ನವದೆಹಲಿ: ಟಿ20 ವಿಶ್ವಕಪ್ 2026 (T20 World Cup 2026) ರಲ್ಲಿ ಮೊದಲ ಪಂದ್ಯ ಗೆದ್ದು ಶುಭಾರಂಭ ಮಾಡಿರುವ ಟೀಂ ಇಂಡಿಯಾ (Team India) ದೆಹಲಿಯಲ್ಲಿ ನಮೀಬಿಯಾ ವಿರುದ್ಧ 2ನೇ ಪಂದ್ಯಕ್ಕೆ ಸಜ್ಜಾಗುತ್ತಿದೆ. ಈ ಮಧ್ಯೆ ಟೀಂ ಇಂಡಿಯಾದ ಸ್ಫೋಟಕ ಬ್ಯಾಟರ್ ಅಭಿಷೇಕ್ ಶರ್ಮಾ (Abhishek Sharma) ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಭಿಷೇಕ್ ಶರ್ಮಾ ಹೊಟ್ಟೆಯ ಸೋಂಕಿನಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ಗುರುವಾರ ದೆಹಲಿಯಲ್ಲಿ ನಡೆಯಲಿರುವ ನಮೀಬಿಯಾ (Namibia) ವಿರುದ್ಧದ ಪಂದ್ಯಕ್ಕೆ ಅವರು ಆಡುವುದು ಅನುಮಾನ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಲೋಕಸಭಾ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ – ಮಾ.9 ರಂದು ಚರ್ಚೆ ಸಾಧ್ಯತೆ
ನಮೀಬಿಯಾ ವಿರುದ್ಧದ 2ನೇ ಟಿ20 ಪಂದ್ಯಕ್ಕೆ ಟೀಂ ಇಂಡಿಯಾ ಅಭ್ಯಾಸ ನಡೆಸಿದೆ. ಈ ವೇಳೆಯೂ ಅಭಿಷೇಕ್ ಶರ್ಮಾ ಗೈರಾಗಿದ್ದರು. ತಂಡದ ಇತರ ಸದಸ್ಯರು ಅಭ್ಯಾಸ ನಡೆಸಿದ್ದಾರೆ. ಇದನ್ನೂ ಓದಿ: ಕೆನಡಾ ಶಾಲೆಯಲ್ಲಿ ಗುಂಡಿನ ದಾಳಿ – ಶಂಕಿತ ಗನ್‌ಮ್ಯಾನ್ ಸೇರಿ 10 ಮಂದಿ ಸಾವು
ಅಭಿ ಹೊಟ್ಟೆಯ ಸೋಂಕಿನಿಂದಾಗಿ ತೀವ್ರ ನೋವಿನಿಂದ ದೆಹಲಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಮಸ್ಯೆ ಖಚಿತಪಡಿಸಿಕೊಳ್ಳಲು ಕೆಲವು ಪರೀಕ್ಷೆಗಳನ್ನು ಮಾಡಲಾಗುತ್ತಿದೆ. ಇಂದು ಅವರು ಡಿಸ್ಚಾರ್ಜ್ ಆಗುತ್ತಾರಾ ಅಥವಾ ಇಲ್ವಾ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ ನಮೀಬಿಯಾ ವಿರುದ್ಧದ ಪಂದ್ಯದಲ್ಲಿ ಆಡುವುದು ಅನುಮಾನ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ಸೂಪರ್ ಸಂಡೆ (ಫೆ.15) ಪಾಕಿಸ್ತಾನ ವಿರುದ್ಧ ಭಾರತ ಕೊಲಂಬೊದಲ್ಲಿ ಸೆಣಸಲಿದೆ. ಇದನ್ನೂ ಓದಿ: ಕಾರಿನ EMI ಕಟ್ಟಲು ದೊಡ್ಡಮ್ಮ ಕೆಲಸ ಮಾಡ್ತಿದ್ದ ಮನೆಯಲ್ಲೇ ಕಳ್ಳತನ – ಆರೋಪಿ ಅರೆಸ್ಟ್

