Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಕ್ಷಿಣ ಪೆನ್ನಾರ್ ನದಿ ಜಲವಿವಾದ – ನ್ಯಾಯಮಂಡಳಿ ಸ್ಥಾಪನೆಗೆ ಸುಪ್ರೀಂ ಆದೇಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ದಕ್ಷಿಣ ಪೆನ್ನಾರ್ ನದಿ ಜಲವಿವಾದ – ನ್ಯಾಯಮಂಡಳಿ ಸ್ಥಾಪನೆಗೆ ಸುಪ್ರೀಂ ಆದೇಶ

Karnataka

ದಕ್ಷಿಣ ಪೆನ್ನಾರ್ ನದಿ ಜಲವಿವಾದ – ನ್ಯಾಯಮಂಡಳಿ ಸ್ಥಾಪನೆಗೆ ಸುಪ್ರೀಂ ಆದೇಶ

Public TV
Last updated: February 2, 2026 4:56 pm
Public TV
Share
2 Min Read
Supreme Court
SHARE

ನವದೆಹಲಿ: ಕರ್ನಾಟಕ (Karnataka) ಹಾಗೂ ತಮಿಳುನಾಡು (TamilNadu) ನಡುವಿನ ಪೆನ್ನಾರ್ (ದಕ್ಷಿಣ ಪಿನಾಕಿನಿ) ನದಿ ನೀರು ಹಂಚಿಕೆ ವಿವಾದಗಳನ್ನು ಬಗೆಹರಿಸಲು ನ್ಯಾಯಮಂಡಳಿ (Tribunal) ರಚಿಸುವಂತೆ ಸುಪ್ರೀಂ ಕೋರ್ಟ್ (Supreme Court) ಮಹತ್ವದ ಆದೇಶ ಪ್ರಕಟಿಸಿದೆ.

ತಮಿಳುನಾಡು ಸರ್ಕಾರ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿಕ್ರಮ್‌ನಾಥ್ ಹಾಗೂ ಎನ್.ವಿ.ಅಂಜಾರಿಯಾ ಪೀಠವು ವಿವಾದ ಇತ್ಯರ್ಥಪಡಿಸಲು ನ್ಯಾಯಮಂಡಳಿ ರಚಿಸುವುದು ಸೂಕ್ತ. ಆದೇಶ ಪ್ರಕಟವಾದ ಒಂದು ತಿಂಗಳೊಳಗೆ ಜಲ ವಿವಾದ ನ್ಯಾಯಮಂಡಳಿಯನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ನಿರ್ದೇಶನ ನೀಡಿದೆ.

ಈ ಹಿಂದೆ ನಡೆದ ಅರ್ಜಿ ವಿಚಾರಣೆ ವೇಳೆ ಪೀಠ ಉಭಯ ರಾಜ್ಯಗಳು ತಮ್ಮ ವಾದಗಳನ್ನು ನ್ಯಾಯಮಂಡಳಿಯಲ್ಲಿ ಮಂಡಿಸುವುದು ಉತ್ತಮ ಎಂದು ಅಭಿಪ್ರಾಯ ವ್ಯಕ್ತಪಡಿಸಿತ್ತು.

ದಕ್ಷಿಣ ಪಿನಾಕಿನಿ (Pinakini) ನದಿಯ ಕಣಿವೆಯಲ್ಲಿ ಕರ್ನಾಟಕ ಸರ್ಕಾರವು ಮಾರ್ಕಂಡೇಯ ನದಿಗೆ ಅಡ್ಡಲಾಗಿ ಅಣೆಕಟ್ಟೆ ನಿರ್ಮಿಸಿದೆ. ಬೆಂಗಳೂರಿನ ಎಲೆ ಮಲ್ಲಪ್ಪಚೆಟ್ಟಿ ಕೆರೆಯಿಂದ ಹೊಸಕೋಟೆಯವರೆಗೆ ನೀರು ಹರಿಸುವ ಕಾಮಗಾರಿ, ಬ್ಯಾಲಹಳ್ಳಿ ಗ್ರಾಮದ ಹತ್ತಿರ ಪೆನ್ನಾರ್ ನದಿಯಿಂದ ನೀರು ಹರಿಸುವ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದೆ.

