ಬಾಲಿವುಡ್ ನಟ ರಣವೀರ್ ಸಿಂಗ್ (Ranveer Singh) ಅವರಿಗೆ ವಾಟ್ಸಪ್‌ನಲ್ಲಿ ವಾಯ್ಸ್ ಮೆಸೇಜ್ ಕಳಿಸಿ ಬೆದರಿಕೆ ಹಾಕಲಾಗಿದೆ. ದುಷ್ಕರ್ಮಿಗಳು ಕೋಟ್ಯಂತರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಬೆದರಿಕೆ ಬಂದ ನಂತರ ಮುಂಬೈ ಪೊಲೀಸರಿಗೆ ಅವರು ಮಾಹಿತಿ ನೀಡಿದ್ದು, ಅವರ ಮನೆಯ ಹೊರಗೆ ಭದ್ರತೆ ಹೆಚ್ಚಿಸಲಾಗಿದೆ. ಬೆದರಿಕೆ ಸಂದೇಶ ಕಳಿಸಿದವರು ತಮ್ಮನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನವರು (Lawrence Bishnoi Gang) ಎಂದು ಹೇಳಿಕೊಂಡಿದ್ದಾರೆ.
ಪೊಲೀಸರು ಈ ಸಂಬಂಧ ತನಿಖೆ ಆರಂಭಿಸಿದ್ದು, ವಾಯ್ಸ್ ಮೆಸೇಜ್‌ನಲ್ಲಿರೋ ಧ್ವನಿ ಯಾರದ್ದೂ ಎಂದು ಪತ್ತೆಹಚ್ಚಲು ಮುಂದಾಗಿದ್ದಾರೆ. ಬೆದರಿಕೆ ಬಂದ ನಂತರ ರಣವೀರ್ ಸಿಂಗ್ ಮತ್ತು ದೀಪಿಕಾ ಪಡುಕೋಣೆ (Deepika Padukone) ದಂಪತಿ ವಾಸಿಸುವ ಹೌಸಿಂಗ್ ಸೊಸೈಟಿಯ ನಿವಾಸದ ಬಳಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಇದನ್ನೂ ಓದಿ: ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
ಹೌಸಿಂಗ್ ಸೊಸೈಟಿ ಆಡಳಿತ ಮಂಡಳಿಯು ಪೊಲೀಸ್ ಸಿಬ್ಬಂದಿ ಮತ್ತು ಖಾಸಗಿ ಅಂಗರಕ್ಷಕರ ನಿಯೋಜನೆಯ ಬಗ್ಗೆ ಸ್ಪಷ್ಟೀಕರಣ ಕೋರಿ ಪೊಲೀಸರಿಗೆ ಪತ್ರ ಬರೆದಿದೆ. ಇದರಿಂದ ಹಲವಾರು ನಿವಾಸಿಗಳು ಅನಾನುಕೂಲತೆ ಉಂಟಾಗುತ್ತಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.
ಬಾಲಿವುಡ್ ನಟ, ನಿರ್ಮಾಪಕರಿಗೆ ಬೆದರಿಕೆಗಳು ಬರುತ್ತಿರುವುದು ಇದೇ ಮೊದಲಲ್ಲ. ಇತ್ತೀಚೆಗೆ ನಿರ್ಮಾಪಕ ರೋಹಿತ್ ಶೆಟ್ಟಿ ಅವರ ನಿವಾಸದ ಹೊರಗೆ ಗುಂಡಿನ ದಾಳಿ ನಡೆದಿತ್ತು. ದಾಳಿಯ ಹೊಣೆಯನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೊತ್ತುಕೊಂಡಿತ್ತು. ಪುಣೆ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಜನರನ್ನು ಬಂಧಿಸಿದ್ದರು. ಬಂಧಿತರು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ಗೆ ಸಂಬಂಧಿಸಿದವರು ಎಂದು ಪೊಲೀಸರು ದೃಢಪಡಿಸಿದ್ದರು. ಇದನ್ನೂ ಓದಿ: ಸೋಶಿಯಲ್ ಮೀಡಿಯಾದಲ್ಲಿ ಅಶ್ವಿನಿ, ಚೈತ್ರಾ ಪೋಸ್ಟ್ ವಾರ್!

