Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರೆಂಟ್, ಮೂಲಭೂತ ಸೌಕರ್ಯ ಇಲ್ಲ – ದುಬಾರೆ ಸಾಕಾನೆ ಶಿಬಿರದ ಮಾವುತ, ಕಾವಾಡಿಗಳ ಸಮಸ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕರೆಂಟ್, ಮೂಲಭೂತ ಸೌಕರ್ಯ ಇಲ್ಲ – ದುಬಾರೆ ಸಾಕಾನೆ ಶಿಬಿರದ ಮಾವುತ, ಕಾವಾಡಿಗಳ ಸಮಸ್ಯೆ

Districts

ಕರೆಂಟ್, ಮೂಲಭೂತ ಸೌಕರ್ಯ ಇಲ್ಲ – ದುಬಾರೆ ಸಾಕಾನೆ ಶಿಬಿರದ ಮಾವುತ, ಕಾವಾಡಿಗಳ ಸಮಸ್ಯೆ

Public TV
Last updated: February 4, 2026 10:36 pm
Public TV
Share
2 Min Read
Madikeri Dubare Elephant Camp
SHARE

– ಪಬ್ಲಿಕ್ ಟಿವಿ ರಿಯಾಲಿಟಿ ಚೆಕ್‌ನಲ್ಲಿ ಸಮಸ್ಯೆಗಳ ಸರಮಾಲೆ ಅನಾವರಣ

ಮಡಿಕೇರಿ: ದೂರದಿಂದ ಬಂದು ದೋಣಿಯಲ್ಲಿ ವಿಹರಿಸಿ, ಆನೆ ಸಫಾರಿ ಮಾಡಿ ಒಂದಷ್ಟು ಹೊತ್ತು ನಿಸರ್ಗದ ಮಡಿಲಲ್ಲಿ ಮೈಮರೆತು ನೀರಾಟವಾಡಿ ತಮ್ಮ ಊರುಗಳಿಗೆ ಹಿಂದಿರುಗುವ ಪ್ರವಾಸಿಗರಿಗೆ ದುಬಾರೆ (Dubare Elephant Camp) ಒಂದು ಅದ್ಭುತ ತಾಣ. ಇಷ್ಟೊಂದು ಖ್ಯಾತಿ ಪಡೆದ ಪ್ರವಾಸಿ ತಾಣ ಮೂಲಭೂತ ಸೌಕರ್ಯದಿಂದ ವಂಚಿತವಾಗಿದೆ.

ಹೌದು, ಕೊಡಗು (Kodagu) ಜಿಲ್ಲೆಯ ವಿರಾಜಪೇಟೆ (Virajpete) ತಾಲೂಕಿನಲ್ಲಿರುವ ದುಬಾರೆ ಆನೆ ಶಿಬಿರದಲ್ಲಿ ಸಾಕಾನೆಗಳಿವೆ. ಇಷ್ಟೊಂದು ಖ್ಯಾತಿ ಪಡೆದ ಪ್ರವಾಸಿ ತಾಣ ಮಾತ್ರ ಮೂಲಭೂತ ಸೌಕರ್ಯದಿಂದ ವಂಚಿತವಾಗಿದೆ ಎಂಬುದು ಇಲ್ಲಿಗೆ ಭೇಟಿ ನೀಡುವ ಪ್ರತಿಯೊಬ್ಬ ಪ್ರವಾಸಿಗನ ಕಣ್ಣಿಗೆ ರಾಚುವ ಕಟುಸತ್ಯ. ಕಾರಣ ಇಲ್ಲಿನ ಮಾವುತ, ಕಾವಡಿಗಳು ಇರುವ ಮನೆಗಳಿಗೆ ಸರಿಯಾದ ರೀತಿಯಲ್ಲಿ ಮೂಲಭೂತ ಸೌಕರ್ಯಗಳು ಇಲ್ಲದೇ ಕಂಗಾಲಾಗಿದ್ದಾರೆ. ಅಲ್ಲದೇ ಇಲ್ಲಿರುವ ನೂರಾರು ಕುಟುಂಬಗಳ ಮಕ್ಕಳಿಗೆ ಅಂಗನವಾಡಿ ಕೇಂದ್ರ ಇದೆ. ಅದರೆ ಅಂಗನವಾಡಿ ಕೇಂದ್ರಕ್ಕೆ ಶಿಕ್ಷಕರು ಇಲ್ಲದೇ ಕಳೆದ ಎರಡು ವರ್ಷಗಳಿಂದ ಅಂಗನವಾಡಿಯನ್ನು ಮುಚ್ಚಲಾಗಿದೆ. ಇದನ್ನೂ ಓದಿ: ಫೆ.9ರಿಂದ ಮೆಟ್ರೋ ದರ ಏರಿಕೆಗೆ ಸರ್ಕಾರ ಒಪ್ಪಿಗೆ?

