Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ

Cinema

ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ

Public TV
Last updated: February 4, 2026 7:34 pm
Public TV
Share
4 Min Read
jayant kaikini bengaluru international film festival
SHARE

– ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ

ಗೀತರಚನೆ ಎನ್ನುವುದು ಕಲಿಯೋದು, ಕಲಿಸೋದಲ್ಲ. ಕನ್ನಡ ಕಾವ್ಯ, ಸಾಹಿತ್ಯ ಓದಬೇಕು. ಜನಜೀವನ ನೋಡಬೇಕು. ಬರವಣಿಗೆ ಎನ್ನುವುದು ನಮ್ಮ ಸುಪ್ತಮನಸ್ಸಿನಿಂದ ಬರುವಂತದ್ದು. ಅದಕ್ಕೆ ಯಾವುದೇ ತರಬೇತಿ, ಕಾರ್ಯಾಗಾರ ಇರುವುದಿಲ್ಲ ಎಂದು ಖ್ಯಾತ ಸಾಹಿತಿ ಮತ್ತು ಚಿತ್ರಸಾಹಿತಿ ಜಯಂತ್‌ ಕಾಯ್ಕಿಣಿ (Jayant Kaikini) ಅಭಿಪ್ರಾಯಪಟ್ಟಿದ್ದಾರೆ.

17ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (Bengaluru International Film Festival) ನಡೆದ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗೀತರಚನೆಯನ್ನು ಕಲಿಸುವುದಕ್ಕಾಗುವುದಿಲ್ಲ. ಕನಸ್ಸಿನಲ್ಲಿ ಒಮ್ಮೊಮ್ಮೆ ಅಮೂರ್ತವಾಗಿ ಏನೇನೋ ಕಾಣುತ್ತದಲ್ಲ, ಗೀತರಚನೆಯೂ ಹಾಗೆಯೇ. ನಿರ್ದೇಶನ, ನಟನೆಯ ತರಹ ಗೀತರಚನೆಗೆ ತರಬೇತಿ ತೆಗೆದುಕೊಳ್ಳುವುದಕ್ಕೆ ಆಗುವುದಿಲ್ಲ. ತರಬೇತಿ ಪಡೆದರೆ, ಜಿಮಿನಂದ ಬಂದ ಒಂದೇ ತರಹ ದೇಹಗಳ ಹಾಗೆ ಕಾಣುತ್ತದೆ. ಬ್ಯೂಟಿ ಪಾರ್ಲರ್‌ನಿಂದ ಬಂದ ವಧುವಿನ ಹಾಗೆ ಎಲ್ಲವೂ ಒಂದೇ ರೀತಿ ಕಾಣುತ್ತದೆ. ನಿಮ್ಮ ಛಾಪು ಮೂಡಿಸಬೇಕೆಂದರೆ ಸ್ವತಂತ್ರವಾಗಿ ಬರೆಯುವುದಕ್ಕೆ ಕಲಿಯಬೇಕು ಎಂದು ಹೇಳಿದರು. ಇದನ್ನೂ ಓದಿ: ʼಸುಖೀಭವ’ ಎನುತ್ತಾ ಸ್ಯಾಂಡಲ್‌ವುಡ್‌ಗೆ ಬಂದ ಡೈರೆಕ್ಟರ್ ಎನ್.ಕೆ ರಾಜೇಶ್ ನಾಯ್ಡು

