– ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ
ಗದಗ: ಕ್ರೂಸರ್ ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ (Accident) ಮೂವರು ರೈತ (Farmers) ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರೋಣ (Rona )ತಾಲೂಕಿನ ಜಿಗಳೂರ ಕ್ರಾಸ್ ಬಳಿ ನಡೆದಿದೆ.
ಮೃತರನ್ನು ಗಜೇಂದ್ರಗಡದ ಶಿವಾಜಿಪೇಟೆ ನಿವಾಸಿಗಳಾದ ಅನ್ನಪೂರ್ಣ (56), ಸಂಗೀತ ಹೊಸಮನಿ (48), ಮರಿಯಂಬೂ ಹುನಗುಂದ (55) ಎಂದು ಗುರುತಿಸಲಾಗಿದೆ. ಇವರು ರೋಣಕ್ಕೆ ಕಡಲೆ ಕೀಳಲು ಹೊರಟಿದ್ದರು. ಅಪಘಾತದಲ್ಲಿ ಗಾಯಗೊಂಡವರನ್ನು ಗದಗದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ವಿಜಯಪುರ | ಸರ್ವಿಸ್ ಸೆಂಟರ್‌ನಲ್ಲಿ ಅಗ್ನಿ ಅವಘಡ – 20ಕ್ಕೂ ಹೆಚ್ಚು ಕಾರುಗಳು ಭಸ್ಮ
ಸ್ಥಳಕ್ಕೆ ರೋಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆಸ್ಪತ್ರೆ ಮುಂಭಾಗದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್ ವಿವಾದ

