Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಯಮ ಪಾಲಿಸದಿದ್ರೆ ದೇಶ ಬಿಟ್ಟು ತೊಲಗಿ – ವಾಟ್ಸಪ್‌ಗೆ ಸುಪ್ರೀಂ ವಾರ್ನಿಂಗ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Court | ನಿಯಮ ಪಾಲಿಸದಿದ್ರೆ ದೇಶ ಬಿಟ್ಟು ತೊಲಗಿ – ವಾಟ್ಸಪ್‌ಗೆ ಸುಪ್ರೀಂ ವಾರ್ನಿಂಗ್‌

Court

ನಿಯಮ ಪಾಲಿಸದಿದ್ರೆ ದೇಶ ಬಿಟ್ಟು ತೊಲಗಿ – ವಾಟ್ಸಪ್‌ಗೆ ಸುಪ್ರೀಂ ವಾರ್ನಿಂಗ್‌

Public TV
Last updated: February 3, 2026 1:06 pm
Public TV
Share
2 Min Read
WhatsApp
SHARE

ನವದೆಹಲಿ: ʻದೇಶದ ನಿಯಮಗಳನ್ನ ಪಾಲಿಸಲು ಸಾಧ್ಯವಾಗದಿದ್ರೆ, ದೇಶ ಬಿಟ್ಟು ತೊಲಗಿ ಎಂದು ವಾಟ್ಸಪ್‌ ಒಡೆತನದ ಮೆಟಾ (Meta) ಸಂಸ್ಥೆಗೆ ಸುಪ್ರೀಂ ಕೋರ್ಟ್‌ (Supreme Court) ಖಡಕ್‌ ಎಚ್ಚರಿಕೆ ನೀಡಿದೆ. ಗೌಪ್ಯತೆ ಉಲ್ಲಂಘನೆ ಆರೋಪ ಕೇಳಿಬಂದ ಹಿನ್ನೆಲೆ ಕೋರ್ಟ್‌ ಈ ಎಚ್ಚರಿಕೆ ನೀಡಿದೆ.

ಮೆಟಾ ಒಡೆತದ ವಾಟ್ಸಪ್‌ (WhatsApp) ಇಂದು ವಿಶ್ವದ ಜನಪ್ರಿಯ ಮೆಸೆಂಜರ್‌ ಅಪ್ಲಿಕೇಶನ್‌ ಆಗಿದೆ. ಇಂಟರ್ನೆಟ್‌ ಇದ್ದರೆ ವಿಶ್ವದ ಯಾವುದೇ ಮೂಲೆಯಲ್ಲಿರುವ ವ್ಯಕ್ತಿಯೊಂದಿಗೆ ಸಂಪರ್ಕ ಸಾಧಿಸಬಹುದಾಗಿದೆ. ಫೋಟೋ, ವಿಡಿಯೋ ಧ್ವನಿ ಸಂದೇಶ, ಲೈವ್‌ ಲೊಕೇಷನ್‌ಗಳನ್ನ ಹಂಚಿಕೊಳ್ಳುವ ಸಾಧನವಾಗಿದೆ. ಆದ್ರೆ ಮೆಟಾ ಸಂಸ್ಥೆಯು ಉದ್ದೇಶಿತ ಜಾಹೀರಾತಿಗಾಗಿ ಬಳಕೆದಾರರ ಖಾಸಗಿ ಡೇಟಾವನ್ನ ಹಂಚಿಕೊಳ್ಳುತ್ತಿದೆ ಎನ್ನುವ ಆರೋಪ ಕೇಳಿಬಂದ ಹಿನ್ನೆಲೆ ಸುಪ್ರೀಂ ಕೋರ್ಟ್‌ ದೇಶ ತೊರೆಯುವಂತೆ ಎಚ್ಚರಿಕೆ ಕೊಟ್ಟಿದೆ. ಇದನ್ನೂ ಓದಿ: ವೈಯಕ್ತಿಕ ಬಳಕೆಗೆ ಆಮದು ಮಾಡಿಕೊಳ್ಳುವ ಎಲ್ಲಾ ಸರಕುಗಳ ಮೇಲಿನ ಸುಂಕ 20%ನಿಂದ 10%ಗೆ ಇಳಿಕೆ

WhatsApp scam

ʻವಾಟ್ಸಪ್‌ನ 2021 ರ ಗೌಪ್ಯತೆ ನೀತಿʼಗೆ ಸಂಬಂಧಿಸಿದ ಅರ್ಜಿಯನ್ನ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌ ಅವರ ನೇತೃತ್ವದ ತ್ರಿಸದಸ್ಯ ಪೀಠವು, OTT ಸಂದೇಶ ಪ್ಲಾಟ್‌ಫಾರ್ಮ್‌ನಲ್ಲಿ ಗೌಪ್ಯತೆ ದುರುಪಯೋಗಕ್ಕಾಗಿ ಭಾರತದ ಸ್ಪರ್ಧಾ ಆಯೋಗವು ವಿಧಿಸಿದ್ದ 213 ಕೋಟಿ ರೂ. ದಂಡವನ್ನ ಎತ್ತಿಹಿಡಿದಿದೆ.

