ಚಾಮರಾಜನಗರ: ಮಹಾ ಶಿವರಾತ್ರಿ (Maha Shivratri) ಹಿನ್ನೆಲೆ ಏಳು ಮಲೆಯ ಒಡೆಯ ಮಲೆ ಮಾದಪ್ಪನ ದರ್ಶನಕ್ಕೆ ಕಾಲ್ನಡಿಗೆಯಲ್ಲಿ ಲಕ್ಷಾಂತರ ಭಕ್ತರ ದಂಡೇ ಹರಿದು ಬರಲಿದೆ. ಭಕ್ತರ ಸುರಕ್ಷತೆಗೆ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಅರಣ್ಯ ಇಲಾಖೆ ಸಜ್ಜಾಗಿದೆ. ಕಾರಣ ಮಲೆಹದೇಶ್ವರ ಬೆಟ್ಟದ (Male Mahadeshwara Hill) ಸುತ್ತಮುತ್ತ ಚಿರತೆ ಆತಂಕ ಮನೆ ಮಾಡಿದೆ.
ಚಿರತೆ ಆತಂಕ ಮಧ್ಯೆ ಮಲೆಮಹದೇಶ್ವರ ಬೆಟ್ಟಕ್ಕೆ ಭಕ್ತರು ಪಾದಯಾತ್ರೆ ಕೈಗೊಂಡಿದ್ದಾರೆ. ಇಂದಿನಿಂದ 20ರವರೆಗೆ ನಡೆಯಲಿರುವ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಶಿವರಾತ್ರಿ ಜಾತ್ರೆ ಹಿನ್ನೆಲೆಯಲ್ಲಿ ಸಾವಿರಾರು ಭಕ್ತರು ಭಾಗವಹಿಸುವ ನಿರೀಕ್ಷೆ ಇದೆ. ಯಾವುದೇ ಅನಾಹುತ ಸಂಭವಿಸದಂತೆ ಜಿಲ್ಲಾಡಳಿತ ಹಾಗೂ ಅರಣ್ಯ ಇಲಾಖೆ ಸಮನ್ವಯದಲ್ಲಿ ಭದ್ರತಾ ಕ್ರಮಗಳನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸಿದೆ. ಇದನ್ನೂ ಓದಿ: ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಮೆಟ್ರೋ ನಿಲ್ದಾಣಗಳ ಹತ್ತಿರದಲ್ಲೇ ಬಸ್ ನಿಲ್ದಾಣ ಓಪನ್
ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ತೆರಳುತ್ತಿದ್ದ ಮಂಡ್ಯದ ಪ್ರವೀಣ್ ಚಿರತೆ ದಾಳಿಗೆ ಇತ್ತೀಚೆಗೆ ಬಲಿಯಾಗಿದ್ದ. ಇದು ಭಕ್ತರಲ್ಲಿ ಆತಂಕ ಮೂಡಿಸಿತ್ತು. ಈ ಘಟನೆ ಬಳಿಕ ಜಿಲ್ಲಾಡಳಿತ ಹಾಗೂ ಅರಣ್ಯ ಇಲಾಖೆ ಎಚ್ಚೆತ್ತುಕೊಂಡು ಹೈಅಲರ್ಟ್ ಘೋಷಿಸಿದೆ. ಶಿವರಾತ್ರಿ ಜಾತ್ರಾ ಮಹೋತ್ಸವ ಹಿನ್ನೆಲೆ ಪಾದಯಾತ್ರಿಗಳ ಸುರಕ್ಷತೆಗೆ ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದೆ. ಚಾಮರಾಜನಗರ ಜಿಲ್ಲಾಡಳಿತ ತುರ್ತು ಸಭೆ ನಡೆಸಿ ಸುರಕ್ಷತಾ ವ್ಯವಸ್ಥೆಯನ್ನು ಬಲಪಡಿಸಿದೆ. ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮಾಡುವ ಭಕ್ತರ ಮೇಲೆ ಹದ್ದಿನ ಕಣ್ಣು ಇಡಲು ಅರಣ್ಯ ಸಿಬ್ಬಂದಿ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ಕಾರ್ಯಾಚರಣೆ ಆರಂಭಿಸಿವೆ. ತಾಳಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟದ ಮಾರ್ಗ ಮಧ್ಯೆ ಹೈ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ಬೈಕ್‌ನಲ್ಲಿ ತೆರಳುವಾಗ ಏಕಾಏಕಿ ಆನೆ ದಾಳಿ – ಅಪ್ಪ ಸಾವು, ಮಗನ ಸ್ಥಿತಿ ಗಂಭೀರ
ಇನ್ನೂ ಪಾದಯಾತ್ರೆ ಮಾಡುವ ಭಕ್ತರು ಗುಂಪು ಗುಂಪಾಗಿ ಮಾತ್ರ ಬೆಟ್ಟ ಏರಬೇಕು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ. ಕಾಡಿನ ಒಳಗೆ ಒಬ್ಬರೇ ತೆರಳಬಾರದು, ಮೂತ್ರ ವಿಸರ್ಜನೆ ಅಥವಾ ಬಹಿರ್ದೆಸೆಗೆ ಕಾಡಿನೊಳಗೆ ಹೋಗದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ. ಡ್ರೋನ್ ಕ್ಯಾಮೆರಾ ಮೂಲಕವೂ ನಿಗಾವಹಿಸಲು ಕ್ರಮ ಕೈಗೊಳ್ಳಲಾಗಿದೆ. ಪ್ರತಿ ಕಿಲೋಮೀಟರ್‌ಗೂ ಒಂದೊಂದು ತಂಡವನ್ನು ನಿಯೋಜಿಸಲಾಗಿದೆ. ಒಟ್ಟು 8 ತಂಡಗಳನ್ನು ರಚಿಸಲಾಗಿದ್ದು, ಪ್ರತಿಯೊಂದು ತಂಡಕ್ಕೂ ಬಂದೂಕು, ವಾಕಿಟಾಕಿ, ಮಚ್ಚು, ಲಾಠಿ ಹಾಗೂ ಪಟಾಕಿಗಳನ್ನು ವಿತರಿಸಲಾಗಿದೆ. ಡಿಆರ್‌ಎಫ್‌ಒ, ಪೊಲೀಸ್ ಸಿಬ್ಬಂದಿ, ವಾಚರ್ ಹಾಗೂ ಎಪಿಸಿ ಕ್ಯಾಂಪ್ ಸಿಬ್ಬಂದಿ ಸೇರಿ ಭದ್ರತಾ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಜೊತೆಗೆ ಮಲೆ ಮಹದೇಶ್ವರ ಬೆಟ್ಟ ಪ್ರಾಧಿಕಾರದ ಐದು ಸಿಬ್ಬಂದಿ ಈ ಕಾರ್ಯಾಚರಣೆಗೆ ನೇತೃತ್ವವಹಿಸಿದ್ದಾರೆ. ಇದನ್ನೂ ಓದಿ: ಸೂರ್ಯ, ಸಿರಾಜ್ ಮಿಂಚು; ಯುಎಸ್‌ಎ ವಿರುದ್ಧ ಭಾರತಕ್ಕೆ 29 ರನ್‌ಗಳ ಗೆಲುವು
ಅಲ್ಲದೇ ಬೆಂಗಳೂರು ರಾಮನಗರ, ಮಂಡ್ಯ ಸೇರಿದಂತೆ ನಾನಾ ಭಾಗದಿಂದ ಕಾವೇರಿ ನದಿ ದಾಟಿ ಕಾಲ್ನಡಿಗೆಯಲ್ಲಿ ಭಕ್ತರು ಮಲೆ ಮಾದಪ್ಪನ ಸನ್ನಿಧಿಗೆ ಬರುತ್ತಾರೆ. ಆ ಹಿನ್ನೆಲೆ ಡಿಸಿ, ಎಸ್ಪಿ ಹಾಗೂ ಅರಣ್ಯಾಧಿಕಾರಿಗಳು ಕೂಡ ಸ್ಥಳ ಪರಿಶೀಲನೆ ನಡೆಸಿ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಿದ್ದಾರೆ. ಇದನ್ನೂ ಓದಿ: ಕೇರಳದಲ್ಲಿ ಕಾರಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಕೊಡಗಿನ ಉದ್ಯಮಿ – ಹೆಂಡತಿ ಮಕ್ಕಳ ಸ್ಥಿತಿ ಗಂಭೀರ

