ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ (KPTCL) ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ (Managing Director) ಹಿರಿಯ ಐಎಎಸ್ ಅಧಿಕಾರಿ ಡಾ. ವಿ. ರಾಮ್ ಪ್ರಸಾತ್ ಮನೋಹರ್ (V. Ram Prasath Manohar) ಅವರು ಇಂದು ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು.
ರಾಜ್ಯ ಸರ್ಕಾರದ ಆದೇಶದನ್ವಯ, ಅವರು ಪ್ರಸ್ತುತ ನಿರ್ವಹಿಸುತ್ತಿರುವ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ (BWSSB) ಅಧ್ಯಕ್ಷ ಸ್ಥಾನದ ಜೊತೆಗೆ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆಯನ್ನು ನೆರವೇರಿಸಲಿದ್ದಾರೆ. ಇದನ್ನೂ ಓದಿ: ಲಕ್ಕುಂಡಿ ಅಭಿವೃದ್ಧಿಗೆ ವಿದೇಶದ ಡೆಕ್ಕನ್ ಹೆರಿಟೇಜ್ ಫೌಂಡೇಶನ್ ಆಸಕ್ತಿ
ಈ ಹಿಂದೆ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಶ್ರೀ ಪಂಕಜ್ ಕುಮಾರ್ ಪಾಂಡೆ ಅವರು ಡಾ. ಮನೋಹರ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಇದನ್ನೂ ಓದಿ: ಸಿನಿಮಾ ಸ್ಟೈಲ್‌ನಲ್ಲಿ ಯುವಕನನ್ನ ಅಡ್ಡಗಟ್ಟಿ 31 ಲಕ್ಷ ದರೋಡೆ – ಬೆಚ್ಚಿಬೀಳಿಸುವ ದೃಶ್ಯ ಸೆರೆ