ಕಾಮಗಾರಿ ಕೈಗೆತ್ತಿಕೊಂಡ ಬೆನ್ನಲ್ಲೇ ತಮಿಳುನಾಡು ಸರ್ಕಾರ 2018ರಲ್ಲಿ ಕರ್ನಾಟಕ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಮೂಲ ದಾವೆ ಹೂಡಿತ್ತು. ನದಿಯ ಮೇಲ್ದಂಡೆ ಭಾಗದಲ್ಲಿ ಕರ್ನಾಟಕ ಸರ್ಕಾರ ಕೈಗೊಂಡ ನಿರ್ಧಾರಗಳಿಂದಾಗಿ ಕೆಳದಂಡೆ ಭಾಗದಲ್ಲಿರುವ ತಮಿಳುನಾಡಿಗೆ ಹರಿಯುವ ನೀರಿನ ಪ್ರಮಾಣದ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ ಎಂದು ತಮಿಳುನಾಡು ವಾದಿಸಿತ್ತು.

ಸಚಿವರುಗಳು ಸಭೆ ನಡೆಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಂತೆ ಕೇಂದ್ರ ಸರ್ಕಾರ ಈ ಹಿಂದೆ ಸೂಚಿಸಿತ್ತಾದರೂ ಪ್ರಕರಣ ನಿರ್ಧರಿಸಲು ನ್ಯಾಯಮಂಡಳಿ ರಚನೆಯಾಗಬೇಕು ಎಂದು ತಮಿಳುನಾಡು ಒತ್ತಾಯಿಸಿತ್ತು.

ಮಾತುಕತೆಗಳ ಮೂಲಕ ವಿವಾದ ಪರಿಹರಿಸಲು ವಿಳಂಬ ಆಗಿರುವುದಕ್ಕೆ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರವನ್ನು ನವೆಂಬರ್ 2022ರಲ್ಲಿ ತರಾಟೆಗೆ ತೆಗೆದುಕೊಂಡಿತ್ತು. ಇದಕ್ಕೂ ಮುನ್ನ  ಜನವರಿ 2019ರಲ್ಲಿ ಈ ಸಂಕೀರ್ಣ ಸಮಸ್ಯೆಯನ್ನು ಪರಿಹರಿಸಲು ನ್ಯಾಯಮಂಡಳಿ ರಚಿಸುವಂತೆ ತಮಿಳುನಾಡು ಸರ್ಕಾರ ಮನವಿ ಸಲ್ಲಿಸಲು ನ್ಯಾಯಾಲಯ ಅನುಮತಿ ನೀಡಿತ್ತು. ನಂತರ ಮೇ ತಿಂಗಳಲ್ಲಿ ಈ ಉದ್ದೇಶಕ್ಕಾಗಿ ಸುಪ್ರೀಂಕೋರ್ಟ್ ಮತ್ತೊಮ್ಮೆ ಗಡುವು ವಿಸ್ತರಿಸಿತ್ತು.

ಪೆನ್ನಾರ್‌ ಜಲವಿವಾದ ನ್ಯಾಯಮಂಡಳಿ ರಚನೆಗೆ ಸಂಬಂಧಿಸಿದ ಪ್ರಸ್ತಾವನೆಗೆ ಸಚಿವ ಸಂಪುಟ ಕಾರ್ಯದರ್ಶಿ ಮೂಲಕ ಅನುಮೋದನೆಗಾಗಿ ಕಳುಹಿಸಲಾಗಿದ್ದರೂ ಕೇಂದ್ರ ಸಚಿವ ಸಂಪುಟ ಇನ್ನೂ ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದು 2023ರಲ್ಲಿ ಕೇಂದ್ರ ಜಲಶಕ್ತಿ ಸಚಿವಾಲಯ ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು.

ಕರ್ನಾಟಕ ಮತ್ತು ತಮಿಳುನಾಡು ನಡುವೆ ಹಲವು ದಶಕಗಳಿಂದ ಜೀವಂತ ಇರುವ ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಫೆಬ್ರವರಿ 2018ರಲ್ಲಿ ಐತಿಹಾಸಿಕಾ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್‌ ಜಲಸಂಪತ್ತುಗಳು ರಾಷ್ಟ್ರದ ಆಸ್ತಿಯಾಗಿದ್ದು ಯಾವುದೇ ಒಂದು ರಾಜ್ಯ ಅವುಗಳ ಮೇಲೆ ಏಕಸ್ವಾಮ್ಯ ಸಾಧಿಸುವಂತಿಲ್ಲ ಎಂದಿತ್ತು.