ಕಾಲಕ್ಕೆ ತಕ್ಕ ಹಾಗೆ ಬದಲಾಗುತ್ತಿರಬೇಕು. ಹಳೆಯದೆಲ್ಲಾ ಚೆನ್ನಾಗಿತ್ತು, ಈಗ ಚೆನ್ನಾಗಿಲ್ಲ ಎನ್ನುವುದು ತಪ್ಪು. ಅಂದರೆ ನಾವು ಸಹ ಮೊದಲ ಹಾಗಿಲ್ಲ ಎಂದರ್ಥ. ಎಲ್ಲಾ ಕಡೆ ಸಾಕಷ್ಟು ಬದಲಾವಣೆಗಳಾಗಿವೆ. ಮೊದಲು ನಮ್ಮೂರಿನಲ್ಲಿ ಸಾಕಷ್ಟು ಹಿರಿಯರಿದ್ದರು. ಈಗ ನಾನೇ ಹಿರಿಯ ಎನ್ನುವಂತಾಗಿದೆ. ಸಮಯ ಬದಲಾಗುತ್ತಿರುತ್ತದೆ. ತಂತ್ರಜ್ಞಾನ ಬೆಳೆಯುತ್ತಿದೆ. ನಾವು ಸಹ ಬದಲಾಗಬೇಕಾಗುತ್ತದೆ. ಹಳೆಯದೇ ಚೆನ್ನಾಗಿತ್ತು, ಈಗ ಚೆನ್ನಾಗಿಲ್ಲ ಎನ್ನುವುದು ತಪ್ಪು ಎಂದು ಹೇಳಿದರು.

Jayant Kaikini Film Festival

ನಾವು ಮೊದಲಿಂದಲೂ ಸಿನಿಮಾ ಹಾಡುಗಳ ಪ್ರೇಮಿ. ನಾವೆಲ್ಲಾ ಹಾಡುಗಳನ್ನು ಗುನುಗಿ ಬೆಳೆದವರು. ಗೊಣಗುವುದಕ್ಕಿಂತ ಗುನುಗುವುದು ಮೇಲು ಎಂದು ನಮ್ಮ ತಂದೆ ಹೇಳುತ್ತಿದ್ದರು. ನಾನು 52ನೇ ವಯಸ್ಸಿಗೆ ಸಿನಿಮಾದಲ್ಲಿ ಗೀತರಚನೆಕಾರನಾದೆ. ಯೌವ್ವನದಲ್ಲಿದ್ದಾಗ ಗಂಭಿರವಾಗಿ ʼಕೋಟಿತೀರ್ಥʼ ಅಂತ ಬರೆದೆ. ವಯಸ್ಸಾದ ಮೇಲೆ ಸಿನಿಮಾ ಹಾಡುಗಳನ್ನು ಬರೆಯುವಂತಾಯಿತು ಎಂದರು.

ಆರಂಭದಲ್ಲಿ ಸಿನಿಮಾ ಹಾಡುಗಳನ್ನು ಬರೆಯುವಾಗ ಒಂದು ಉಡಾಫೆ ಇತ್ತು. ಸಿನಿಮಾ ಹಾಡುಗಳನ್ನು ಬರೆಯುವುದು ಬಹಳ ಸುಲಭ ಎಂದು ಭಾವಿಸಿದ್ದೆ. ಹಾಡುಗಳನ್ನು ಬರೆಯುವುದಕ್ಕೆ ಶುರು ಮಾಡಿದ ಮೇಲೆ ಅದರ ಕಷ್ಟ ಗೊತ್ತಾಯ್ತು. ಸಿನಿಮಾದಲ್ಲಿ ಟ್ಯೂನ್‌ ಹಾಕಿದ ಮೇಲೆ, ಮೀಟರ್‌ಗೆ ತಕ್ಕ ಹಾಗೆ ಸಾಹಿತ್ಯವನ್ನು ರಚಿಸಲಾಗುತ್ತದೆ. ಅದು ದೊಡ್ಡ ಸವಾಲಾಗಿತ್ತು. ನಮ್ಮಲ್ಲಿ ಕೋಟ್ಯಂತರ ಹಾಡುಗಳಿವೆ. ಅದರಲ್ಲಿ ವಿಭಿನ್ನವಾದುದನ್ನೇನೋ ಬರೆಯಬೇಕು. ಅದರಲ್ಲಿ ಶೇ.97ರಷ್ಟು ಪ್ರೇಮಗೀತೆಗಳು. ಅದರಲ್ಲಿ ವಿಭಿನ್ನವಾಗಿ ಅದೆಷ್ಟು ಬರೆಯೋಕೆ ಸಾಧ್ಯ? ಒಲವು, ನಲಿವು, ಚೆಲುವು, ಹಸಿರು, ಉಸಿರು… ಈ ಪದಗಳನ್ನೇ ಪುನಃ ಬಳಸಬೇಕು. ಅದನ್ನು ಹೊರತುಪಡಿಸಿ, ಹೊಸ ಎಕ್ಸ್‌ಪ್ರೆಶನ್‌ ಸೃಷ್ಟಿಸುವುದು ನಿಜಕ್ಕೂ ಸವಾಲಿನ ಕೆಲಸ ಎಂದು ಹೇಳಿದರು. ಇದನ್ನೂ ಓದಿ: Dhurandhar 2 Teaser; ಹಮ್ಜಾ ಆಗಿ ರಣವೀರ್ ಸಿಂಗ್ ಮತ್ತೆ ಮಾಸ್ ಎಂಟ್ರಿ

