– ವಿಪಕ್ಷಗಳ ಪ್ರಶ್ನೆಗೆ ಉತ್ತರಕೊಡದೇ ಸರ್ಕಾರ ದಾರಿ ತಪ್ಪಿಸುತ್ತಿದೆ: ಪ್ರಿಯಾಂಕಾ ಗಾಂಧಿ
ನವದೆಹಲಿ: ನಿನ್ನೆ (ಫೆ. 4-ಬುಧವಾರ) ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಭಾಷಣ ರದ್ದುಗೊಳಸಿದ್ದನ್ನು, ಇಂದು (ಫೆ.5-ಗುರುವಾರ) ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳು ತೀವ್ರವಾಗಿ ತರಾಟೆಗೆ ತೆಗೆದುಕೊಂಡವು. ಪ್ರತಿಭಟನೆ ತೀವ್ರಗೊಂಡ ಬೆನ್ನಲ್ಲೇ ಸಂಸತ್ತಿನ ಸದನ ಮುಂದೂಡಿದ್ದ ಲೋಕಸಭೆ ಸ್ಪೀಕರ್ ಪ್ರಧಾನಿ ಮೋದಿ ಭಾಷಣ ರದ್ದುಗೊಳಿಸಿದ್ದಕ್ಕೆ ಕಾರಣವನ್ನೂ ತಿಳಿಸಿದ್ದಾರೆ.
You have given me an opportunity to speak about the democratic principles of this country.
Parliament means the Lok Sabha and the Rajya Sabha. As per our Constitution, we have two chambers: one is the Lok Sabha and the other is the Rajya Sabha.
But the Leader of the… pic.twitter.com/A0SuL66OqE
— Congress (@INCIndia) February 5, 2026
ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ದೈಹಿಕ ದಾಳಿ ನಡೆಸಲು ಕಾಂಗ್ರೆಸ್ ಸಂಸದರು ಯೋಜನೆ ರೂಪಿಸಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದುಬಂದಿತ್ತು. ವಿರೋಧ ಪಕ್ಷದ ಸಂಸದರು ಅನಿರೀಕ್ಷಿತವಾದದ್ದನ್ನು ಮಾಡಬಹುದು ಎಂಬ ಮಾಹಿತಿ ಇತ್ತು. ಪ್ರಜಾಪ್ರಭುತ್ವದ ದೇವಾಲಯದಲ್ಲಿ ಅಹಿತಕರ ಘಟನೆಯನ್ನ ತಡೆಯಲು ಸದನವನ್ನು ಮುಂದೂಡಲಾಯಿತು. ಅಲ್ಲದೇ ಪ್ರಧಾನಿ ಮೋದಿ ಭಾಷಣ ರದ್ದುಗೊಳಿಸಲೂ ಇದೇ ಕಾರಣ ಎಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ.
ವಿಪಕ್ಷಗಳಿಂದ ತೀವ್ರ ಖಂಡನೆ
ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣ ರದ್ದುಗೊಳಿಸಿದ್ದನ್ನ ಖಂಡಿಸಿ ಸಂಸತ್ತಿನಲ್ಲಿ ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದವು. ಈ ವೇಳೆ ಲೋಕಸಭೆಯಲ್ಲಿ ಗದ್ದಲ ಉಂಟಾಗಿದ್ದರಿಂದ ಸದನವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಗಿತ್ತು. ರಾಜ್ಯಸಭೆಯಲ್ಲೂ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಸರ್ಕಾರದ ನಡೆಯನ್ನು ಖಂಡಿಸಿದರು.
ಪ್ರಧಾನಿ ಮೋದಿ ಭಾಷಣ ರದ್ದುಗೊಂಡಿದ್ದಕ್ಕೆ ವಿರೋಧ ಪಕ್ಷದ ಸದಸ್ಯರು ಪ್ರತಿಭಟನೆ ನಡೆಸಿದ್ದು, ಸದನದ ಬಾವಿಗಳಿದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ಸ್ಪೀಕರ್ ಸದನವನ್ನ ಮಧ್ಯಾಹ್ನಕ್ಕೆ ಮುಂದೂಡಿದರು.
ರಾಜ್ಯಸಭೆ ಕಲಾಪ ಆರಂಭವಾಗುತ್ತಿದ್ದಂತೇ ಮಾತನಾಡಿದ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವುದಿಲ್ಲ, ವಿಪಕ್ಷ ನಾಯಕ ಮಾತನಾಡುತ್ತೇನೆ ಅಂದ್ರೆ ಅದಕ್ಕೂ ಅವಕಾಶ ಕೊಡುತ್ತಿಲ್ಲ. ಸರ್ಕಾರದ ಈ ನಡೆ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಚಾರ ಎಂದು ವಾಗ್ದಾಳಿ ನಡೆಸಿದರು.
ಆದಾಗ್ಯೂ, ಸಂಜೆ 5 ಗಂಟೆಗೆ ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ ಎಂದು ವರದಿಗಳು ಹೇಳಿವೆ.
ಪ್ರಿಯಾಂಕ ಗಾಂಧಿ ತಿರುಗೇಟು
ಇನ್ನೂ ಸ್ಪೀಕರ್ ಹೇಳಿಕೆಯನ್ನ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ತಳ್ಳಿಹಾಕಿದರು. ಇದು ಶುದ್ಧ ಸುಳ್ಳು ಎಂದು ಹೇಳಿದರು. ವಿರೋಧ ಪಕ್ಷಗಳು ಎತ್ತಿರುವ ವಿಷಯಗಳಿಗೆ ಸರಿಯಾಗಿ ಉತ್ತರ ಕೊಡದೇ ಸರ್ಕಾರ ದಾರಿ ತಪ್ಪಿಸುತ್ತಿದೆ ಎಂದು ಟೀಕಿಸಿದರು.



