ಚಾಮರಾಜನಗರ: ಜಿಲ್ಲೆಯಲ್ಲಿ ಚಿರತೆ ದಾಳಿ ಪ್ರಕರಣಗಳು ಮುಂದುವರಿದಿದ್ದು, ಹನೂರು ತಾಲೂಕಿನ ಮಾರ್ಟಳ್ಳಿಯಲ್ಲಿ ಚಿರತೆ ದಾಳಿಗೆ ಹಸುವಿನ ಕರು ಬಲಿಯಾಗಿದೆ.
ಗ್ರಾಮದ ಸಮ್ಮಾನಸ್ ಎಂಬವರ ತೋಟದಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿದೆ.
ಈ ಘಟನೆಯಿಂದ ಹೊಲಗದ್ದೆಗಳಿಗೆ ತೆರಳಲು ರೈತರು ಭಯ ಪಡುವಂತಾಗಿದ್ದು, ಕೂಡಲೇ ಚಿರತೆ ಸೆರೆಹಿಡಿಯುವಂತೆ ಒತ್ತಾಯಿಸಿದ್ದಾರೆ.

