Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲಡಾಖ್ ಗಡಿ ಸಂಘರ್ಷ; ನರವಾಣೆ ಅಪ್ರಕಟಿತ ಪುಸ್ತಕ ಪ್ರಸ್ತಾಪಿಸಿದ ರಾಗಾ – ಲೋಕಸಭೆಯಲ್ಲಿ ಗದ್ದಲ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಲಡಾಖ್ ಗಡಿ ಸಂಘರ್ಷ; ನರವಾಣೆ ಅಪ್ರಕಟಿತ ಪುಸ್ತಕ ಪ್ರಸ್ತಾಪಿಸಿದ ರಾಗಾ – ಲೋಕಸಭೆಯಲ್ಲಿ ಗದ್ದಲ

Latest

ಲಡಾಖ್ ಗಡಿ ಸಂಘರ್ಷ; ನರವಾಣೆ ಅಪ್ರಕಟಿತ ಪುಸ್ತಕ ಪ್ರಸ್ತಾಪಿಸಿದ ರಾಗಾ – ಲೋಕಸಭೆಯಲ್ಲಿ ಗದ್ದಲ

Public TV
Last updated: February 2, 2026 3:14 pm
Public TV
Share
2 Min Read
Rahul Gandhi Lok Sabha
SHARE

ನವದೆಹಲಿ: ಲಡಾಖ್ (Ladakh) ಗಡಿ ಸಂಘರ್ಷಕ್ಕೆ ಸಂಬಂಧಿಸಿದಂತೆ ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ ನರವಾಣೆ (Manoj Mukund Naravane) ಅವರ ಅಪ್ರಕಟಿತ ಪುಸ್ತಕ ವಿಚಾರವನ್ನು ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಪ್ರಸ್ತಾಪಿಸಿದ್ದು, ಲೋಕಸಭೆಯಲ್ಲಿ (Lok Sabha) ಭಾರೀ ಗದ್ದಲವನ್ನು ಸೃಷ್ಟಿಸಿದೆ.

ಸಂಸತ್‌ನಲ್ಲಿ ಸೋಮವಾರ ರಾಷ್ಟ್ರಪತಿಗಳ ಭಾಷಣಕ್ಕೆ ಸಂಬಂಧಿಸಿದಂತೆ ವಂದನಾ ನಿರ್ಣಯದ ಮೇಲಿನ ಚರ್ಚೆ ಕೈಗೆತ್ತಿಕೊಳ್ಳಲಾಯಿತು. ಈ ವೇಳೆ ರಾಹುಲ್ ಗಾಂಧಿ, ಡಿಸೆಂಬರ್ 2019 ರಿಂದ ಏಪ್ರಿಲ್ 2022 ರವರೆಗೆ ಭಾರತದ ಸೇನಾ ಮುಖ್ಯಸ್ಥರಾಗಿ ಎಂ ಎಂ ನರವಾಣೆ ಅವರು ಸೇವೆ ಸಲ್ಲಿಸಿದ್ದಾರೆ. ಅವರ ಕುರಿತಾದ ಪುಸ್ತಕ ಪ್ರಕಟಿಸಲು ಕೇಂದ್ರ ಅನುಮೋದನೆ ನೀಡಿಲ್ಲ. 2020ರ ಭಾರತ-ಚೀನಾ ಗಡಿ ಘರ್ಷಣೆಯ ಸಮಯದಲ್ಲಿನ ಮಹತ್ವದ ಅಂಶಗಳು ಪುಸ್ತಕದಲ್ಲಿವೆ. ಚೀನಾ ಆಕ್ರಮಣ, ಉಪಟಳವು ಅದರಲ್ಲಿದೆ. ಇಂತಹ ಪುಸ್ತಕದ ಕುರಿತು ಸೂಕ್ತ ನಿರ್ಧಾರ ತೆಗೆದುಕೊಳ್ಳಬೇಕೆಂದು ಸಂಸತ್‌ನಲ್ಲಿ ತಿಳಿಸಿದರು. ಈ ವೇಳೆ ಮಧ್ಯಪ್ರವೇಶಿಸಿದ ರಾಜನಾಥ್ ಸಿಂಗ್, ಅಪ್ರಕಟಿತ ವಿಷಯ ಸದನದಲ್ಲಿ ಉಲ್ಲೇಖ ಸರಿಯಲ್ಲ ಎಂದು ಹೇಳಿದರು. ಅವರ ಮಾತು ಬೆಂಬಲಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಿಸಿದರು. ಔಪಚಾರಿಕವಾಗಿ ಪ್ರಕಟಿತ ವಿಷಯವನ್ನು ಪ್ರಸ್ತಾಪಿಸುವಂತೆ ಒತ್ತಾಯಿಸಿದರು. ಇದನ್ನೂ ಓದಿ: ಸಿಜೆ ರಾಯ್‌ ಆತ್ಮಹತ್ಯೆ ಪ್ರಕರಣಕ್ಕೆ ಕೇರಳ ಎಂಟ್ರಿ – ನ್ಯಾಯಾಂಗ ತನಿಖೆ ಕೋರಿ ಕೇಂದ್ರಕ್ಕೆ ಸಿಎಂ ಪತ್ರ