ಸಿನಿಮಾಗಳಿಗೆ ಹಾಡುಗಳನ್ನು ಬರೆಯುವುದಕ್ಕೆ ಪ್ರಾರಂಭಿಸಿದ ಮೇಲೆ ಅನುಕೂಲವೇ ಆಯಿತು. ಚಿತ್ರಗೀತೆಗಳನ್ನು ಬರೆಯುವುದಕ್ಕೆ ಪ್ರಾರಂಭಿಸಿದ ಮೇಲೆ, ನಾನು ಸಿನಿಮಾಗೆ ಹೆಚ್ಚು ಬರೆಯುತ್ತಿರುವುದರ ಬಗ್ಗೆ ಹಿತೈಷಿಗಳು ಬೇಸರ ವ್ಯಕ್ತಪಡಿಸಿದರು. ಸಿನಿಮಾ ಹಾಡುಗಳನ್ನು ಬರೆಯುತ್ತಿದ್ದೇನೆ ಎಂದು ನಾನು ಬೇರೆ ಸಾಹಿತ್ಯವನ್ನು ಕಡೆಗಣಿಸಿಲ್ಲ. ನನ್ನ ಬೇರೆ ಮರವಣಿಗೆಯನ್ನು ಮುಂದುವರೆಸಿದ್ದೇನೆ. ಇದರಿಂದ ಅನಾಮಿಕ ಶ್ರೋತೃಗಳು ಹೆಚ್ಚಾಗುವುದರ ಜೊತೆಗೆ ಒಂಥರಾ Reverse Osmosis ಪ್ರಕ್ರಿಯೆ ಶುರುವಾಯ್ತು. ನನ್ನ ಕಥೆ, ಕವನ ಸಂಕಲನಗಳನ್ನು ಓದದ ಬಹಳಷ್ಟು ಹೊಸ ತಲೆಮಾರಿನವರು, ಹಾಡುಗಳನ್ನು ಕೇಳಿ ಇಷ್ಟಪಟ್ಟು, ನನ್ನ ಪುಸ್ತಕಗಳನ್ನು ಕೊಂಡು ಓದಿದರು. ಇದರಿಂದ ನನ್ನ ಪುಸ್ತಕಗಳ ಮರುಮುದ್ರಣವಾದಂತಾಯಿತು. ವ್ಯಕ್ತ, ಶ್ರಾವ್ಯ ಮತ್ತು ದೃಶ್ಯ ಹೀಗೆ ಮೂರೂ ಗುಣಗಳಿರುವ ಒಂದು ಅಪರೂಪದ ಮಾಧ್ಯಮ ಸಿನಿಮಾ. ಸಿನಿಮಾದಲ್ಲಿ ವ್ಯಕ್ತ, ಶ್ರಾವ್ಯ ಮತ್ತು ದೃಶ್ಯ ಎಂಬ ಮೂರೂ ಗುಣಗಳೂ ಇವೆ. ಒಬ್ಬ ನಿರ್ದೇಶಕನಿಗೆ ಇದರ ಅರಿವು ಮತ್ತು ಹಿಡಿತವಿದ್ದರೆ, ತೆರೆಯ ಮೇಲೆ ಅದ್ಭುತವಾದುದನ್ನು ಸೃಷ್ಟಿಸಬಹುದು ಎಂದರು.

