್ಕೆ ಶೇ 4.13ರಷ್ಟು ತೆರಿಗೆ ಪಾಲು
– 2026-27ನೇ ಸಾಲಿನಲ್ಲಿ ರಾಜ್ಯಕ್ಕೆ 63,049 ಕೋಟಿ ರೂ.
– ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆ ರಾಜ್ಯಕ್ಕೆ ವರದಾನ
– ವಿಕಸಿತ ಭಾರತ ಸಾಕಾರಕ್ಕೆ ಬಜೆಟ್ ಪೂರಕ

ನವದೆಹಲಿ: ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಹೇಳಿದರು.

ಆಯವ್ಯಯದ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ತೆರಿಗೆ ಪಾಲಿನಲ್ಲಿ ಅನ್ಯಾಯ ಆಗಿದೆ ಎಂದು ರಾಜ್ಯ ಸರ್ಕಾರ ಸಾಮಾನ್ಯವಾಗಿ ದೂರುತ್ತಿತ್ತು. 16ನೇ ಹಣಕಾಸು ಆಯೋಗ ಕರ್ನಾಟಕಕ್ಕೆ (Karnataka) ಶೇ 4.13ರಷ್ಟು ತೆರಿಗೆ ಪಾಲು ಹಂಚಿಕೆಗೆ ಶಿಫಾರಸು ಮಾಡಿದೆ. 15ನೇ ಹಣಕಾಸು ಆಯೋಗವು ಶೇ 3.64 ಹಂಚಿಕೆ ಮಾಡಿತ್ತು. ಹೊಸದಾಗಿ ಹಂಚಿಕೆ ಆಗಿರುವುದರ ಮೂಲಕ ರಾಜ್ಯಕ್ಕೆ 2026-27ನೇ ಸಾಲಿನಲ್ಲಿ 63,049 ಕೋಟಿ ರೂ. ತೆರಿಗೆ ಪಾಲು ದೊರೆಯಲಿದೆ. ಇನ್ನುಮುಂದೆ ರಾಜ್ಯ ಕಾಂಗ್ರೆಸ್ (Congress) ಸರ್ಕಾರ ರಾಜಕೀಯವಾಗಿ ಕೇಂದ್ರವನ್ನು ಟೀಕೆ ಮಾಡುವುದನ್ನು ಬಿಡಬೇಕು ಎಂದರು. ಇದನ್ನೂ ಓದಿ: ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಹುದೊಡ್ಡ ಅನ್ಯಾಯ – ಜೋಶಿ, ಸೋಮಣ್ಣ ಹೇಗೆ ಜನಕ್ಕೆ ಮುಖ ತೋರಿಸ್ತಾರೆ? – ಎಂಬಿಪಿ

ಈ ಬಜೆಟ್‌ನಲ್ಲಿ ಕರ್ನಾಟಕಕ್ಕೆ ನಿರಾಶೆಯೇನೂ ಆಗಿಲ್ಲ. ತೆಂಗು ಪ್ರೋತ್ಸಾಹ ಯೋಜನೆಯಡಿ ತೆಂಗಿನ ಉತ್ಪಾದನೆ ಹೆಚ್ಚಳಕ್ಕೆ ಉತ್ತೇಜನ ಕೊಡಲಾಗಿದೆ. ಹಾಗೆಯೇ ಗೋಡಂಬಿ ಮತ್ತು ಕೋಕೋವನ್ನು 2030ರ ವೇಳೆಗೆ ಪ್ರೀಮಿಯಂ ಗ್ಲೋಬಲ್ ಬ್ರಾಂಡ್ ಆಗಿ ರೂಪಿಸುವ ಅಂಶವು ಮುಂಗಡ ಪತ್ರದಲ್ಲಿ ಸೇರಿದೆ. ಶ್ರೀಗಂಧ, ತೆಂಗು ಬೆಳೆ, ಕೋಕೋ ಬೆಳೆಗೆ ವಿಶೇಷ ಯೋಜನೆ ಮೂಲಕ ರಾಜ್ಯದ ಹಲವಾರು ಜಿಲ್ಲೆಗಳಿಗೆ ಉಪಯೋಗ ಆಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: Budget 2026: ಒಂದು ರೂಪಾಯಿ ಬಂದಿದ್ದು ಎಲ್ಲಿಂದ? ಹೋಗಿದ್ದು ಎಲ್ಲಿಗೆ?

ಹೈದರಾಬಾದ್-ಬೆಂಗಳೂರು, ಬೆಂಗಳೂರು ಚೆನ್ನೈ ಹೈಸ್ಪೀಡ್ ರೈಲು ಕಾರಿಡಾರ್ ಯೋಜನೆ ರಾಜ್ಯಕ್ಕೆ ವರದಾನವಾಗಲಿದೆ. ಈಗಾಗಲೇ ರಾಜ್ಯದ ಹಲವು ವೇಗದ ರೈಲುಗಳು ಕಾರ್ಯಾಚರಿಸುತ್ತಿದ್ದು, ವಂದೇ ಭಾರತ್ ರೈಲುಗಳು ಕೂಡ ಸೇರ್ಪಡೆಯಾಗಿದೆ. ಈಗ ಹೈಸ್ಪೀಡ್ ರೈಲುಗಳು ರಾಜ್ಯಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ರೈಲು ಸಂಪರ್ಕದಲ್ಲಿ ಹೊಸ ಕ್ರಾಂತಿ ಆಗಲಿದೆ ಎಂದು ಪ್ರತಿಪಾದಿಸಿದರು. ಇದನ್ನೂ ಓದಿ: ಇದು ದೂರದರ್ಶಿ ಬಜೆಟ್: ತೇಜಸ್ವಿ ಸೂರ್ಯ