ಮುಂದುವರಿದು.. ಬಹುರಾಷ್ಟ್ರೀಯ ಕಂಪನಿಯ ವ್ಯವಹಾರ ಹಿತಾಸಕ್ತಿಗಳಿಗಾಗಿ ನಾಗರಿಕರ ಗೌಪ್ಯತೆಯ ಹಕ್ಕನ್ನು ರಾಜೀ ಮಾಡಿಕೊಳ್ಳಲಾಗುವುದಿಲ್ಲ ಎಂದು ಎಚ್ಚರಿಸಿದೆ. ಪೀಠವು ಫೆಬ್ರವರಿ 10 ರಂದು ಈ ವಿಷಯದ ಕುರಿತು ವಿವರವಾದ ಆದೇಶಗಳನ್ನು ನೀಡುವುದಾಗಿ ಹೇಳಿದೆ. ಇದನ್ನೂ ಓದಿ: ಸೆಮಿಕಂಡಕ್ಟರ್ ಮಿಷನ್ ವಿಸ್ತರಣೆ – 40 ಸಾವಿರ ಕೋಟಿ ರೂ. ಮೀಸಲು, ಹೆಚ್ಚುವರಿ 10 ಸಾವಿರ ಕೋಟಿ ಘೋಷಣೆ

whatsapp spyware

ಕೋರ್ಟ್‌ ಹೇಳಿದ್ದೇನು?
ಮೆಟಾ ಸಂಸ್ಥೆಯನ್ನ ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಕೋರ್ಟ್‌, ಬಹುರಾಷ್ಟ್ರೀಯ ಕಂಪನಿಯೊಂದರ ವ್ಯವಹಾರ ಹಿತಾಸಕ್ತಿಗಾಗಿ ನಾಗರಿಕರ ಗೌಪ್ಯತೆಯನ್ನ ರಾಜೀ ಮಾಡಿಕೊಳ್ಳಲು ಅನುಮತಿಸುವುದಿಲ್ಲ. ಸುರಕ್ಷತೆಯನ್ನ ಖಚಿತಪಡಿಸಿಕೊಳ್ಳದಿದ್ದರೆ ಅಂತಹ ಡೇಟಾ ಹಂಚಿಕೆಯನ್ನ ನಿಷೇಧಿಸಬಹುದು ಎಂದು ಹೇಳಿದೆ.

ನಮ್ಮ ದೇಶದ ಗೌಪ್ಯತೆಯ ಜೊತೆ ನೀವು ಆಟವಾಡಲು ಸಾಧ್ಯವಿಲ್ಲ. ನಮ್ಮ ಡೇಟಾದ (Data) ಒಂದೇ ಒಂದು ಅಂಕಿ-ಅಂಶವನ್ನೂ ಹಂಚಿಕೊಳ್ಳಲು ನಾವು ನಿಮಗೆ ಅವಕಾಶ ಕೊಡೋದಿಲ್ಲ. ದೇಶದ ಕಾನೂನುಗಳನ್ನ ಪಾಲಿಸಲು ವಿಫಲವಾದ್ರೆ ಕಂಪನಿ ಭಾರತವನ್ನ ತೊರೆಯಬಹುದು ಎಂದು ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಅಶ್ಲೀಲ ವಿಚಾರ ಪೋಸ್ಟ್‌ಗಳಿಗೆ ವೇದಿಕೆ – ಎಕ್ಸ್‌ಗೆ ಕೇಂದ್ರದಿಂದ ನೋಟಿಸ್‌

ಸರ್ಕಾರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ವಾಣಿಜ್ಯ ಉದ್ದೇಶಕ್ಕಾಗಿ ಬಳಕೆದಾರರ ಡೇಟಾವನ್ನ ಹಂಚಿಕೊಳ್ಳುವ ಶೋಷಣಾ” ನೀತಿಯನ್ನು ಟೀಕಿಸಿದರು. ಬಳಿಕ ಮುಖ್ಯ ನ್ಯಾಯಾಧೀಶರು, ನಮ್ಮ ಸಂವಿಧಾನ ಅನುಸರಿಸಲು ಸಾಧ್ಯವಾಗದಿದ್ದರೆ, ಭಾರತ ತೊರೆಯಿರಿ. ನಾಗರಿಕರ ಗೌಪ್ಯತೆಗೆ ಧಕ್ಕೆಯಾಗಲು ನಾವು ಬಿಡುವುದಿಲ್ಲ ಎಂದು ಪ್ರತಿಕ್ರಿಯಿಸಿದರು.