ನನಗೆ ಸಿನಿಮಾ ಆಸಕ್ತಿ ಬಾಲ್ಯದಲ್ಲೇ ಹುಟ್ಟಿತ್ತು. ಅದಕ್ಕೆ ಮೂಲ ಕಾರಣ ನಮ್ಮೂರಿನ ಟೂರಿಂಗ್‌ ಟಾಕೀಸ್‌. ಬಾಲ್ಯದಲ್ಲಿ ʼಕಠಾರಿ ವೀರʼ, ʼಬೀದಿ ಬಸವಣ್ಣʼ, ʼಚೂರಿ ಚಿಕ್ಕಣ್ಣʼ, ʼಚಂದವಳ್ಳಿಯ ತೋಟʼ ಮುಂತಾದ ಚಿತ್ರಗಳನ್ನು ನೋಡಿ ಬೆಳೆದಂತೆ. ಜಾವೇದ್‌ ಅಖ್ತರ್‌ ಅವರು ಹೇಳಿದಂತೆ ಸಿನಿಮಾನೇ ನಮ್ಮ ಧರ್ಮ. ಹಲವು ಆದರ್ಶ ಗುಣಗಳನ್ನು ಸಿನಿಮಾದಿಂದ ನೋಡಿ ಕಲಿತವರು ನಾವು. ʼದೀವಾರ್‌ʼ ಚಿತ್ರದಲ್ಲಿ ಬರುವ ʼಮೇರೇ ಪಾಸ್‌ ಮಾʼ ಎನ್ನುವಂತೆ, ನನ್ನ ಹತ್ತಿರ ಏನಿದೆ ಎಂದು ಕೇಳಿದರೆ, ʼಮೇರೆ ಪಾಸ್‌ ಸಿನಿಮಾ ಹೇ …ʼ ಎನ್ನುತ್ತೇನೆ. ಭಾರತದಲ್ಲಿ ನಾವು ಸಿನಿಮಾದ ಜೊತೆಗೆ ಬೆರೆತು ಹೋಗಿದ್ದೇವೆ ಎಂದು ತಿಳಿಸಿದರು.

ಇತ್ತೀಚಿನ ವರ್ಷಗಳಲ್ಲಿ ʼಪೊನ್ನಿಯನ್‌ ಸೆಲ್ವನ್‌ʼ ಚಿತ್ರದ ಕನ್ನಡ ಡಬ್ಬಿಂಗ್‌ ಅವತರಣಿಕೆಗೆ ಸಾಹಿತ್ಯ ರಚಿಸಿದ್ದು ಸವಾಲಿನ ಕೆಲಸವಾಗಿತ್ತು. ಎ.ಆರ್‌.ರೆಹಮಾನ್‌ ಸಂಗೀತ ನಿರ್ದೇಶನದ ‘ಪೊನ್ನಿಯನ್‌ ಸೆಲ್ವನ್‌ʼ ಸಿನಿಮಾದ ಎರಡೂ ಭಾಗಗಳು ಸೇರಿ 14 ಹಾಡುಗಳಿವೆ. ನಾನು ಭಾಷಾಂತರ ಮಾಡುವುದಿಲ್ಲ, ಸ್ವಂತವಾಗಿ ಬರೆಯುವುದಕ್ಕೆ ಅವಕಾಶ ಕೊಟ್ಟರೆ ಬರೆಯುವುದಾಗಿ ನಿರ್ದೇಶಕ ಮಣಿರತ್ನಂ ಅವರಿಗೆ ಹೇಳಿದ್ದೆ. ಅವರು ಸಹ ಸನ್ನಿವೇಶ ಹೇಳಿ, ಅದಕ್ಕೆ ಪೂರಕವಾಗಿ ಬರೆಯುವುದಕ್ಕೆ ಸಂಪೂರ್ಣ ಸ್ವಾತಂತ್ರ್ಯ ಕೊಟ್ಟರು. ಕನ್ನಡದಲ್ಲಿ ಪ್ರೀತಿ, ಪ್ರೇಮ ಎನ್ನಲು ತುಟಿಗಳನ್ನು ತಾಗಿಸಬೇಕು. ತಮಿಳಿನಲ್ಲಿ ‘ಕಾದಲ್‌ʼ ಎನ್ನುವಾಗ ತುಟಿಗಳೇ ತಾಗುವುದಿಲ್ಲ. ತುಟಿಗಳು ಸೇರಿಸದೆ ಪ್ರೀತಿ ಹೇಗೆ ಮಾಡುತ್ತೀರಿ ಎಂದು ಮಣಿರತ್ನಂ ಅವರನ್ನು ತಮಾಷೆ ಮಾಡಿದ್ದಾಗಿ ನೆನಪಿಸಿಕೊಂಡರು. ಈ ಕಾರ್ಯಕ್ರಮವನ್ನು ಪ್ರಶಾಂತ್‌ ಪಂಡಿತ್‌ ನಡೆಸಿಕೊಟ್ಟರು.