ಪತ್ರಿಕೆಗಳು ಮತ್ತು ಮ್ಯಾಗಜಿನ್‌ಗಳು ಏನು ಬೇಕಾದರೂ ಪ್ರಕಟಿಸಬಹುದು. ಅಧಿಕೃತವಾಗಿ ಪ್ರಕಟವಾಗದ ಮೂಲಗಳನ್ನು ಸಂಸತ್ತಿನ ದಾಖಲೆಯ ಭಾಗವಾಗಲು ಅವಕಾಶ ಕೊಡಬಾರದು ಎಂದು ಹೇಳಿದರು. ಇದರಿಂದ ಸದನದಲ್ಲಿ ಗದ್ದಲ ಹೆಚ್ಚಾಯಿತು. ವಿರೋಧ ಪಕ್ಷದ ಸದಸ್ಯರು, ಆಡಳಿತ ಪಕ್ಷವು ಉದ್ದೇಶಪೂರ್ವಕವಾಗಿ ಚರ್ಚೆಯನ್ನು ನಿಲ್ಲಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿ, ರಾಜನಾಥ್ ಸಿಂಗ್ ಮತ್ತು ಅಮಿತ್ ಶಾ ಅವರ ಮಧ್ಯಪ್ರವೇಶವನ್ನು ಖಂಡಿಸಿದರು. ಇದನ್ನೂ ಓದಿ: ದಕ್ಷಿಣ ಪಿನಾಕಿನಿ ಜಲವಿವಾದ – ನ್ಯಾಯಮಂಡಳಿ ಸ್ಥಾಪನೆಗೆ ಸುಪ್ರೀಂ ಆದೇಶ

ಸರ್ಕಾರದ ಆಕ್ಷೇಪಗಳಿಗೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ಜನರಲ್ ನರವಾಣೆ ಅವರ ಪುಸ್ತಕದ ಆಧಾರದ ಮೇಲೆ ಮ್ಯಾಗಜಿನ್‌ನಲ್ಲಿ ಪ್ರಕಟವಾದ ವರದಿಯನ್ನು ತಾವು ಉಲ್ಲೇಖಿಸಿದ್ದಾಗಿ ಸ್ಪಷ್ಟಪಡಿಸಿದರು. ತಮ್ಮ ಉಲ್ಲೇಖವು ನಂಬಿಕಸ್ಥ ಮೂಲದ ಮೇರೆಗೆ ಇದ್ದು, ಆಡಳಿತ ಪಕ್ಷದ ಒಬ್ಬ ಸಂಸದರು ಕಾಂಗ್ರೆಸ್ ವಿರುದ್ಧ ಆರೋಪ ಮಾಡಿದ ಕಾರಣಕ್ಕೆ ಈ ವಿಷಯವನ್ನು ಪ್ರಸ್ತಾಪಿಸಬೇಕಾಯಿತು ಎಂದು ಸಮರ್ಥಿಸಿಕೊಂಡರು. ಇದನ್ನೂ ಓದಿ: ಗ್ಯಾಸ್ ಸೋರಿಕೆಯಾಗಿ ಅಗ್ನಿ ಅವಘಡ – ಒಂದೇ ಕುಟುಂಬದ ಮೂವರು ದುರ್ಮರಣ

