ಬೆಂಗಳೂರು: ಪ್ರೀತಿಸಿದ ಯುವತಿ (Lover) ಕೈ ಕೊಟ್ಟ ಹಿನ್ನೆಲೆ ಮನನೊಂದು ಬಾಡಿ ಬಿಲ್ಡರ್ (Body Builder) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮಿ ಲೇಔಟ್ (Mahalakshmi Layout) ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕಿರಣ್ (26) ಮೃತ ಬಾಡಿ ಬಿಲ್ಡರ್. ಕಿರಣ್ ಮೂರು ವರ್ಷಗಳಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಆದರೆ ಯುವತಿ ಬೇರೆ ಯುವಕನೊಂದಿಗೆ ತನ್ನ ಮದುವೆ ನಿಶ್ಚಯವಾಗಿದೆ ಎಂದು ಮದುವೆಯ ಆಮಂತ್ರಣ ಪತ್ರಿಕೆ ಹಾಗೂ ಹೊಸ ಸೀರೆಯನ್ನು ತೋರಿಸಿದ್ದಳು. ಇದರಿಂದ ಮನನೊಂದ ಕಿರಣ್ ಮನೆಗೆ ಬಂದು ರೂಂನ ಬಾಗಿಲು ಲಾಕ್ ಮಾಡಿಕೊಂಡು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮನೆಯ ಡೋರ್ ಓಪನ್ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಇದನ್ನೂ ಓದಿ: ಸ್ಪೇನ್ ಟಿಕೆಟ್ ಬುಕ್ ಮಾಡಿದ್ದ ಸಿರಾಜ್ ಮುಂಬೈನಲ್ಲಿ ಲ್ಯಾಂಡ್! – ಕೊನೆ ಕ್ಷಣದಲ್ಲಿ ಭಾರತವನ್ನು ಸೇರಿದ್ದು ಹೇಗೆ?
ಹಲವು ವರ್ಷಗಳಿಂದ ಜಿಮ್ ಟ್ರೈನರ್, ಬಾಡಿ ಬಿಲ್ಡಿಂಗ್ ಮಾಡುತ್ತಿದ್ದ ಕಿರಣ್ ವ್ಯಾಲೆಂಟೈನ್ಸ್ ಡೇಗೆ ಪ್ರೇಯಸಿಗೆ ಗಿಫ್ಟ್ ಕೊಡಲು ಸಿದ್ಧತೆ ಮಾಡಿಕೊಂಡಿದ್ದ. ಆದರೆ ಯುವತಿಗೆ ಮದುವೆಯ ನಿಶ್ಚಯವಾಗಿರುವ ವಿಷಯ ತಿಳಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿರುವ ಕಿರಣ್, ಆತ್ಮಹತ್ಯೆಗೆ ಪ್ರೇಯಸಿ ಹಾಗೂ ಆಕೆಯ ತಾಯಿಯೇ ಕಾರಣ ಅಂತಾ ಬರೆದಿದ್ದು, ತನ್ನ ಮೊಬೈಲ್ ಪಾಸ್‌ವರ್ಡ್ ಅನ್ನು ಕೂಡ ಪತ್ರದಲ್ಲಿ ಉಲ್ಲೇಖಿಸಿ ಬಳಿಕ ನೇಣಿಗೆ ಶರಣಾಗಿದ್ದಾನೆ. ಇದನ್ನೂ ಓದಿ: ಬಳ್ಳಾರಿಯಲ್ಲಿ ಉತ್ಖನನ ವೇಳೆ 3,000 ವರ್ಷಗಳಷ್ಟು ಹಳೆಯ ಮಾನವನ ಪಳೆಯುಳಿಕೆ ಪತ್ತೆ