TAGGED:bengaluruBengaluru International Film FestivalJayant Kaikiniಜಯಂತ್ ಕಾಯ್ಕಿಣಿಬೆಂಗಳೂರುಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ
Share This Article
Facebook Whatsapp Whatsapp Telegram

Cinema news

Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories

You Might Also Like

GBA
Bengaluru City

ಜಿಬಿಎ ಚುನಾವಣೆ – ಸುಪ್ರೀಂಗೆ ಅಫಿಡವಿಟ್ ಸಲ್ಲಿಸಿದ ರಾಜ್ಯ ಸರ್ಕಾರ

Public TV
By Public TV
12 minutes ago
Love with Nadaf Bhumika commits suicide Bagalkote Town
Bagalkot

ನದಾಫ್‌ ಜೊತೆ ಪ್ರೀತಿ – ಮನೆಯಲ್ಲೇ ಭೂಮಿಕಾ ಆತ್ಮಹತ್ಯೆ

Public TV
By Public TV
49 minutes ago
Yogesh Gowda Sister Akkamma
Dharwad

ನಮ್ಮ ತಮ್ಮನ ಸಾವಿನ ಪ್ರಕರಣ ಎಲ್ಲಾ ರಾಜಕಾರಣಿಗಳಿಗೆ ತಕ್ಕ ಪಾಠವಾಗಬೇಕು: ಯೋಗೇಶ್ ಗೌಡ ಸಹೋದರಿ

Public TV
By Public TV
50 minutes ago
RR Nagar Son Kills Mother
Bengaluru City

ಅರೆ ಪ್ರಜ್ಞಾವಸ್ಥೆಯಲ್ಲಿದ್ದ ತಾಯಿಯನ್ನು ಬಹುಮಹಡಿ ಕಟ್ಟಡದಿಂದ ತಳ್ಳಿ ಕೊಲೆಗೈದ ಮಗ

Public TV
By Public TV
1 hour ago
ಟಿಸಿಎಸ್‌ನಲ್ಲಿದ್ದ ಬಂಧಿತ ನೌಕರರು
Crime

ಕಾರ್ಪೋರೇಟ್‌ ಜಿಹಾದ್‌ಗೆ ಮಲೇಷ್ಯಾ ಲಿಂಕ್‌ – ವಿದೇಶಿ ಉದ್ಯೋಗ ಮಾರ್ಗದರ್ಶಕನಾಗಿದ್ದ ಧಾರ್ಮಿಕ ಬೋಧಕ!

Public TV
By Public TV
2 hours ago
Infosys 2
Crime

ಇನ್ಫೋಸಿಸ್‌ನಲ್ಲೂ ಕಾರ್ಪೋರೇಟ್‌ ಜಿಹಾದ್‌ ಆರೋಪ – ಮಹಾ ಸಚಿವರಿಗೆ ದೂರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?