ಈ ವೇಳೆ ಸಮಾಜವಾದಿ ಪಕ್ಷದ ಸಂಸದ ಅಖಿಲೇಶ್ ಯಾದವ್ ಕೂಡ ರಾಹುಲ್ ಗಾಂಧಿಗೆ ಬೆಂಬಲ ವ್ಯಕ್ತಪಡಿಸಿದರು. ಚೀನಾ ಸಂಬಂಧಿತ ವಿಷಯ ಅತ್ಯಂತ ಸೂಕ್ಷ್ಮವಾದದ್ದು. ರಾಷ್ಟ್ರೀಯ ಭದ್ರತೆ ಮತ್ತು ವಿದೇಶಾಂಗ ನೀತಿಗೆ ಸಂಬಂಧಿಸಿದ ವಿಷಯಗಳ ಮೇಲೆ ಪ್ರತಿಪಕ್ಷ ನಾಯಕನಿಗೆ ಸಂಪೂರ್ಣವಾಗಿ ಮಾತನಾಡಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಪಿಸ್ತೂಲ್‌ನಿಂದ ಶೂಟ್ ಮಾಡಿದ್ರೂ ಯಾರಿಗೂ ಗೊತ್ತಾಗಿಲ್ಲ ಯಾಕೆ? – ಚರ್ಚೆಗೆ ಗ್ರಾಸವಾಗಿದ್ದ ಪ್ರಶ್ನೆಗೆ ಸಿಕ್ತು ಉತ್ತರ

ಬಳಿಕ ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವಿನ ವಾಗ್ವಾದ ತೀವ್ರಗೊಂಡು, ಘೋಷಣೆಗಳು ಮತ್ತು ಅಡ್ಡಿಪಡಿಸುವಿಕೆಗಳಿಂದ ಸದನದಲ್ಲಿ ಕೆಲಕಾಲ ಗದ್ದಲವುಂಟಾಯಿತು. ಈ ಎಲ್ಲದರ ನಡುವೆಯೂ ರಾಹುಲ್ ಗಾಂಧಿ ತಮ್ಮ ಭಾಷಣವನ್ನು ಮುಂದುವರಿಸಿದರು. ಇದನ್ನೂ ಓದಿ: 18 ಕೋಟಿ ದರೋಡೆ ಕೇಸ್‌ | ಮನೆ ಕೆಲಸಕ್ಕೆ ಸೇರಿ ಸಂಚು – ಕೆಲಸ ಬಿಟ್ಟು ದರೋಡೆ ಮಾಡಿದ್ದ ನೇಪಾಳಿ ಗ್ಯಾಂಗ್‌!

TAGGED:congressLadakhlok sabhaManoj Mukund NaravaneNew DelhiRahul Gandhiಕಾಂಗ್ರೆಸ್ನವದೆಹಲಿಬಿಜೆಪಿರಾಹುಲ್ ಗಾಂಧಿಲಡಾಖ್ ಗಡಿ ಸಂಘರ್ಷಲೋಕಸಭೆ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Delhi Assembly Bomb Threat
Crime

ದೆಹಲಿ ವಿಧಾನಸಭೆಗೆ ಮತ್ತೆ ಬಾಂಬ್ ಬೆದರಿಕೆ

Public TV
By Public TV
7 minutes ago
vinod raj auto drivers
Bengaluru Rural

ಆಟೋ ಚಾಲಕರ ಕಷ್ಟಕ್ಕೆ ಮಿಡಿದ ನಟ ವಿನೋದ್ ರಾಜ್

Public TV
By Public TV
17 minutes ago
Jail
Court

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಜೈಲು ಶಿಕ್ಷೆ, 7 ಲಕ್ಷ ದಂಡ

Public TV
By Public TV
18 minutes ago
nitish kumar bihar cm oath
Latest

ರಾಜ್ಯಸಭೆ ಸದಸ್ಯರಾಗಿ ಶುಕ್ರವಾರ ನಿತೀಶ್ ಕುಮಾರ್ ಪ್ರಮಾಣ ಸ್ವೀಕಾರ – ಏ.14 ರಂದು ಬಿಹಾರಕ್ಕೆ ನೂತನ ಸಿಎಂ?

Public TV
By Public TV
35 minutes ago
congress flag
Latest

ಬಾರಾಮತಿ ಉಪಚುನಾವಣೆ; ಸ್ಪರ್ಧೆಯಿಂದ ಹಿಂದೆ ಸರಿದ ಕಾಂಗ್ರೆಸ್

Public TV
By Public TV
47 minutes ago
karnataka High Court
Bengaluru City

ಶಾಲೆಗಳಲ್ಲಿ `ವಂದೇ ಮಾತರಂ’ ಆರು ಚರಣಗಳೊಂದಿಗೆ ಹಾಡೋದು ಕಡ್ಡಾಯ – ಹೈಕೋರ್ಟ್‌ನಿಂದ ಅರ್ಜಿ ವಜಾ

Public TV
By Public TV
48 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?