ರಾಯಚೂರು: ಜಿಲ್ಲೆಯ ದೇವದುರ್ಗ (Devadurga) ತಾಲೂಕಿನ ಕರಿಗುಡ್ಡ ಬಳಿ ಆಟೋರಿಕ್ಷಾಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಗರ್ಭಿಣಿ ಸೇರಿ ಇಬ್ಬರು ಸಾವನ್ನಪ್ಪಿದ್ದು, 11 ಜನರು ಗಾಯಗೊಂಡಿದ್ದಾರೆ.
ಕರಿಗುಡ್ಡದ ಮಲ್ಲಯ್ಯ (47) ಸ್ಥಳದಲ್ಲೇ ಸಾವನ್ನಪ್ಪಿದ್ದರೆ, 8 ತಿಂಗಳ ಗರ್ಭಿಣಿ ಮೋನಮ್ಮ (24) ಚಿಕಿತ್ಸೆ ಫಲಕಾರಿಯಾಗದೇ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಪ್ರಾಣಬಿಟ್ಟಿದ್ದಾರೆ. ಇನ್ನೂ ಮೋನಮ್ಮ ಪತಿ ಅರುಣ್ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಾಲಕ ರೋಹಿತ್ (5) ಕಾಲು ಮುರಿದಿದ್ದು, ಗೋಪಾಲ್, ಬಾಳಪ್ಪ ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ಇದನ್ನೂ ಓದಿ: ಚಕ್ರ ತುಂಡಾಗಿ ತೋಟಕ್ಕೆ ನುಗ್ಗಿದ ಬಸ್ – ಪ್ರಯಾಣಿಕರು ಪಾರು
ತಿಂಥಣಿಯಿಂದ ದೇವದುರ್ಗ ಕಡೆ ಹೊರಟಿದ್ದ ಸಾರಿಗೆ ಬಸ್ ಹಿಂದಿನಿಂದ ಆಟೋರಿಕ್ಷಾಗೆ ಡಿಕ್ಕಿ ಹೊಡೆದಿದೆ. ಪರಿಣಾಮ ತಿಂಗಳ ಚೆಕ್‌ಅಪ್‌ಗಾಗಿ ಆಟೋದಲ್ಲಿ ದೇವದುರ್ಗಕ್ಕೆ ಹೊರಟಿದ್ದ ಗರ್ಭಿಣಿ ಶಿಶುಸಹಿತ ಪ್ರಾಣ ಕಳೆದುಕೊಂಡಿದ್ದಾರೆ. ಸಣ್ಣಪುಟ್ಟ ಗಾಯಗಳಾಗಿರುವ ಗಾಯಾಳುಗಳನ್ನ ದೇವದುರ್ಗದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಗಂಭೀರವಾಗಿ ಗಾಯಗೊಂಡವರನ್ನು ರಿಮ್ಸ್, ಓಪೆಕ್ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಸ್ಥಳಕ್ಕೆ ದೇವದುರ್ಗ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ಮಾಡಿದ್ದಾರೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಉದ್ಯಮಿಯ ಬರ್ಬರ ಹತ್ಯೆ