ಕರ್ನಾಟಕದ ಜಲಾನಯನ ಪ್ರದೇಶದಲ್ಲಿ ಒಟ್ಟು 11.77 ಟಿಎಂಸಿ ನೀರಿನಲ್ಲಿ 9.77 ಟಿಎಂಸಿ ನೀರನ್ನು ಬಳಸಲು ಯೋಜಿಸಲಾಗಿದೆ. ಇದರಲ್ಲಿ 2 ಟಿಎಂಸಿ ಮತ್ತು ಹೆಚ್ಚುವರಿ ನೀರು ತಮಿಳುನಾಡಿಗೆ ಉಳಿದಿದೆ. ಇದು ತಮಿಳುನಾಡಿನ ಅವಶ್ಯಕತೆಗಳನ್ನು ಪೂರೈಸಲು ಸಾಕಾಗುತ್ತದೆ ಎಂದು ಕರ್ನಾಟಕ  ಸರ್ಕಾರ ಸ್ಪಷ್ಟಪಡಿಸಿತ್ತು.

TAGGED:karnatakaSupreme Courttamilnaduಕರ್ನಾಟಕತಮಿಳುನಾಡುದಕ್ಷಿಣ ಪಿನಾಕಿನಿಪೆನ್ನಾರ್‌
Share This Article
Facebook Whatsapp Whatsapp Telegram

Cinema news

Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ಜಟಾಪಟಿ – ಒಂದೇ ಜಾಗಕ್ಕೆ ಎರಡೆರಡು ದಾಖಲೆ ನೀಡಿ ಅಧಿಕಾರಿಗಳ ಯಡವಟ್ಟು?
Cinema Districts Hassan Karnataka Latest Sandalwood States Top Stories
Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories

You Might Also Like

siddaramaiah vs Thawar Chand Gehlot
Bengaluru City

ಮತ್ತೆ ಸರ್ಕಾರ Vs ಗವರ್ನರ್; ದ್ವೇಷ ಭಾಷಣ ಮಸೂದೆಗೆ ಕೊಕ್ಕೆ – 29 ಕಾರಣ ಕೊಟ್ಟ ಗವರ್ನರ್‌!

Public TV
By Public TV
4 minutes ago
Gold Silver 2
Latest

ಸತತ 4ನೇ ದಿನವೂ ಚಿನ್ನ, ಬೆಳ್ಳಿ ದರ ಇಳಿಕೆ – ಚಿನ್ನ 10 ಗ್ರಾಂಗೆ 4 ಸಾವಿರ, ಬೆಳ್ಳಿ ಕೆಜಿಗೆ 16 ಸಾವಿರ ಕುಸಿತ

Public TV
By Public TV
25 minutes ago
Electricity
Bengaluru City

ಬೆಂಗಳೂರಿನ ಈ ಭಾಗಗಳಲ್ಲಿ ಫೆ.3, 4ರಂದು ವಿದ್ಯುತ್ ವ್ಯತ್ಯಯ – ನಿಮ್ಮ ಏರಿಯಾ ಇದ್ಯಾ?

Public TV
By Public TV
25 minutes ago
DK Shivakumar
Districts

ವಿಧಾನಸಭೆಯಲ್ಲಿ ʻಕುರ್ಚಿ ಕದನʼ ಪ್ರಸ್ತಾಪ; ಸಿಎಂ – ಡಿಸಿಎಂ ಒಗ್ಗಟ್ಟು ಪ್ರದರ್ಶನ

Public TV
By Public TV
56 minutes ago
Pralhad Joshi 1
Dharwad

ಕೇಂದ್ರ ಸರ್ಕಾರ ಕರ್ನಾಟಕದ ತೆರಿಗೆ ಪಾಲು ಹೆಚ್ಚಿಸಿದೆ – ಸಚಿವ ಜೋಶಿ ಸ್ಪಷ್ಟನೆ

Public TV
By Public TV
2 hours ago
Sunetra Pawar
Latest

ಪತಿಯ ಅಂತ್ಯಕ್ರಿಯೆ ಪೂರ್ಣಗೊಳ್ಳುವ ಮೊದಲೇ ಸುನೇತ್ರಾ ಪವಾರ್‌ಗೆ ಡಿಸಿಎಂ ಪಟ್ಟ; ಹಿಂದಿದ್ಯಾ ಬಿಜೆಪಿ ʻಮಾಸ್ಟರ್ ಮೈಂಡ್ʼ ಕೈವಾಡ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?