whatsapp spyware photo

ಮೆಟಾ ಮತ್ತು ವಾಟ್ಸಾಪ್ ಪರವಾಗಿ ಹಿರಿಯ ವಕೀಲ ಮುಕುಲ್ ರೋಹಟ್ಗಿ ಮತ್ತು ಹಿರಿಯ ವಕೀಲ ಅಖಿಲ್ ಸಿಬಲ್ ವಾದ ಮಂಡಿಸಿದರು. ಎಲ್ಲಾ ಸಂದೇಶಗಳು ‘ಎಂಡ್-ಟು-ಎಂಡ್ ಎನ್‌ಕ್ರಿಪ್ಟ್’ ಆಗಿವೆ, ಕಂಪನಿಗಳೂ ಸಹ ವಿಷಯವನ್ನ ನೋಡಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಪ್ರತಿವಾದಿಸಿದರು.

ವಾದ ಪ್ರತಿವಾದಗಳನ್ನು ಆಲಿಸಿದ ಪೀಠವು ಫೆಬ್ರವರಿ 10 ರಂದು ಈ ವಿಷಯದ ಕುರಿತು ವಿವರವಾದ ಆದೇಶಗಳನ್ನು ನೀಡುವುದಾಗಿ ಹೇಳಿತು.

TAGGED:Exit IndiametaSupreme CourtwhatsappWhatsApp Policyಡೇಟಾಮೆಟಾ ಸಂಸ್ಥೆವಾಟ್ಸಪ್ಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World
Dhurandhar 2 teaser
Dhurandhar 2 Teaser; ಹಮ್ಜಾ ಆಗಿ ರಣವೀರ್ ಸಿಂಗ್ ಮತ್ತೆ ಮಾಸ್ ಎಂಟ್ರಿ
Bollywood Cinema Latest Top Stories
dhanush maari sai pallavi
8 ವರ್ಷಗಳ ಬಳಿಕ ಒಂದಾದ ರೌಡಿಬೇಬಿ
Cinema Latest South cinema Top Stories
Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories

You Might Also Like

Delhi Capitals Women
Cricket

WPL 2026: ಗುಜರಾತ್‌ ವಿರುದ್ಧ 7 ವಿಕೆಟ್‌ಗಳ ಜಯ – ಫೈನಲ್‌ಗೆ ಡೆಲ್ಲಿ ಲಗ್ಗೆ

Public TV
By Public TV
11 minutes ago
Residential School
Bengaluru City

ವಸತಿ ಶಾಲೆ ಅರ್ಜಿ ಸಲ್ಲಿಸಲು ಫೆ.7ರವರೆಗೆ ಅವಕಾಶ – ಕೆಇಎ

Public TV
By Public TV
26 minutes ago
kea
Bengaluru City

ಎಂ-ಫಾರ್ಮಾ: ಫೆ.7ರಿಂದ ಇಚ್ಛೆ/ಆಪ್ಷನ್ ನಮೂದಿಸಲು ಅವಕಾಶ- ಕೆಇಎ

Public TV
By Public TV
55 minutes ago
HD Kumaraswamy
Latest

ತಂಬಾಕು ಮೇಲಿನ 18% ಅಬಕಾರಿ ಸುಂಕ ಹಿಂದಕ್ಕೆ – ಬೆಳೆಗಾರರು ನಿರಾಳ

Public TV
By Public TV
1 hour ago
Karwar Suicide
Crime

ರಿಶೇಲ್ ಡಿಸೋಜಾ ಆತ್ಮಹತ್ಯೆ ಕೇಸ್ – ಜೆಡಿಎಸ್ ಮುಖಂಡೆ ಪುತ್ರ ಮತ್ತೆರಡು ದಿನ ಪೊಲೀಸ್ ಕಸ್ಟಡಿಗೆ

Public TV
By Public TV
2 hours ago
Kolar Flex
Districts

ಕೋಲಾರ ನಗರದಲ್ಲಿ ಫ್ಲೆಕ್ಸ್, ಬ್ಯಾನರ್ ಅಳವಡಿಕೆಗೆ ಅನುಮತಿ ಕಡ್ಡಾಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?