ಬಾಗಲಕೋಟೆ: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯ ತಲೆ ಬೋಳಿಸಿರುವ ಘಟನೆ ಬಾಗಲಕೋಟೆ (Bagalakote) ಜಿಲ್ಲೆ ಜಮಖಂಡಿ ತಾಲ್ಲೂಕಿನ ತೊದಲಬಾಗಿ ಗ್ರಾಮದಲ್ಲಿ ನಡೆದಿದೆ.
ಉಮೇಶ್ ಕೊಟ್ಟಲಗಿ ತನ್ನ ಪತ್ನಿಯ ತಲೆ ಬೋಳಿಸಿದ ವ್ಯಕ್ತಿ. ಆರೋಪಿಯನ್ನು ಸಾವಳಗಿ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಉ.ಕನ್ನಡ ಸಿದ್ದಾಪುರದಲ್ಲಿ ಕೊಲೆ ಕೇಸ್ – ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಪೊಲೀಸರ ವಶಕ್ಕೆ
ಆರೋಪಿ ತನ್ನ ಪತ್ನಿ ನಡತೆಯ ಮೇಲೆ ಸಂಶಯ ವ್ಯಕ್ತಪಡಿಸಿದ್ದ. ಪತ್ನಿಗೆ ಕಬ್ಬು ಕಡಿಯುವ ಕೊಯ್ತಾ ತೋರಿಸಿ ಬೆದರಿಕೆ ಹಾಕಿದ್ದ. ಬಳಿಕ ತಲೆ ಬೋಳಿಸಿ ವಿಕೃತಿ ಮೆರೆದಿದ್ದಾನೆ.

