ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ (Karnataka Film Chamber) ನೂತನ ಅಧ್ಯಕ್ಷರಾಗಿ ಹಿರಿಯ ನಟಿ ಜಯಮಾಲಾ (Actress Jayamala) ಪದಗ್ರಹಣ ಮಾಡಿದ್ದಾರೆ. ಫಿಲ್ಮ್ ಚೇಂಬರ್‌ನಲ್ಲಿ ಪದಾಧಿಕಾರಿಗಳ ಸಮ್ಮುಖದಲ್ಲಿ ದೇವರಿಗೆ ಪೂಜೆ ಸಲ್ಲಿಸಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.
ಈ ಹಿಂದೆ 2008 ರಿಂದ 2010 ವರೆಗೆ ಜಯಮಾಲಾ ಪ್ರಥಮ ಬಾರಿಗೆ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿದ್ದರು. ಇದೀಗ 2026ರಿಂದ 2028ರ ಸಾಲಿನ ವರೆಗೆ ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷರಾಗಿ ಜಯಮಾಲಾ ಪದಗ್ರಹಣ ಮಾಡಿದ್ದಾರೆ. ಇದನ್ನೂ ಓದಿ: ಫಿಲ್ಮ್ ಚೇಂಬರ್ ಚುನಾವಣೆ – ಅಧ್ಯಕ್ಷೆ ಪಟ್ಟಕ್ಕೇರಿದ ನಟಿ ಜಯಮಾಲಾ
2008ರಲ್ಲಿ ಅಧ್ಯಕ್ಷರಾಗಿದ್ದ ಜಯಮಾಲಾ ಫಿಲ್ಮ್ ಚೇಂಬರ್‍ನ ಮೊದಲ ಮಹಿಳಾ ಅಧ್ಯಕ್ಷೆ ಎಂಬ ಖ್ಯಾತಿಗೆ ಪಾತ್ರರಾಗಿದ್ದರು. ಈ ಮೂಲಕ ದಾಖಲೆ ಮಾಡಿದ್ದರು. ಇದೀಗ ಜ.31 ರಂದು ನಡೆದ ಫಿಲ್ಮ್ ಚೇಂಬರ್ ಚುನಾವಣೆಯಲ್ಲಿ ನಿರ್ಮಾಪಕರ ವಲಯದಿಂದ ಸ್ಪರ್ಧೆ ನಡೆದಿತ್ತು. ಇದರಲ್ಲಿ ಪ್ರತಿಸ್ಪರ್ಧಿ ಭಾಮಾ ಹರೀಶ್‍ರನ್ನ ಸೋಲಿಸಿ ಜಯಮಾಲಾ ಗೆದ್ದು ಬೀಗಿದ್ದಾರೆ. ಈ ಮೂಲಕ ಎರಡನೇ ಬಾರಿ ಅಧ್ಯಕ್ಷರಾಗಿ ಆಯ್ಕೆಯಾಗಿ ಮತ್ತೊಮ್ಮೆ ಸಾಧನೆ ಮಾಡಿದ್ದಾರೆ. ಇದನ್ನೂ ಓದಿ: ತುಂಡು ಬಟ್ಟೆ ಕೊಟ್ಟು ನಿನ್ನ ಬಾಡಿ ನೋಡ್ಬೇಕು ಅಂದ್ರು – ಕಹಿ ಘಟನೆ ಬಿಚ್ಚಿಟ್ಟ ಐಶ್ವರ್ಯ ರಾಜೇಶ್