Madikeri Dubare Elephant Camp anganwadi

ಇನ್ನೂ ದುಬಾರೆ ಸಾಕಾನೆ ಶಿಬಿರದಲ್ಲಿ ವಾಸ ಮಾಡುತ್ತಿರುವ ನೂರಾರು ಕುಟುಂಬಗಳಿಗೆ ಸರಿಯಾದ ರೀತಿಯಲ್ಲಿ ವಿದ್ಯುತ್ ಇಲ್ಲದೇ ಕತ್ತಲೆಯಲ್ಲಿ ಕಾಲ ಕಳೆಯುವ ಪರಿಸ್ಥಿತಿ ಎದುರಾಗಿದೆ. ಈ ಬಗ್ಗೆ ನಿಮ್ಮ ಪಬ್ಲಿಕ್ ಟಿವಿ ರಿಯಾಲಿಟಿ ಚೆಕ್ ಮಾಡುವ ಸಂದರ್ಭದಲ್ಲಿ ಇಲ್ಲಿನ ಹಲವಾರು ಸಮಸ್ಯೆಗಳ ಸರಮಾಲೆಯೇ ಅನಾವರಣಗೊಂಡಿದೆ. 2014-15ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಸೌರಶಕ್ತಿಯಿಂದ ಪ್ರತಿ ಮನೆ ಮನೆಗಳಿಗೆ ವಿದ್ಯುತ್ ಸರಬರಾಜು ಮಾಡಲು ಸುಮಾರು 100 ಸೋಲಾರ್ ಪ್ಯಾನಲ್‌ಗಳನ್ನು ಹಾಕಲಾಗಿದೆ. ಆದರೆ ಸರಿಯಾದ ರೀತಿಯಲ್ಲಿ ನಿರ್ವಹಣೆ ಇಲ್ಲದೇ ಇದೀಗ ಎಲ್ಲವೂ ಕಾಡುಪಾಲು ಆಗಿದೆ. ಇದನ್ನೂ ಓದಿ: ಕೇಂದ್ರ ಸಚಿವರಿಗೆ ವಿಶ್ವಾಸಘಾತುಕವೆಂದ ರಾಹುಲ್ ಗಾಂಧಿ – ನೀವು ದೇಶದ ಶತ್ರುವೆಂದ ಸಚಿವ ರವನೀತ್ ಬಿಟ್ಟು

Madikeri Dubare Elephant Camp 2

ಅಷ್ಟೇ ಅಲ್ಲದೇ ಇತ್ತಿಚಿನ ದಿನಗಳಲ್ಲಿ ವಿದ್ಯುತ್ ಕಂಬಗಳನ್ನು ಅಳವಡಿಸಿ ವಿದ್ಯುತ್ ಸರಬರಾಜು ಮಾಡಲು ವಿದ್ಯುತ್ ಇಲಾಖೆ ಮುಂದಾಗಿದೆ. ಆದರೆ ವಿದ್ಯುತ್ ಇಲಾಖೆಯ ಅಧಿಕಾರಿಗಳು ಪ್ರತಿ ಮನೆಮನೆಗಳಿಗೆ ವಿದ್ಯುತ್ ಲೈನ್ ಎಳೆಯುವುದಕ್ಕೆ ಮರಗಳ ಮೇಲೆ ವಿದ್ಯುತ್ ಕೇಬಲ್ ತೆಗೆದುಕೊಂಡು ಹೋಗಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಗಾಳಿ ಮಳೆ ಹೆಚ್ಚಾಗಿ ಮರಗಳು ಧರಾಶಾಹಿ ಆದರೆ ಸಾಕಾನೆಗಳಿಗೆ ಮಾವುತರಿಗೆ ಜೀವ ಹಾನಿಯಾಗುವುದರಲ್ಲಿ ಯಾವುದೇ ಅನುಮಾನ ಇಲ್ಲ. ಇದನ್ನೂ ಓದಿ: U19 World Cup: ಆರನ್ ಜಾರ್ಜ್ ಶತಕ – ದಾಖಲೆಯ ಚೇಸ್‌ನೊಂದಿಗೆ ಫೈನಲ್‌ಗೆ ಭಾರತ ಲಗ್ಗೆ

ದುಬಾರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಣ್ಯ ಸಿಬ್ಬಂದಿ ಇನ್ನೂ ಕೂಡ ಆದಿಮಾನವರಂತೆ ಜೀವನ ಸಾಗಿಸುತ್ತಿದ್ದಾರೆ. ಇಲ್ಲಿರುವ ವಸತಿಗೃಹಗಳಿಗೆ ವಿದ್ಯುತ್ ಸೌಲಭ್ಯವಿಲ್ಲ. ಹಾಗಾಗಿ ಸೀಮೆಣ್ಣೆ ದೀಪದಲ್ಲಿ ಯಾವುದೇ ಆಧುನಿಕ ಸೌಕರ್ಯವಿಲ್ಲದೆ ದಿನ ಕಳೆಯುವಂತಾಗಿದೆ. ಎಲ್ಲದಕ್ಕೂ ಕಾವೇರಿ ನದಿಯನ್ನು ದೋಣಿಯಲ್ಲಿ ದಾಟಿ ಹೋಗಬೇಕಾಗಿರುವುದರಿಂದ ಅನಾರೋಗ್ಯ ಅಥವಾ ಇನ್ನೇನಾದರೂ ಅವಘಡ ಸಂಭವಿಸಿದರೆ ದೇವರೇ ಗತಿ. ಬೇರೆ ಕಡೆಗಳಿಗೆ ಹೋಲಿಸಿದರೆ ದುಬಾರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳದ್ದು ಮಾತ್ರ ನಾಯಿಪಾಡಾಗಿದೆ ಎಂಬುದು ಮಾವುತ, ಕಾವಾಡಿಗಳ ಅಳಲು. ಇದನ್ನೂ ಓದಿ: ನಾನು ಜೀವನದ ಕೊನೆಗಾಲದಲ್ಲಿದ್ದೇನೆ, ಈ ವೃದ್ಧನ ಮನವಿಗೆ ಸ್ಪಂದಿಸಿ ಕರ್ನಾಟಕ ರಕ್ಷಿಸಿ: ಹೆಚ್‌ಡಿಡಿ

Madikeri Dubare Elephant Camp 1

ಒಟ್ಟಾರೆ ದುಬಾರೆ ಆನೆ ಶಿಬಿರವು ಹತ್ತು ಹಲವು ಸಮಸ್ಯೆಗಳಿಂದ ನರಳುತ್ತಿದ್ದು, ಅಗತ್ಯ ಸೌಲಭ್ಯವನ್ನು ಕಲ್ಪಿಸಿಕೊಡುವ ಮೂಲಕ ಅಭಿವೃದ್ಧಿಯತ್ತ ಸಂಬಂಧಿಸಿದವರು ಗಮನಹರಿಸಬೇಕಾದ ಅಗತ್ಯವಿದೆ. ಇದನ್ನೂ ಓದಿ: ಫೆ.4 ರಿಂದ 10 ರವರೆಗೆ ಶ್ರೀ ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನೇಮೋತ್ಸವ

TAGGED:dubare elephant campKavadigasKodagumadikeriMahoutTourist placeಕೊಡಗುದುಬಾರೆ ಸಾಕಾನೆ ಶಿಬಿರಪ್ರವಾಸಿ ತಾಣಮಡಿಕೇರಿಮೂಲಭೂತ ಸೌಕರ್ಯ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
7 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
7 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
8 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
8 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
10 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?