ಇದು ಕೇವಲ ಅಂಕಿ ಅಂಶಗಳ ಮುಂಗಡ ಪತ್ರವಲ್ಲ, ಬದಲಿಗೆ ಮುನ್ನೋಟ, ಮುಂದಾಲೋಚನೆ, ವಿಕಾಸ, ಫಲಿತಾಂಶ ಆಧರಿತ ಮುಂಗಡ ಪತ್ರವಾಗಿದೆ. ವಿಕಸಿತ ಭಾರತ ಗುರಿ ಸಾಕಾರಕ್ಕೆ ಇದು ಪೂರಕವಾಗಿದೆ. 2047ಕ್ಕೆ ನಾವು ಈ ಗುರಿ ಸಾಧನೆ ಮಾಡಬೇಕು, ಅದಕ್ಕೆ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಈ ಬಜೆಟ್ ಸ್ಪಷ್ಟ ದಿಕ್ಸೂಚಿ ತೋರಿದೆ ಎಂದು ಹೇಳಿದರು. ಇದನ್ನೂ ಓದಿ: ಬಜೆಟ್‌ ಭಾಷಣದಲ್ಲಿ ಯಾವ ರಾಜ್ಯಕ್ಕೆ ಏನು ಸಿಕ್ಕಿದೆ? ಚುನಾವಣಾ ರಾಜ್ಯಕ್ಕೆ ಏನು?

ಗ್ರಾಮೀಣ ಭಾರತಕ್ಕೆ ಮನ್ನಣೆ ಕೊಡಲಾಗಿದೆ. ಪ್ರತಿ ರಾಜ್ಯ, ಪ್ರತಿ ಜಿಲ್ಲೆ, ಪ್ರತಿ ತಾಲೂಕು, ಪ್ರತಿ ಪಂಚಾಯಿತಿ, ಪ್ರತಿ ಹಳ್ಳಿ ಮುಂಗಡಪತ್ರದಲ್ಲಿ ಒಳಗೊಂಡಿದೆ. ವಿಶಾಲ, ವಿಸ್ತೃತ, ವಿಕಾಸ; ಇದು ಮೋದಿ ಅವರ ಲೋಕದೃಷ್ಟಿ. ಅದಕ್ಕೆ ತಕ್ಕಂತೆ ಮುಂಗಡಪತ್ರ ಮೂಡಿ ಬಂದಿದೆ ಎಂದು ಕೊಂಡಾಡಿದರು. ಇದನ್ನೂ ಓದಿ: ಭಾರತದ ʻಅಭಿವೃದ್ಧಿ ಎಕ್ಸ್‌ಪ್ರೆಸ್’ಗೆ ಹೊಸ ಶಕ್ತಿ ಕೊಡೋ ಬಜೆಟ್‌: ಮೋದಿ

TAGGED:Budget 2026congresshd kumaraswamykarnatakaNew DelhiNirmala SitharamanUnion Budget 2026ಕರ್ನಾಟಕಕಾಂಗ್ರೆಸ್ಕೇಂದ್ರ ಬಜೆಟ್ನವದೆಹಲಿನಿರ್ಮಲಾ ಸೀತಾರಾಮನ್ಬಜೆಟ್ 2026ಹೆಚ್‍ಡಿ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

UP Lawyer Shot Dead
Crime

ಯುಪಿಯಲ್ಲಿ ಬೆಳಗ್ಗೆ ವಾಕಿಂಗ್‌ ಹೊರಟಿದ್ದ ವಕೀಲನಿಗೆ ಗುಂಡಿಕ್ಕಿ ಹತ್ಯೆ

Public TV
By Public TV
1 hour ago
MANPAD
Latest

ಇರಾನ್‌ಗೆ ನೂತನ ಏರ್‌ ಡಿಫೆನ್ಸ್‌ ಸಿಸ್ಟಮ್‌ ಪೂರೈಕೆಗೆ ಚೀನಾ ಸಿದ್ಧತೆ – ಅಮೆರಿಕ ಕಳವಳ

Public TV
By Public TV
1 hour ago
Hyderabad Woman Suicide
Crime

ಮದುವೆಗೆ ನಿರಾಕರಿಸಿದ್ದಕ್ಕೆ ವ್ಯಕ್ತಿಯಿಂದ HIV ಪಾಸಿಟಿವ್‌ ರಕ್ತ ಇಂಜೆಕ್ಟ್‌ – ಆಘಾತಗೊಂಡು ಯುವತಿ ಆತ್ಮಹತ್ಯೆ

Public TV
By Public TV
2 hours ago
cab clash whitefield
Bengaluru City

ಬೆಂಗಳೂರು| ಕ್ಯಾಬ್ ಬುಕ್ ಮಾಡಿ ಅರ್ಧಗಂಟೆ ಕಾಯಿಸಿ ಮಹಿಳೆ ಕಿರಿಕ್

Public TV
By Public TV
2 hours ago
Vande Bharat sleeper train
Bengaluru City

ಬೆಂಗಳೂರು – ಮುಂಬೈ ವಂದೇ ಭಾರತ್ ಸ್ಲೀಪರ್ ರೈಲಿಗೆ ಗ್ರೀನ್‌ಸಿಗ್ನಲ್

Public TV
By Public TV
3 hours ago
BENGALURU WEATHER
Bengaluru City

ಇಂದು ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ – ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?